Friday, July 24, 2026
Friday, July 24, 2026

ಪಾಜಕ ಆನಂದತೀರ್ಥ ವಿದ್ಯಾಲಯ: ಏಐ ಲ್ಯಾಬ್ ಉದ್ಘಾಟನೆ

ಪಾಜಕ ಆನಂದತೀರ್ಥ ವಿದ್ಯಾಲಯ: ಏಐ ಲ್ಯಾಬ್ ಉದ್ಘಾಟನೆ

Date:

ಕಟಪಾಡಿ, ಡಿ.14: ಪಾಜಕ ಆನಂದತೀರ್ಥ ವಿದ್ಯಾಲಯದಲ್ಲಿ ಹೈಸ್ಕೂಲ್ ವಿದ್ಯಾರ್ಥಿಗಳಿಗಾಗಿ ಆರ್ಟಿಫೀಷಿಯಲ್ ಇಂಟಲಿಜೆನ್ಸ್ ಲ್ಯಾಬ್ ಉದ್ಘಾಟನೆಯನ್ನು ಶಾಲಾ ಆಡಳಿತ ಮಂಡಳಿ ಕಾರ್ಯದರ್ಶಿ ಸುಬ್ರಹ್ಮಣ್ಯ ಸಾಮಗ ನೆರವೇರಿಸಿದರು. ನಂತರ ಮಾತನಾಡಿದ ಅವರು, ಇಂದಿನ ಸ್ಪರ್ದಾತ್ಮಕ ಯುಗಕ್ಕೆ ಹೊಂದಿಕೊಂಡು ತಾಂತ್ರಿಕ ಶಿಕ್ಷಣದಲ್ಲಿ ಉನ್ನತ ಸ್ಥಾನ ಪಡೆಯಬೇಕಾದರೆ ಏಐ ತಂತ್ರಜ್ಞಾನದ ಅವಶ್ಯಕತೆ ಇಂದು ಅಗತ್ಯವಾಗಿದೆ. ಜಗತ್ತಿನ ಎಲ್ಲಾ ರಾಷ್ಟ್ರಗಳು ಈ ಏಐ ತಂತ್ರಜ್ಞಾನದಲ್ಲಿ ತೊಡಗಿಸಿಕೊಂಡು ಮುಂದಿನ ಎಲ್ಲಾ ವಿದ್ಯಮಾನಗಳಿಗೂ ಇದನ್ನೇ ಅವಲಂಬಿಸುವ ಕೆಲಸದಲ್ಲಿ ತೊಡಗಿವೆ. ಇದರಲ್ಲಿ ಭಾರತವೂ ಹೊರತಾಗಿಲ್ಲ, ಭಾರತವೂ ಲಕ್ಷಾಂತರ ಕೋಟಿ ಹಣವನ್ನು ಇದಕ್ಕಾಗಿಯೇ ಮೀಸಲಿಡುತ್ತಿದೆ. ಮುಂದಿನ ಯುವ ಪೀಳಿಗೆಗೆ ಇದರಿಂದ ಮಹತ್ವದ ಸ್ಥಾನ ಸಿಗುವುದರಲ್ಲಿ ಯಾವುದೇ ಅನುಮಾನ ಇಲ್ಲ ಎಂದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯಾಧ್ಯಕ್ಷ ನಾಗರಾಜ್ ಬಲ್ಲಾಳ್, ಉಪಾಧ್ಯಕ್ಷ ಹರಿಭಟ್, ಖಜಾಂಜಿ ಲಕ್ಷ್ಮೀನಾರಾಯಣ ಉಪಾಧ್ಯ, ಸದಸ್ರರಾದ ಸುದರ್ಶನ್ ರಾವ್, ಮಧ್ವರಾಜ್ ಭಟ್, ಪ್ರಾಂಶುಪಾಲೆ ಡಾ. ಗೀತಾ ಶಶಿಧರ್, ಶಾಲೆಯ ತಾಂತ್ರಿಕ ಶಿಕ್ಷಕ ವೃಂದದವರಾದ ಪವಿತ್ರ, ಪದ್ಮಜಾ, ರವೀಶ್, ಸುಹಾನ್, ವರ್ಷಿತಾ ಉಪಸ್ಥಿತರಿದ್ದರು. ಮಧ್ವರಾಜ್ ಭಟ್ ಧಾರ್ಮಿಕ ಕಾರ್ಯಕ್ರಮ ನೆರವೇರಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!