Saturday, February 7, 2026
Saturday, February 7, 2026

ಹಿರಿಯಡಕ ಕಾಲೇಜು: ಹೊಸಬರ ದಿನ

ಹಿರಿಯಡಕ ಕಾಲೇಜು: ಹೊಸಬರ ದಿನ

Date:

ಹಿರಿಯಡಕ, ಸೆ.13: ಸ್ಪರ್ಧಾತ್ಮಕ ಜಗತ್ತಿನ ಸವಾಲುಗಳನ್ನು ಎದುರಿಸಲು ಬೇಕಾದ ಗಟ್ಟಿಯಾದ ವ್ಯಕ್ತಿತ್ವವನ್ನು ಕಟ್ಟಿಕೊಳ್ಳುವ ಅವಕಾಶವಾಗಿ ಸ್ನಾತಕೋತ್ತರ ಶಿಕ್ಷಣವನ್ನು ಬಳಸಿಕೊಳ್ಳುವಂತೆ ಕಾಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥ ಟಿ. ಜಿ. ಭಟ್‌ ಹೇಳಿದರು. ಹಿರಿಯಡಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ನಾತಕೋತ್ತರ ವಿಭಾಗಗಳ ʼಹೊಸಬರ ದಿನʼವನ್ನು ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಮಾತನಾಡಿದ ಕಾಪು ಕಾಲೇಜಿನ ಕನ್ನಡ ಪ್ರಾಧ್ಯಾಪಕ ಪ್ರೊ. ರವಿರಾಜ್‌ ಶೆಟ್ಟಿ, ʼವಿದ್ಯಾರ್ಥಿಗಳು ನಿದ್ದೆಯ ಸಿಹಿಗನಸು, ಹಗಲುಗನಸುಗಳಲ್ಲಿ ಕಳೆದು ಹೋಗದೆ ನಿದ್ರೆಗೆಡುವಂತೆ ಮಾಡುವ ಗುಣಾತ್ಮಕ ಕನಸುಗಳ ಅಂಗಣವಾಗಬೇಕು ಎಂದರು.

ಪ್ರಾಂಶುಪಾಲ ಡಾ. ಜಯಪ್ರಕಾಶ್‌ ಶೆಟ್ಟಿ ಹೆಚ್‌ ಅಧ್ಯಕ್ಷತೆ ವಹಿಸಿದ್ದರು. ವಾಣಿಜ್ಯ ವಿಭಾಗದ ಮುಖ್ಯಸ್ಥ ಡಾ. ಲಿತಿನ್‌ ಬಿ ಎಂ, ನಂದೀಶ್‌ ಕುಮಾರ್‌ ಕೆ ಸಿ ಕನ್ನಡ ಉಪನ್ಯಾಸಕ ರವಿಚಂದ್ರ ಬಾಯರಿ ಕೆ., ವಿಠ್ಠಲ ಉಪಸ್ಥಿತರಿದ್ದರು. ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ಸೌಮ್ಯಲತಾ ಪಿ. ಸ್ವಾಗತಿಸಿ, ದ್ವಿತೀಯ ಕನ್ನಡ ಎಂ.ಎ. ವಿದ್ಯಾರ್ಥಿ ಶ್ರೀಲತಾ ವಂದಿಸಿ, ರಚನಾ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...

ಕೋಟ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ

ಕೋಟ, ಫೆ.೬: ಕೋಟದ ಅಮೃತೇಶ್ವರೀ ದೇಗುಲದ ವತಿಯಿಂದ ನಡೆಯಲಿರುವ ಏಕ:ಪವಿತ್ರ ನಾಗಮಂಡಲೋತ್ಸವಕ್ಕೆ...

ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ, ಫೆ.6: ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಉಪಯೋಗಕ್ಕೆ ಅಗತ್ಯವಿರುವ ಎಲ್ಲಾ ರೀತಿಯ...
error: Content is protected !!