Saturday, June 6, 2026
Saturday, June 6, 2026

ರಥಬೀದಿ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

ರಥಬೀದಿ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

Date:

ಮಂಗಳೂರು, ನ.28: ಡಾ. ಪಿ. ದಯಾನಂದ ಪೈ-ಪಿ. ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರಥಬೀದಿ ಮಂಗಳೂರು ಇಲ್ಲಿ ಕಾಲೇಜಿನ ಐಕ್ಯೂಎಸಿ, ರಾಜ್ಯಶಾಸ್ತ್ರ ವಿಭಾಗ, ಚುನಾವಣಾ ಸಾಕ್ಷರತಾ ಕ್ಲಬ್, ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್ ಕ್ರಾಸ್ ಮತ್ತು ಮಾನವಿಕ ಸಂಘಗಳ ಆಶ್ರಯದಲ್ಲಿ ಸಂವಿಧಾನ ದಿನವನ್ನು ಆಚರಿಸಲಾಯಿತು. ಮಂಗಳೂರಿನ ನ್ಯಾಯವಾದಿ ಪರಿಮಳ ರಾವ್ ಎಂ., ಇವರು ಮುಖ್ಯ ಅತಿಥಿಯಾಗಿ ಮಾತನಾಡಿ, ವಿದ್ಯಾರ್ಥಿಗಳಿಗೆ ಸಂವಿಧಾನದ ಆಶಯಗಳ ಕುರಿತು ವಿವರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಂಶುಪಾಲರಾದ ಪ್ರೊ. ಜಯಕರ ಭಂಡಾರಿ ಎಂ. ಇವರು, ವಿದ್ಯಾರ್ಥಿಗಳು ಸಂವಿಧಾನಿಕ ಹಕ್ಕುಗಳ ಜೊತೆಗೆ ಕರ್ತವ್ಯಗಳನ್ನು ಅರಿತುಕೊಂಡು ಪಾಲಿಸುವಂತೆ ಹೇಳಿದರು. ಬಿ.ಸಿ.ಎ ವಿದ್ಯಾರ್ಥಿನಿ ವೈಷ್ಣವಿ, ತುಳು ಭಾಷೆಯಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಭಾಷಾಂತರಿಸಿದ ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು.

ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ನಸೀಮಾ ಬೇಗಂ ಪ್ರಾಸ್ತಾವಿಕವಾಗಿ ಮಾತನಾಡಿದರು. ಸ್ನಾತಕೋತ್ತರ ವಿದ್ಯಾರ್ಥಿನಿ ಪ್ರತೀಕ್ಷಾ ಸ್ವಾಗತಿಸಿ, ಕ್ಷಮಾ ವಂದಿಸಿದರು. ಲಕ್ಷ್ಮೀಪ್ರಿಯ, ಪ್ರತೀಕ್ಷಾ, ವಿದ್ಯಾಶ್ರೀ, ಕಾರ್ತಿಕ ಪ್ರಾರ್ಥಿಸಿದರು. ಮುಹಮ್ಮದ್ ಆಶಿಕ್ ಕಾರ್ಯಕ್ರಮ ನಿರೂಪಿಸಿದರು. ಚುನಾವಣಾ ಸಾಕ್ಷರತಾ ಕ್ಲಬ್‌ನ ಸಂಯೋಜಕರಾದ ವತ್ಸಲ ಪಿ, ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಪ್ರೊ. ದುಗ್ಗಪ್ಪ ಕಜೆಕಾರ್, ಐಕ್ಯೂಎಸಿ ಸಂಯೋಜಕ ದೇವಿಪ್ರಸಾದ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮದ ನಂತರ ಸಂವಿಧಾನದ ಅರಿವಿಗೆ ಸಂಬಂಧಿಸಿದಂತೆ ರಸಪ್ರಶ್ನೆ ಕಾರ್ಯಕ್ರಮವನ್ನು ಹಾಗೂ ‘ನಮ್ಮ ಸಂವಿಧಾನ ನಮ್ಮ ಹೆಮ್ಮೆ’ ಎನ್ನುವ ಶೀರ್ಷಿಕೆಯಡಿ ವರ್ಣಚಿತ್ರ ಮತ್ತು ಪೋಸ್ಟರ್ ಮೇಕಿಂಗ್ ಸ್ಪರ್ಧೆಗಳನ್ನು ವಿದ್ಯಾರ್ಥಿಗಳಿಗೆ ಏರ್ಪಡಿಸಲಾಯಿತು. ಸಂವಿಧಾನ ದಿನದ ಭಾಗವಾಗಿ ಸಾಂವಿಧಾನಿಕ ಕರ್ತವ್ಯಗಳ ಅರಿವು ಮೂಡಿಸುವ ಫಲಕವನ್ನು ಅನಾವರಣಗೊಳಿಸಲಾಯಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರಿಸರ ಸಂರಕ್ಷಣೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಅಗತ್ಯ: ಪ್ರೊ. ನಿತ್ಯಾನಂದ ವಿ. ಗಾಂವಕರ

ತೆಂಕನಿಡಿಯೂರು, ಜೂ.5: ವಿಶ್ವಸಂಸ್ಥೆಯ ಮುಂದಾಳತ್ವದಲ್ಲಿ ಆರಂಭವಾದ ವಿಶ್ವ ಪರಿಸರ ದಿನಾಚರಣೆಯು ಇಂದು...

ಅಂಡಮಾನ್ ದ್ವೀಪಗಳ ಪೂರ್ವ ಕರಾವಳಿಯಲ್ಲಿ ನೈಸರ್ಗಿಕ ಅನಿಲ ಪತ್ತೆ: ಕೇಂದ್ರ ಸಚಿವ ಹರ್ದೀಪ್ ಪುರಿ

ನವದೆಹಲಿ, ಜೂ.5: ಅಂಡಮಾನ್ ದ್ವೀಪಗಳ ಪೂರ್ವ ಕರಾವಳಿಯಿಂದ ಸುಮಾರು 15 ಕಿಲೋಮೀಟರ್...

ಸಂತೆಕಟ್ಟೆ ಅಂಡರ್ ಪಾಸ್ ಪೂರಕ ಕಾಮಗಾರಿ ಬಗ್ಗೆ ಅಧಿಕಾರಿಗಳೊಂದಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ

ಉಡುಪಿ, ಜೂ.5: ರಾಷ್ಟ್ರೀಯ ಹೆದ್ದಾರಿ 66 ಸಂತೆಕಟ್ಟೆ ಅಂಡರ್ ಪಾಸ್ ಬಸ್...

ಕಾಪು: ಏಕ್ ಪೇಡ್ ಮಾ ಕೆ ನಾಮ್ ಕಾರ್ಯಕ್ರಮ

ಕಾಪು, ಜೂ.5: ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ಕಾಪು ಬಿಜೆಪಿ...
error: Content is protected !!