ಉಡುಪಿ, ಫೆ.25: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಡ / ನಿವೇಶನಗಳನ್ನು ಹೊಂದಿರುವ ಆಸ್ತಿ ಮಾಲೀಕರು ಹಾಗೂ ಅನುಭೋಗದಾರರು ನಗರಾಭಿವೃದ್ಧಿ ಇಲಾಖೆಯ ಅಧಿಸೂಚನೆಯಂತೆ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯೊಳಗೆ ಬರುವ ಎಲ್ಲಾ ರೀತಿಯ ಕಟ್ಟಡ/ ನಿವೇಶನಗಳಿಗೆ ಆಸ್ತಿ ತೆರಿಗೆ ನಿರ್ಧಾರಣೆಗೊಳಿಸಿ, ಆಸ್ತಿ ತೆರಿಗೆಯನ್ನು 2024-25 ನೇ ಸಾಲಿನ ಅಂತ್ಯದವರೆಗೆ ಪೂರ್ಣ ಪ್ರಮಾಣದಲ್ಲಿ ಪಾವತಿಸಿಕೊಂಡು ಸಂಬಂಧಪಟ್ಟ ಆಸ್ತಿ ಮಾಲೀಕರಿಂದ ತಮ್ಮ ಸ್ವತ್ತಿಗೆ ಸಂಬಂಧಪಟ್ಟ ದಾಖಲೆಗಳನ್ನು ಸಾಲಿಗ್ರಾಮ ಪಟ್ಟಣ ಪಂಚಾಯತ್ ಅಧಿಕಾರಿಗಳಿಗೆ/ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಾಲಿಗ್ರಾಮ ಪಟ್ಟಣ ಪಂಚಾಯತ್ ಕಚೇರಿಯ ಮುಖ್ಯಾಧಿಕಾರಿಗಳು, ಕಂದಾಯ ನಿರೀಕ್ಷಕರು ಅಥವಾ ಕಂದಾಯ ಶಾಖೆಯ ಸಿಬ್ಬಂದಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಆಸ್ತಿ ತೆರಿಗೆ ಪಾವತಿಗೆ ಸೂಚನೆ

ಆಸ್ತಿ ತೆರಿಗೆ ಪಾವತಿಗೆ ಸೂಚನೆ
Date: