Tuesday, September 8, 2026
Tuesday, September 8, 2026

ಸರಸ್ವತಿ ವಿದ್ಯಾಲಯದಲ್ಲಿ ಮಾಹಿತಿ ಹಕ್ಕು ಕಾಯಿದೆ ಅರಿವು

ಸರಸ್ವತಿ ವಿದ್ಯಾಲಯದಲ್ಲಿ ಮಾಹಿತಿ ಹಕ್ಕು ಕಾಯಿದೆ ಅರಿವು

Date:

ಗಂಗೊಳ್ಳಿ, ನ.23: ಭ್ರಷ್ಟಾಚಾರವನ್ನು ಕಡಿಮೆ ಮಾಡುವಲ್ಲಿ ಮಾಹಿತಿ ಹಕ್ಕು ಕಾಯಿದೆಯನ್ನು ಅತ್ಯಂತ ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಸಾಧ್ಯ ಹಾಗಾಗಿ ಈ ಬಗೆಗೆ ಎಲ್ಲರಿಗೂ ತಿಳುವಳಿಕೆ ಇರಬೇಕಾದ ಅವಶ್ಯಕತೆಯಿದೆ ಎಂದು ಕಾಳಾವರದ ನಮ್ಮ ಪ್ರಗತಿ ಗ್ರಾಮೀಣ ಅಭಿವೃದ್ಧಿ ಮತ್ತು ತರಬೇತಿ ಸಂಸ್ಥೆಯ ನಿರ್ದೇಶಕರಾದ ಅಶೋಕ್ ಎನ್. ಡಿ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಎಸ್. ವಿ ಕಾಮರ್ಸ್ ಕ್ಲಬ್ ಗಂಗೊಳ್ಳಿ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಜಂಟಿ ಆಶ್ರಯದಲ್ಲಿ ಇಲ್ಲಿನ ರೋಟರಿ ಸಭಾಂಗಣದಲ್ಲಿ ನಡೆದ ಮಾಹಿತಿ ಹಕ್ಕು ಕಾಯ್ದೆ ಕುರಿತಾದ ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ. ಸಿ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿಯ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಲಕ್ಷ್ಮಿಕಾಂತ್ ಮಡಿವಾಳ ಶುಭ ಹಾರೈಸಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕರಾದ ರಾಘವೇಂದ್ರ ಭಟ್ ಮತ್ತು ವಿದ್ಯಾರ್ಥಿ ಪ್ರತಿನಿಧಿ ಧನರಾಜ್ ಉಪಸ್ಥಿತರಿದ್ದರು. ಲೇಖಾ ಮತ್ತು ಝುವೈನಾ ಪ್ರಾರ್ಥಿಸಿದರು. ರಜತ್ ಪೂಜಾರಿ ಸ್ವಾಗತಿಸಿದರು. ಎಸ್‌. ವಿ ಕಾಮರ್ಸ್ ಕ್ಲಬ್ ಸಂಯೋಜಕ ನರೇಂದ್ರ ಎಸ್ ಗಂಗೊಳ್ಳಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಗಗನ್ ಖಾರ್ವಿ ನಿರೂಪಿಸಿದರು. ರೋಹನ್ ಖಾರ್ವಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿಯಲ್ಲಿ ಕೇರಳದ ಸಾಂಸ್ಕೃತಿಕ ವೈಭವ: ಓಣಂ ಸಂಭ್ರಮಕ್ಕೆ ಮನಸೋತ ಕರಾವಳಿಗರು

ಉಡುಪಿ, ಸೆ.7: ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಮಹೋತ್ಸವದ ಸಂಭ್ರಮದ ನಡುವೆಯೇ...

ಕ್ರಿಯೇಟಿವ್ ಗುರುದೇವೋಭವ: ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಭಾಗಿ

ಕಾರ್ಕಳ, ಸೆ.7: ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಕ್ರಿಯೇಟಿವ್...

ಸರಸ್ವತಿ ವಿದ್ಯಾಲಯದಲ್ಲಿ ಇ ವೇಸ್ಟ್ ಮ್ಯಾನೇಜ್ಮೆಂಟ್ ಕಾರ್ಯಕ್ರಮ

ಗಂಗೊಳ್ಳಿ, ಸೆ.7: ಇ ತ್ಯಾಜ್ಯಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡುವುದು ಹೇಗೆ...

ತ್ರಿಶಾ ವಿದ್ಯಾ ಪಿಯು ಕಾಲೇಜು ಕಟಪಾಡಿ: ಕಾಪು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಕಟಪಾಡಿ, ಸೆ.7: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ತ್ರಿಶಾ...
error: Content is protected !!