Monday, September 7, 2026
Monday, September 7, 2026

ಬಿ. ಬಿ. ಹೆಗ್ಡೆ ಕಾಲೇಜು: ಅಂತರಾಷ್ಟ್ರೀಯ ಮಾನವ ಹಕ್ಕು ದಿನಾಚರಣೆ

ಬಿ. ಬಿ. ಹೆಗ್ಡೆ ಕಾಲೇಜು: ಅಂತರಾಷ್ಟ್ರೀಯ ಮಾನವ ಹಕ್ಕು ದಿನಾಚರಣೆ

Date:

ಕುಂದಾಪುರ, ಡಿ,10: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಹ್ಯೂಮನ್ ವ್ಯಾಲ್ಯೂಸ್; ಪ್ರೊಫೆಷನಲ್ ಎಥಿಕ್ಸ್ ಘಟಕ ಹಾಗೂ ಮಾನವ ಹಕ್ಕುಗಳ ಘಟಕದ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಾನವ ಹಕ್ಕು ದಿನಾಚರಣೆಯನ್ನು ಕಾಲೇಜಿನ ಸಭಾಂಗಣದಲ್ಲಿ ಡಿಸೆಂಬರ್ 10ರಂದು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಸಹ ಪ್ರಾಧ್ಯಾಪಕರಾದ ಪ್ರವೀಣ್ ಮೊಗವೀರ ಗಂಗೊಳ್ಳಿ ಸಂಪನ್ಮೂಲ ವ್ಯಕ್ತಿಯಾಗಿ ಉಪಸ್ಥಿತರಿದ್ದು ಮಾನವ ಹಕ್ಕುಗಳ ಅರಿವು ಪ್ರತಿಯೊಬ್ಬ ಮನುಷ್ಯನಿಗೂ ಅತ್ಯವಶ್ಯಕ. ವ್ಯಕ್ತಿ ಗೌರವ, ಹಕ್ಕುಗಳು, ಸ್ವಾತಂತ್ರ್ಯ, ಮಾನವೀಯ ಮೌಲ್ಯಗಳು ಮಾನವ ಹಕ್ಕುಗಳ ಪರಿಕಲ್ಪನೆಯಲ್ಲಿ ಅಡಕವಾಗಿದೆ. ಆ ನಿಟ್ಟಿನಲ್ಲಿ ನಾವೆಲ್ಲರೂ ಮಾನವ ಹಕ್ಕುಗಳ ಕುರಿತು ತಿಳಿದು ಬದುಕಬೇಕಾಗಿದೆ ಎಂದು ಹೇಳಿದರು.

ಹ್ಯೂಮನ್ ವ್ಯಾಲ್ಯೂಸ್ ಪ್ರೊಫೆಷನಲ್ ಎಥಿಕ್ಸ್ ಘಟಕದ ಸಂಯೋಜಕರು ಹಾಗೂ ಉಪ ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು. ಕಾರ್ಯಕ್ರಮದ ಇನ್ನೋರ್ವ ಸಂಯೋಜಕರು ಹಾಗೂ ಡೀನ್ ಅಕಾಡೆಮಿಕ್ ಗಿರಿರಾಜ ಭಟ್, ಮಾನವ ಹಕ್ಕುಗಳ ಘಟಕದ ಸಂಯೋಜಕರಾದ ಸುಧೀರ್ ಕುಮಾರ್ ಹಾಗೂ ಶ್ವೇತಾ ಭಂಡಾರಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಸುಜಯ್ ಶೆಟ್ಟಿ ಸಂಪನ್ಮೂಲ ವ್ಯಕ್ತಿಯನ್ನು ಪರಿಚಯಿಸಿದರು. ಶ್ರೀಶಾಂತ್ ಪ್ರಾರ್ಥಿಸಿದರು. ರಾಕೇಶ್ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಜ್ಞಾನದ ಕ್ತತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರೇ ಶಿಕ್ಷಕರು: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.6: ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವ ವ್ಯಕ್ತಿಯೇ ಶಿಕ್ಷಕ....

ಸೆ. 9: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.6: ನಗರದ ಕಲ್ಸಂಕ ಅಂಬಾಗಿಲು ರಸ್ತೆಯಲ್ಲಿರುವ ಸಾನ್ವಿ ಟ್ರೇರ‍್ಸ್ನಲ್ಲಿ ಸೆಪ್ಟೆಂಬರ್...

ಮಣಿಪಾಲ ಜ್ಞಾನಸುಧಾ: ಶಿಕ್ಷಕರ ದಿನಾಚರಣೆ; ನಿವೃತ್ತ ಶಿಕ್ಷಕರಿಗೆ ಸನ್ಮಾನ

ಮಣಿಪಾಲ, ಸೆ.6: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ...

ಡಾ. ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ

ಕುಂದಾಪುರ, ಸೆ.3: ಸಣ್ಣ ಕಥೆಗಳು ಮನುಷ್ಯನ ಜೀವನದಲ್ಲಿ ಅವನನ್ನು ಗಾಢವಾಗಿ ತಟ್ಟುವ...
error: Content is protected !!