ಮಲ್ಪೆ, ನ.26: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿನ ಐಕ್ಯೂಎಸಿ, ರಾಜಕೀಯಶಾಸ್ತ್ರ ವಿಭಾಗ ಮತ್ತು ಚುನಾವಣಾ ಸಾಕ್ಷರತಾ ಕ್ಲಬ್ ಇವರ ಜಂಟಿ ಆಶ್ರಯದಲ್ಲಿ ಸಂವಿಧಾನ ದಿನಾಚರಣೆ ಆಚರಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಸರಕಾರಿ ಪದವಿಪೂರ್ವ ಕಾಲೇಜು ತೆಂಕನಿಡಿಯೂರು ಇಲ್ಲಿನ ರಾಜಕೀಯಶಾಸ್ತ್ರ ಉಪನ್ಯಾಸಕ ವಾಸು ಮೊಗೇರ್ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡುತ್ತಾ, ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಎದುರಾಗುವ ಅಪಾಯಗಳನ್ನು ಎದುರಿಸುವ ಪ್ರಜ್ಞಾವಂತಿಕೆಯನ್ನು ಪ್ರಜೆಗಳು ಬೆಳೆಸಿಕೊಂಡಾಗ ಮಾತ್ರ ಸಂವಿಧಾನದ ಆಶಯಗಳು ಸಾಕಾರಗೊಳ್ಳಲು ಸಾಧ್ಯ ಎಂದರು.
ಮುಖ್ಯ ಅತಿಥಿಗಳಾಗಿ ತೆಂಕನಿಡಿಯೂರು ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಶ್ವನಾಥ ಕರಬ ಸಂವಿಧಾನ ಸಾರುವ ಮೌಲ್ಯಗಳೆಲ್ಲವೂ ಮಾನವೀಯ ಮೌಲ್ಯಗಳಾಗಿರುವುದರಿಂದ ಅದು ನಮ್ಮ ಬದುಕಿನ ಮೌಲ್ಯಗಳು ಮತ್ತು ಗೌರವಿಸುವುದು ನಮ್ಮ ನಾಗರಿಕ ಜವಾಬ್ದಾರಿ ಎಂದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ನಿತ್ಯಾನಂದ ವಿ ಗಾಂವ್ಕರ್ ಸಂವಿಧಾನದ ಮೌಲ್ಯಗಳನ್ನು ಯುವಜನತೆ ಹೆಚ್ಚಾಗಿ ಅರಿತುಕೊಳ್ಳುವ ಅವಶ್ಯಕತೆ ಇದೆ ಎಂದರು.
ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರಶಾಂತ್ ನೀಲಾವರ ಕಾರ್ಯಕ್ರಮದ ಔಚಿತ್ಯವನ್ನು ತಿಳಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ರಾಜ್ ಕುಮಾರ್, ಸಂದೇಶ್, ಐಕ್ಯೂಎಸಿ ಸಂಚಾಲಕರಾದ ಡಾ. ವಿಷ್ಣುಮೂರ್ತಿ ಪ್ರಭು, ರಾಜ್ಯಶಾಸ್ತ್ರ ಉಪನ್ಯಾಸಕರಾದ ಆರತಿ ಜಿ., ಹಾಗೂ ಗ್ರಂಥಪಾಲಕರಾದ ಕೃಷ್ಣ ಸಾಸ್ತಾನ, ಬೋಧಕ -ಬೋಧಕೇತರ ವೃಂದದವರು ಕಾರ್ಯಕ್ರಮದಲ್ಲಿ ಭಾಗಿಯಾದರು.




By
ForthFocus™