Wednesday, November 11, 2026
Wednesday, November 11, 2026

ʼಸ್ಪೀಕ್‌ ಸ್ಮಾರ್ಟ್ ʼಸ್ಪೀಕ್‌ ಕಾನ್ಫಿಡೆಂಟ್‌ʼ ಕಾರ್ಯಾಗಾರ

ʼಸ್ಪೀಕ್‌ ಸ್ಮಾರ್ಟ್ ʼಸ್ಪೀಕ್‌ ಕಾನ್ಫಿಡೆಂಟ್‌ʼ ಕಾರ್ಯಾಗಾರ

Date:

ಉಡುಪಿ, ನ.30: ಹಿರಿಯಡಕದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಂಗ್ಲಭಾಷಾ ವಿಭಾಗ ಮತ್ತು ಐಕ್ಯುಎಸಿ ಸಹಯೋಗದಲ್ಲಿ ʼಸ್ಪೀಕ್‌ ಸ್ಮಾರ್ಟ್, ʼಸ್ಪೀಕ್‌ ಕಾನ್ಫಿಡೆಂಟ್‌ʼ ಕುರಿತು ಕಾರ್ಯಾಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ತೆಂಕನಿಡಿಯೂರು ಸಹ ಪ್ರಾಧ್ಯಾಪಕ ಡಾ. ವಿಷ್ಣುಮೂರ್ತಿ ಪ್ರಭು, ವಿದ್ಯಾರ್ಥಿಗಳಿಗೆ ಇಂಗ್ಲೀಷ್‌ ಸಂವಹನ ಕಲೆಯನ್ನು ಬೆಳೆಸಿಕೊಳ್ಳಲು ಅನುಕೂಲವಾಗುವಂತೆ ಹಲವು ಚಟುವಟಿಕೆಗಳನ್ನು ನಡೆಸಿದರು. ನಿರಂತರ ಅಭ್ಯಾಸದ ಮೂಲಕ ಇಂಗ್ಲೀಷ್‌ ಭಾಷಾ ಪ್ರಾವೀಣ್ಯತೆಯನ್ನು ಪಡೆದುಕೊಳ್ಳಲು ಸಾಧ್ಯ ಎಂಬುದನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು.

ಪ್ರಾಂಶುಪಾಲ ಡಾ. ಜಯಪ್ರಕಾಶ್‌ ಶೆಟ್ಟಿ ಹೆಚ್‌ ಅವರು ಅಧ್ಯಕ್ಷತೆಯನ್ನು ವಹಿಸಿದ್ದರು. ಐಕ್ಯುಎಸಿ ಸಂಚಾಲಕ ಡಾ. ಲಿತಿನ್‌ ಬಿ ಎಂ., ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಸಂಚಾಲಕಿ ಡಾ. ಸೌಮ್ಯಲತಾ ಪಿ., ಆಂಗ್ಲಭಾಷಾ ವಿಭಾಗ ಮುಖ್ಯಸ್ಥೆ ನಿಶ್ಚಿತ ಎಸ್‌ ಹೋಬಳಿದಾರ್‌ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಸಿತೀಕ್ಷಾ ಸ್ವಾಗತಿದರು. ವೈಷ್ಣವಿ ಅತಿಥಿಯನ್ನು ಪರಿಚಯಿಸಿದರು. ಸುಹಾ ವಂದಿಸಿದರು. ದಿವ್ಯಾಶ್ರೀ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತುಳು ಸಂಸ್ಕೃತಿ ಬೆಳಗಿದ ಆಕಾಶದೀಪ; ಇತಿಹಾಸ ನೆನಪಿಸಿದ ಪರ್ಕಳ ವಾಲಿಬಾಲ್​ ಫ್ರೆಂಡ್ಸ್​

ಕ್ರೀಡಾ ಕ್ಷೇತ್ರದೊಂದಿಗೆ ಸಾಮಾಜಿಕ ಕಾರ್ಯಗಳ ಮೂಲಕವೂ ನಾಡಿನ ಗಮನ ಸೆಳೆಯುವ ಪರ್ಕಳದ...

ಹಿಂದಿನ ಎಲ್ಲಾ ಸಾಧಕರು ಮಾತೃಭಾಷೆಯಲ್ಲೇ ಶಿಕ್ಷಣ ಪಡೆದಿದ್ದಾರೆ: ಸಾಹಿತಿ ಇಂದಿರಾ ಹಾಲಂಬಿ

ಉಡುಪಿ, ನ.9: ದೇಶ ಬಹಳಷ್ಟು ಪ್ರಗತಿ ಸಾಧಿಸಿದೆ. ಶೈಕ್ಷಣಿಕ, ತಾಂತ್ರಿ​ಕ ಕ್ಷೇತ್ರದಲ್ಲಿ...

ಶ್ರೀಕೃಷ್ಣ ಮಠದಲ್ಲಿ ಗೋಪೂಜೆ ಸಂಭ್ರಮ; ರಥಬೀದಿಯಲ್ಲಿ ವೈಭವದ ಗೋ-ಮೆರವಣಿಗೆ

ಉಡುಪಿ, ನ.9: ಶ್ರೀಕೃಷ್ಣ ಮಠದಲ್ಲಿ ದೀಪಾವಳಿ ಸಂದರ್ಭದಲ್ಲಿ ಗೋಪೂಜೆ ವೈಭವದಿಂದ ನಡೆಯಿತು....

ದೀಪಾವಳಿ: ಬೆಳಕಿನ ಹಬ್ಬದ ಸಮಗ್ರ ಇತಿಹಾಸ, ಪೌರಾಣಿಕ ಹಿನ್ನೆಲೆ ಮತ್ತು ಆಚರಣೆಗಳು

ದೀಪಾವಳಿ ಅಥವಾ ದೀಪಾವಳೀ ಎಂದರೆ ಸಂಸ್ಕೃತದಲ್ಲಿ 'ದೀಪಗಳ ಆವಳಿ' (ಸಾಲು ಸಾಲು...
error: Content is protected !!