Saturday, February 22, 2025
Saturday, February 22, 2025

ಮಲ್ಪೆಯ ದ್ವೀಪಗಳಲ್ಲಿ ಪ್ರವಾಸಿಗರ ಅನುಕೂಲಕ್ಕೆ ಮಾಸ್ಟರ್ ಪ್ಲಾನ್ ತಯಾರಿಸಿ, ಅಭಿವೃದ್ಧಿ ಕಾರ್ಯ ಕೈಗೊಳ್ಳಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಮಲ್ಪೆಯ ದ್ವೀಪಗಳಲ್ಲಿ ಪ್ರವಾಸಿಗರ ಅನುಕೂಲಕ್ಕೆ ಮಾಸ್ಟರ್ ಪ್ಲಾನ್ ತಯಾರಿಸಿ, ಅಭಿವೃದ್ಧಿ ಕಾರ್ಯ ಕೈಗೊಳ್ಳಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

Date:

ಉಡುಪಿ, ಫೆ.19: ಮಲ್ಪೆ-ಪಡುಕೆರೆಯ ದರಿಯಾ ಬಹದ್ದೂರ್ ಹಾಗೂ ಮಾಲ್ತಿದ್ವೀಪದಲ್ಲಿ ಪ್ರವಾಸಿಗರ ಅನುಕೂಲಕ್ಕಾಗಿ ಪ್ರವಾಸೋದ್ಯಮ ಚಟುವಟಿಕೆಗಳು ಸೇರಿದಂತೆ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ತಯಾರಿಸಿ, ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಮಲ್ಪೆ-ಪಡುಕೆರೆಯ ದರಿಯಾ ಬಹದ್ದೂರ್ ಹಾಗೂ ಮಾಲ್ತಿದ್ವೀಪಗಳು ಪ್ರಾಕೃತಿಕವಾಗಿ ಇದ್ದು, ಇಲ್ಲಿನ ಪ್ರಾಕೃತಿಕ ಸೌಂದರ್ಯ ಸೊಬಗು ಪ್ರವಾಸಿಗರನ್ನು ಮನಸೂರೆಗೊಳಿಸುತ್ತವೆ. ಈ ತಾಣದಲ್ಲಿ ಪ್ರವಾಸಿಗರ ಚಟುವಟಿಕೆಗೆ ಅಗತ್ಯವಿರುವ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು ಎಂದರು. ಸೋಮೇಶ್ವರ ಕಡಲ ತೀರದಲ್ಲಿ ಪ್ರವಾಸಿಗರ ಸೌಲಭ್ಯಗಳನ್ನು ಅಭಿವೃದ್ಧಿಪಡಿಸುವ ಕಾಮಗಾರಿಗಳನ್ನು ಆಧುನಿಕತೆಯ ಸ್ವರೂಪದೊಂದಿಗೆ ಜನಾಕರ್ಷಣೀಯವಾಗಿ ಕೈಗೊಳ್ಳಬೇಕು. ಪ್ರವಾಸಿಗರಿಗೆ ವಾಹನಗಳ ಪಾಕಿಂಗ್ ವ್ಯವಸ್ಥೆ, ಆಸನದ ವ್ಯವಸ್ಥೆ ಸೇರಿದಂತೆ ಮತ್ತಿತರ ಸೌಕರ್ಯಗಳನ್ನು ಕಲ್ಪಿಸಬೇಕು ಎಂದರು.

ತ್ರಾಸಿ ಬೀಚ್‌ನ ನಿರ್ವಹಣೆ ಹಾಗೂ ಜಲ ಸಾಹಸ ಚಟುವಟಿಕೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೀಡಲು ಟೆಂಡರ್ ಕರೆಯಲಾಗಿದ್ದು, ಯಾವುದೇ ಅಭ್ಯರ್ಥಿಗಳು ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸದೇ ಇರುವುದು ಕಂಡುಬಂದಿದೆ. ಕೆಲವು ಗುತ್ತಿಗೆದಾರರು ಕಡಲ ತೀರ ಹಾಗೂ ನದಿಯಲ್ಲಿಯೂ ಜಲಸಾಹಸ ಚಟುವಟಿಕೆ ಕೈಗೊಳ್ಳಲು ಹಾಗೂ ಪಾರ್ಕಿಂಗ್ ವ್ಯವಸ್ಥೆ ಸ್ಥಳ ಬದಲಾವಣೆ ಸೇರಿದಂತೆ ಮತ್ತಿತರ ವ್ಯವಸ್ಥೆಗಳನ್ನು ಕಲ್ಪಿಸಲು ಕೋರಿರುತ್ತಾರೆ. ಇವುಗಳನ್ನು ಪರಿಶೀಲಿಸಿ, ಸೂಕ್ತ ವ್ಯವಸ್ಥೆ ಸೇರಿದಂತೆ ಜಲಸಾಹಸ ಚಟುವಟಿಕೆಗಳಲ್ಲಿ ಭಾಗವಹಿಸುವವರಿಗೆ ಮೂರನೇ ವ್ಯಕ್ತಿಗಳ ವಿಮಾ ಸೌಲಭ್ಯವನ್ನು ಕಲ್ಪಿಸಲು ಸಹ ಷರತ್ತು ವಿಧಿಸಬೇಕು. ತ್ರಾಸಿ ಬೀಚ್ ಪಕ್ಕದ ರಾಷ್ಟ್ರೀಯ ಹೆದ್ದಾರಿ 66 ನ ಬೀಚ್‌ನ ಉದ್ದಕ್ಕೂ ದಾರೀದೀಪ ಅಳವಡಿಸಬೇಕು ಎಂದರು.
ಮಲ್ಪೆ ಬೀಚ್ ಪ್ರದೇಶಗಳಲ್ಲಿ ವ್ಯಾಪಾರ ಮಾಡುವ ಅಂಗಡಿಗಳು, ಕಾರ್ಟೆಜ್ ಸೇರಿದಂತೆ ಮತ್ತಿತರ ಪ್ರವಾಸೋದ್ಯಮ ಚಟುವಟಿಕೆಗಳಿಗೆ ನೀಡಲಾದ ಸ್ಥಳದ ಬಾಡಿಗೆ ಪಾವತಿಗೆ ಕ್ರಮ ಕೈಗೊಳ್ಳಬೇಕು ಎಂದರು.

ಸಭೆಯಲ್ಲಿ ಶಾಸಕ ಯಶ್‌ಪಾಲ್ ಎ ಸುವರ್ಣ ಹಾಗೂ ಗುರುರಾಜ್ ಶೆಟ್ಟಿ ಗಂಟಿಹೊಳಿ, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ., ಪೌರಾಯುಕ್ತ ಉದಯ್ ಕುಮಾರ್ ಶೆಟ್ಟಿ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಸಿ.ಯು., ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಡ್ವಕೇಟ್‌ ಡಿ. ಕೆ. ಶೆಟ್ಟಿ ನೋಟರಿ ಪಬ್ಲಿಕ್‌ ಆಗಿ ನೇಮಕ

ಮುಂಬಯಿ, ಫೆ.21: ಮುಂಬಯಿಯ ಹಿರಿಯ ವಕೀಲ ಅಡ್ವಕೇಟ್‌ ಡಿ. ಕೆ. ಶೆಟ್ಟಿ...

ರೆಡಿಮಿಕ್ಸ್ ಕಾಂಕ್ರೀಟ್ ಘಟಕಗಳ ಅಧಿಕಾರಿಗಳೊಂದಿಗೆ ಸಭೆ

ಉಡುಪಿ, ಫೆ.21: ಮಣಿಪಾಲ ಕೈಗಾರಿಕಾ ಪ್ರದೇಶದಲ್ಲಿ ಕಾರ್ಯಚರಿಸುವ ರೆಡಿಮಿಕ್ಸ್ ಕಾಂಕ್ರೀಟ್ ಘಟಕಗಳ...

ಆಗಮಡಂಬರ ಕೃತಿ ಲೋಕಾರ್ಪಣೆ

ಉಡುಪಿ, ಫೆ.21: ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠ ಉಡುಪಿ...

ವಿಕಾಸಕ್ಕಾಗಿ ಜಾನಪದ

ಉಡುಪಿ, ಫೆ.21: ಉಡುಪಿ ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಕನ್ನಡ...
error: Content is protected !!