ಕೋಟೇಶ್ವರ, ಡಿ.14: ಮಾನವನು ಮಾನವನನ್ನು ಅರಿತು ಗೌರವಿಸಿ ಸಹಕಾರ ಸೌಹಾರ್ದತೆಯಿಂದ ಇರಲು ಮಾನವ ಹಕ್ಕು ಅತಿ ಅವಶ್ಯಕ. ಮಾನವ ಹಕ್ಕು ಮತ್ತು ಕರ್ತವ್ಯಗಳು ಒಂದೇ ನಾಣ್ಯದ ಎರಡು ಮುಖಗಳು. ಈ ಮಾನವೀಯ ಮೌಲ್ಯಗಳು ಇಂದಿಗೂ ಪ್ರಸ್ತುತ ಎಂದು ರಾಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕರಾದ ರೋಹಿಣಿ ಹೇಳಿದರು. ಕಾಳಾವರ ವರದರಾಜ ಎಂ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೋಟೇಶ್ವರದ ಐ ಕ್ಯೂ ಎಸಿ ಮಾನವಿಕ ಸಂಘ ಇತಿಹಾಸ ಮತ್ತು ರಾಜ್ಯಶಾಸ್ತ್ರ ವಿಭಾಗ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಮಾನವ ಹಕ್ಕುಗಳ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಕಾರ್ಯಕ್ರಮ ಉದ್ಘಾಟಿಸಿ ಅಧ್ಯಕ್ಷತೆ ವಹಿಸಿದ್ದರು. ಐ.ಕ್ಯೂ.ಎ.ಸಿ ಸಂಚಾಲಕ ನಾಗರಾಜ ಯು., ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ನಾಗರಾಜ ವೈದ್ಯ ಎಂ., ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಡಾ. ಶೇಖರ್ ಬಿ., ಮಾನವ ಹಕ್ಕುಗಳ ಸಂಘದ ರಕ್ಷಿತಾ ಮತ್ತು ಗಣೇಶ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಇತಿಹಾಸ ವಿಭಾಗದ ಮುಖ್ಯಸ್ಥರಾದ ಗಣೇಶ್ ಪೈ ಎಂ. ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಭಾಗೀರಥಿ ನಾಯ್ಕ ವಂದಿಸಿದರು. ನಾಗಮ್ಮ ಪ್ರಾರ್ಥಿಸಿ, ಕೃತಿಕಾ ಕಾರ್ಯಕ್ರಮ ನಿರೂಪಿಸಿದರು.




By
ForthFocus™