ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ನೇಮಕ ಮಾಡಲಾಗಿದೆ. ಶಕ್ತಿಕಾಂತ ದಾಸ್ ಅವರು ಡಿಸೆಂಬರ್ 2018 ರಿಂದ ಆರು ವರ್ಷಗಳ ಕಾಲ ಆರ್‌ಬಿಐ ಮುಖ್ಯಸ್ಥರಾಗಿದ್ದರು. ಅವರು ನಾಲ್ಕು ದಶಕಗಳಲ್ಲಿ ಆಡಳಿತದ ವಿವಿಧ ಕ್ಷೇತ್ರಗಳಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಲ್ಲಿ ಹಣಕಾಸು, ತೆರಿಗೆ, ಕೈಗಾರಿಕೆಗಳು, ಮೂಲಸೌಕರ್ಯ ಇತ್ಯಾದಿ ಕ್ಷೇತ್ರಗಳಲ್ಲಿ ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ
Date: