Saturday, February 22, 2025
Saturday, February 22, 2025

ಕುಂಭಮೇಳಕ್ಕೆ ಉಡುಪಿಯಿಂದ ವಿಶೇಷ ರೈಲು

ಕುಂಭಮೇಳಕ್ಕೆ ಉಡುಪಿಯಿಂದ ವಿಶೇಷ ರೈಲು

Date:

ಉಡುಪಿ, ಫೆ.14: ಉತ್ತರ ಪ್ರದೇಶದ ಪ್ರಯಾಗ್‌ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ವಿಶೇಷ ರೈಲು ಒದಗಿಸುವಂತೆ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ರವರಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರು ಮನವಿ ಮಾಡಿದ್ದು ಇದೀಗ ಅಧಿಕೃತ ಪ್ರಕಟಣೆಯನ್ನು ರೈಲ್ವೆ ಇಲಾಖೆ ಪ್ರಕಟಿಸಿದೆ. ದಿನಾಂಕ ಫೆಬ್ರವರಿ 17ರಂದು ಮಧ್ಯಾಹ್ನ 12.30 ಗಂಟೆಗೆ ವಿಶೇಷ ರೈಲು ಉಡುಪಿಯಿಂದ ಹೊರಟು ಕುಂಭಮೇಳದತ್ತ ಪ್ರಯಾಣ ಬೆಳೆಸಲಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಯ ಯಾತ್ರಾರ್ಥಿಗಳಿಗೆ ಇದು ಬಹಳಷ್ಟು ಉಪಕಾರಿಯಾಗಿದ್ದು ಅತ್ಯಂತ ಕಡಿಮೆ ಖರ್ಚಿನಲ್ಲಿ ಕುಂಭಮೇಳಕ್ಕೆ ಹೋಗಿ ಬರಬಹುದು. ಈ ರೈಲು ಸೇವೆಯನ್ನು ಹೆಚ್ಚಿನ ಭಕ್ತಾದಿಗಳು ಉಪಯೋಗಿಸುವಂತೆ ಕೇಳಿಕೊಳ್ಳುತ್ತೇನೆ. ಫೆ.14ರಂದು ಬೆಳಿಗ್ಗೆಯಿಂದ ಟಿಕೆಟ್ ಲಭ್ಯವಿದ್ದು ರೈಲ್ವೆ ಇಲಾಖೆಯ ವೆಬ್‌ಸೈಟ್ ಅಥವಾ ಆಯಾ ರೈಲು ನಿಲ್ದಾಣಗಳ ಟಿಕೆಟ್ ಕೌಂಟರ್‌ನಲ್ಲಿ ಟಿಕೆಟ್ ಪಡೆದುಕೊಳ್ಳಬಹುದಾಗಿದೆ ಎಂದು ಸಂಸದ ಕೋಟ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಡ್ವಕೇಟ್‌ ಡಿ. ಕೆ. ಶೆಟ್ಟಿ ನೋಟರಿ ಪಬ್ಲಿಕ್‌ ಆಗಿ ನೇಮಕ

ಮುಂಬಯಿ, ಫೆ.21: ಮುಂಬಯಿಯ ಹಿರಿಯ ವಕೀಲ ಅಡ್ವಕೇಟ್‌ ಡಿ. ಕೆ. ಶೆಟ್ಟಿ...

ರೆಡಿಮಿಕ್ಸ್ ಕಾಂಕ್ರೀಟ್ ಘಟಕಗಳ ಅಧಿಕಾರಿಗಳೊಂದಿಗೆ ಸಭೆ

ಉಡುಪಿ, ಫೆ.21: ಮಣಿಪಾಲ ಕೈಗಾರಿಕಾ ಪ್ರದೇಶದಲ್ಲಿ ಕಾರ್ಯಚರಿಸುವ ರೆಡಿಮಿಕ್ಸ್ ಕಾಂಕ್ರೀಟ್ ಘಟಕಗಳ...

ಆಗಮಡಂಬರ ಕೃತಿ ಲೋಕಾರ್ಪಣೆ

ಉಡುಪಿ, ಫೆ.21: ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠ ಉಡುಪಿ...

ವಿಕಾಸಕ್ಕಾಗಿ ಜಾನಪದ

ಉಡುಪಿ, ಫೆ.21: ಉಡುಪಿ ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಕನ್ನಡ...
error: Content is protected !!