ಕುಂದಾಪುರ, ಡಿ.14: ಮಂಗಳೂರು ವಿಶ್ವವಿದ್ಯಾನಿಲಯ ಅಂತರ್-ಕಾಲೇಜು ಮಟ್ಟದ ವಾರ್ಷಿಕ ಸಂಚಿಕೆ ಸ್ಪರ್ಧೆಯಲ್ಲಿ ಗಮನ ಸೆಳೆದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ 2024-25ನೇ ಸಾಲಿನ ವಾರ್ಷಿಕ ಸಂಚಿಕೆ ‘ಶಿಖರ’ ಅನಾವರಣ ಕಾರ್ಯಕ್ರಮ ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು. ಡಯಟ್ ಉಡುಪಿ ಇದರ ಪ್ರಾಂಶುಪಾಲರಾದ ಡಾ. ಅಶೋಕ್ ಕಾಮತ್ ರವರು ಶಿಖರ ಸಂಚಿಕೆಯನ್ನು ಅನಾವರಣಗೊಳಿಸಿ ಶುಭ ಹಾರೈಸಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಡಾ| ಕೆ. ಉಮೇಶ್ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಾಣಿಜ್ಯ ವಿಭಾಗದ ಪ್ರಾಧ್ಯಾಪಕ ಸುಧೀರ್ ಕುಮಾರ್ ಸ್ವಾಗತಿಸಿದರು. ಇಂಗ್ಲೀಷ್ ವಿಭಾಗದ ಪ್ರಾಧ್ಯಾಪಕಿ ರವಿನಾ ಸಿ. ಪೂಜಾರಿ ಅತಿಥಿಗಳನ್ನು ಪರಿಚಯಿಸಿದರು. ಶಿಖರ ವಾರ್ಷಿಕ ಸಂಚಿಕೆಯ ನಿರ್ವಾಹಕ ಸಂಪಾದಕರಾದ ಪ್ರವೀಣ್ ಮೊಗವೀರ ಗಂಗೊಳ್ಳಿ ವಂದಿಸಿದರು. ಕಾಲೇಜಿನ ಸಿ.ಎ., ಸಿ.ಎಸ್. ಹಾಗೂ ಸಿ.ಎಮ್.ಎ. ಸಾಧಕ ವಿದ್ಯಾರ್ಥಿಗಳನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ವಾಣಿಜ್ಯ ವಿಭಾಗದ ಪ್ರಾಧ್ಯಾಪಕಿ ದೀಪಾ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿ ಪಲ್ಲವಿ ಪ್ರಾರ್ಥಿಸಿದರು.




By
ForthFocus™