Tuesday, February 25, 2025
Tuesday, February 25, 2025

ಕುಕ್ಕೆಹಳ್ಳಿ: ಕಲಿಕಾ ಹಬ್ಬ

ಕುಕ್ಕೆಹಳ್ಳಿ: ಕಲಿಕಾ ಹಬ್ಬ

Date:

ಬ್ರಹ್ಮಾವರ, ಫೆ.25: ಶಾಲಾ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬ್ರಹ್ಮಾವರ, ಸಮೂಹ ಸಂಪನ್ಮೂಲ ಕೇಂದ್ರ ಕುಕ್ಕೆಹಳ್ಳಿ ಹಾಗೂ ಪಿ.ಎಂ.ಶ್ರೀ. ಸ.ಹಿ.ಪ್ರಾ.ಶಾಲೆ ಕುಕ್ಕೆಹಳ್ಳಿ ಇವರ ಸಹಭಾಗಿತ್ವದಲ್ಲಿ ಕುಕ್ಕೆಹಳ್ಳಿ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ನಡೆಯಿತು. ಕುಕ್ಕೆಹಳ್ಳಿ ಕ್ಲಸ್ಟರಿನ ವಿವಿಧ ಶಾಲೆಗಳಿಂದ ಮಕ್ಕಳು, ಪೋಷಕರು ಹಾಗೂ ಶಿಕ್ಷಕರು ಕಲಿಕಾ ಹಬ್ಬದಲ್ಲಿ ಭಾಗವಹಿಸಿದ್ದರು. ಪೋಷಕರು ಹಾಗೂ ಸಮುದಾಯದ ಸದಸ್ಯರನ್ನೊಳಗೊಂಡು ಸಂತಸದಾಯಕ ಕಲಿಕೆಯ ವಾತಾವರಣವನ್ನು ನಿರ್ಮಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಕಲಿಕೆ ಉತ್ತಮಗೊಳ್ಳಲು ಸಹಕಾರಿಯಾಗುತ್ತದೆ ಎಂದು ಕಾರ್ಯಕ್ರಮವನ್ನು ಉದ್ಘಾಟಿಸಿದ ಕುಕ್ಕೆಹಳ್ಳಿ ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಪುರಂದರ ಕೋಟ್ಯಾನ್ ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಉಪಾಧ್ಯಕ್ಷರಾದ ರವೀಂದ್ರ ಕೊಳಲಗಿರಿ ವಹಿಸಿದ್ದರು. ಕಲಿಕಾ ಹಬ್ಬದ ನೋಡಲ್ ಅಧಿಕಾರಿ ಉದಯ್ ಕೋಟ ಪ್ರಾಸ್ತಾವಿಕವಾಗಿ ಮಾತನಾಡಿದರು. ಸ್ಥಳೀಯ ಜನಪ್ರತಿನಿಧಿ ಶಂಕರ ಸಾಲ್ಯಾನ್, ಎಸ್.ಡಿ.ಎಂ.ಸಿ ವಿಶ್ವನಾಥ ಬೆಳ್ಳಂಪಳ್ಳಿ ದೂಪದಕಟ್ಟೆ, ಶಾಲಾ ಮುಖ್ಯ ಶಿಕ್ಷಕ ಗೋಪಾಲ ನಾಯ್ಕ್ ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿಗಳಾದ ಮುರಳೀಧರ, ರಾಮಚಂದ್ರ ವಾಕುಡ, ಸವಿತಾ ಕುಮಾರಿ, ಸುರೇಖಾ, ಶಾರದಾ, ವಿನಯಕುಮಾರಿ, ರಮಣಿ, ತೇಜಸ್ವಿನಿ, ಉಷಾ, ಕಲಿಕಾ ಕಾರ್ನರ್ ಗಳಲ್ಲಿ ಚಟುವಟಿಕೆ ನಡೆಸಿದರು. ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಶಾಂತಾ ಕಾರ್ಯಕ್ರಮ ನಡೆಸಿಕೊಟ್ಟರು. ಶಾಲಾ ಮುಖ್ಯೋಪಾಧ್ಯಾಯಿನಿ ಸರಸ್ವತಿ ಸ್ವಾಗತಿಸಿ, ದೈಹಿಕ ಶಿಕ್ಷಕ ಗಣೇಶ್ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಜ್ಯೋತಿಕಲಾ ವಂದಿಸಿದರು. ಶಾಲಾ ಅಧ್ಯಾಪಕರು, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಪೋಷಕರು, ಶಾಲಾ ಸಿಬ್ಬಂದಿಗಳಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಧ್ಯಾತ್ಮ ವಿದ್ಯೆಯ ಅಧ್ಯಯನದಿಂದ ನಮ್ಮ ವಿಕಾಸ: ಪುತ್ತಿಗೆ ಶ್ರೀಪಾದರು

ಉಡುಪಿ, ಫೆ.25: ಲೌಕಿಕ ಶಿಕ್ಷಣದಿಂದ ವೃತ್ತಿಯ ಸಂಪಾದನೆಯಾಗುತ್ತದೆ. ಅಧ್ಯಾತ್ಮ ಶಿಕ್ಷಣದಿಂದ ಜೀವನ...

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...
error: Content is protected !!