Thursday, October 1, 2026
Thursday, October 1, 2026

ಎಂ.ಜಿ.ಎಂ. ಸಂಧ್ಯಾ ಕಾಲೇಜು: ಛಾಯಾಗ್ರಹಣ ಕಾರ್ಯಾಗಾರ

ಎಂ.ಜಿ.ಎಂ. ಸಂಧ್ಯಾ ಕಾಲೇಜು: ಛಾಯಾಗ್ರಹಣ ಕಾರ್ಯಾಗಾರ

Date:

ಉಡುಪಿ, ಸೆ.25: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನಲ್ಲಿ “Frame Your Future – Photography Basics to Career Breakthroughs“ ಎಂಬ ವಿಶೇಷ ಕಾರ್ಯಾಗಾರ ಬುಧವಾರ ಕಾಲೇಜಿನ ಟಿ. ಮೋಹನದಾಸ್ ಪೈ ಪ್ಲಾಟಿನಂ ಜ್ಯುಬಿಲಿ ಬ್ಲಾಕ್ ಸಭಾಂಗಣದಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ದೇವೀದಾಸ್ ಎಸ್ ನಾಯಕ್ ಉಪಸ್ಥಿತರಿದ್ದರು. ಹಿರಿಯ ಛಾಯಾಗ್ರಾಹಕ ಹಾಗೂ ಉದಯವಾಣಿ ದಿನಪತ್ರಿಕೆಯ ಹಿರಿಯ ಸುದ್ದಿಚಿತ್ರ ಪತ್ರಕರ್ತರಾದ ಅಸ್ಟ್ರೋ ಮೋಹನ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು, ವಿದ್ಯಾರ್ಥಿಗಳಿಗೆ ಛಾಯಾಗ್ರಹಣದ ಮೂಲ ತತ್ವಗಳು, ತಂತ್ರಜ್ಞಾನ ಹಾಗೂ ಛಾಯಾಗ್ರಹಣದಲ್ಲಿ ವೃತ್ತಿಜೀವನ ರೂಪಿಸುವ ಸಾಧ್ಯತೆಗಳ ಕುರಿತು ಅಮೂಲ್ಯ ಮಾರ್ಗದರ್ಶನ ನೀಡಿದರು. ವಿದ್ಯಾರ್ಥಿಗಳಲ್ಲಿ ಛಾಯಾಗ್ರಹಣ ಕ್ಷೇತ್ರದ ಬಗ್ಗೆ ಹೊಸ ಪ್ರೇರಣೆ ಮೂಡಿದ್ದು, ಭವಿಷ್ಯದಲ್ಲಿ ಈ ಕ್ಷೇತ್ರವನ್ನು ವೃತ್ತಿಜೀವನವಾಗಿ ಆರಿಸಿಕೊಳ್ಳಲು ಉತ್ಸಾಹ ಹುಟ್ಟಿಸಿತು. ದ್ವಿತೀಯ ಬಿಬಿಎ ವಿದ್ಯಾರ್ಥಿನಿ ದಿಶಾ ನಿರೂಪಿಸಿದರು. ಪ್ರಥಮ ಬಿಬಿಎ ವಿದ್ಯಾರ್ಥಿನಿ ಡಿಯೋನಾ ಪರ್ಲ್ ಅತಿಥಿಗಳನ್ನು ಪರಿಚಯಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೆ.ಎಸ್.ಆರ್.ಟಿ.ಸಿ: ಅ. 11 -20- ಉಡುಪಿಯಿಂದ ನವರಾತ್ರಿ ವಿಶೇಷ ಪ್ಯಾಕೇಜ್ ಪ್ರವಾಸ

ಉಡುಪಿ, ಸೆ.30: ಕ.ರಾ.ರ.ಸಾ.ನಿಗಮ ಮಂಗಳೂರು ವಿಭಾಗವು ದಸರಾ ಪ್ರಯುಕ್ತ ಉಡುಪಿ ಘಟಕದಿಂದ...

ʼಕಬ್ಬದುಳುಮೆʼ ಕಾವ್ಯಲೋಕದ ಓದಿನ ಹೊಸಪರಿ

ಹಿರಿಯಡಕ, ಸೆ.30: ಹಳಗನ್ನಡ ಪಠ್ಯಗಳ ಸಂಧಿಬಂಧಗಳನ್ನು ಒಡೆದು ಒಳಗಿನ ತಿಳಿವನ್ನು ಅರಗಿಸಿಕೊಳ್ಳುವ...

ಕೋಟೇಶ್ವರ: ವಿದ್ಯಾರ್ಥಿ ಸಂಘ ಉದ್ಘಾಟನೆ

ಕೋಟೇಶ್ವರ, ಸೆ.30: ಯುವಕರಲ್ಲಿ ನಾಯಕತ್ವ ಗುಣವನ್ನು ಬೆಳೆಸುವಲ್ಲಿ ಕಾಲೇಜು ಹಂತದಲ್ಲಿ ವಿದ್ಯಾರ್ಥಿ...

ಹಿರಿಯ ನಾಗರಿಕರು ಹಿಂಜರಿಕೆಯಿಲ್ಲದೆ ಮುಕ್ತವಾಗಿ ಸ್ಪರ್ಧೆಗಳಲ್ಲಿ ಭಾಗವಹಿಸಿ: ನ್ಯಾ. ನಿತಿನ್ ಯಶ್ವಂತ್ ರಾವ್

ಉಡುಪಿ, ಸೆ.30: ವಯಸ್ಸು ಕೇವಲ ದೇಹಕ್ಕೆ ಮಾತ್ರ ಮನಸ್ಸಿಗಲ್ಲ ಎಂಬ ಚಿಂತನೆಯೊಂದಿಗೆ...
error: Content is protected !!