Friday, February 27, 2026
Friday, February 27, 2026

ನಮ್ಮ ಕನಸುಗಳನ್ನು ನನಸು ಮಾಡುವ ಹೊಣೆ ನಮ್ಮದೇ: ಜಿ.ಎಲ್.ತ್ರಿಪುರಾಂತಕ

ನಮ್ಮ ಕನಸುಗಳನ್ನು ನನಸು ಮಾಡುವ ಹೊಣೆ ನಮ್ಮದೇ: ಜಿ.ಎಲ್.ತ್ರಿಪುರಾಂತಕ

Date:

ಗಣಿತನಗರ, ಡಿ.20: ಬದುಕಿಗೆ ಆಸೆಗಳೇ ಇಂಧನ. ನಮ್ಮ ಸಾಮರ್ಥ್ಯದ ಅರಿವು ನಮಗಿರ ಬೇಕು. ನಮ್ಮ ಗೌರವದ ಸ್ಥಾನಮಾನಗಳು ಸಾವಿರ ಮಂದಿಗೆ ಕನಸಿನ ತಾಣವಾಗಿರುವಂತೆ ಬೆಳೆಯಬೇಕು. ಅತಿಯಾಸೆ ಇರುವವನು ಬಡವ, ಮಹತ್ತರವಾದ ಕನಸುಗಳನ್ನು ಕಾಣುವವನು ಶ್ರೀಮಂತ ಎಂದು ಮೈಸೂರಿನ ಸುತ್ತೂರು ಜೆ.ಎಸ್.ಎಸ್ ಸಂಸ್ಥೆಗಳ ಸಂಯೋಜನಾಧಿಕಾರಿ, ಲೇಖಕರು ಮತ್ತು ವಾಗ್ಮಿಯಾಗಿರುವ ಜಿ.ಎಲ್ ತ್ರಿಪುರಾಂತಕ ಹೇಳಿದರು.

ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಸಹಯೋಗದಲ್ಲಿ ನಡೆಯುತ್ತಿರುವ ಮೌಲ್ಯಸುಧಾ ಮಾಲಿಕೆ-43ರಲ್ಲಿ ‘ಆಕಾಂಕ್ಷೆಗಳು ಮತ್ತು ಕನಸುಗಳು’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸದಲ್ಲಿ ಮಾತನಾಡಿದರು. ಬೆಲೆಬಾಳುವ ಒಂದು ವಜ್ರ ದಕ್ಕಿದ ಮೇಲೆ ಎಷ್ಟಾದರೂ ಕಲ್ಲುಗಳನ್ನು ಕಲೆಹಾಕಬಹುದು. ಹೆತ್ತವರು ನಮ್ಮ ಆಸೆಗಳನ್ನು ಈಡೇರಿಸಬಹುದು. ಆದರೆ ನಮ್ಮ ಕನಸುಗಳನ್ನು ನನಸು ಮಾಡುವ ಹೊಣೆ ನಮ್ಮದೇ ಎಂದರು.

ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಟ್ರಸ್ಟಿ ಅನಿಲ್ ಕುಮಾರ್ ಜೈನ್, ಸಿ.ಇ.ಒ ಹಾಗೂ ಪ್ರಾಂಶುಪಾಲರಾದ ದಿನೇಶ್ ಎಂ ಕೊಡವೂರ್, ಉಪಪ್ರಾಂಶುಪಾಲರಾದ ಸಾಹಿತ್ಯ ಉಪಸ್ಥಿತರಿದ್ದರು. ಉಪನ್ಯಾಸಕಿ ಸಹನಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹಿರಿಯಡಕ: ಉದ್ಯೋಗ ಮೇಳ

ಹಿರಿಯಡಕ, ಫೆ.27: ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ಉದ್ಯೋಗ ಮಾಹಿತಿ...

ಹಲವಾರು ಕ್ಷೇತ್ರಗಳಲ್ಲಿ ಭಾರತ-ಇಸ್ರೇಲ್ ಒಪ್ಪಂದ

ನವದೆಹಲಿ, ಫೆ.27: ಭಾರತ ಮತ್ತು ಇಸ್ರೇಲ್ ಸಾಂಸ್ಕೃತಿಕ ವಿನಿಮಯ, ಭೂಭೌತಿಕ ಪರಿಶೋಧನೆ,...

90,000 ಕೋಟಿ ರೂಪಾಯಿಗಳ ಒಪ್ಪಂದಗಳಿಗೆ ಜಪಾನ್ ಕಂಪನಿಗಳೊಂದಿಗೆ ಉತ್ತರ ಪ್ರದೇಶ ಸರ್ಕಾರ ಸಹಿ

ಯು.ಬಿ.ಎನ್.ಡಿ., ಫೆ.27: ಉತ್ತರ ಪ್ರದೇಶ ಸರ್ಕಾರವು ಜಪಾನಿನ ವಿವಿಧ ಕಂಪನಿಗಳೊಂದಿಗೆ 90...

ಎನ್.ಸಿ.ಪಿ. ರಾಷ್ಟ್ರೀಯ ಅಧ್ಯಕ್ಷರಾಗಿ ಸುನೇತ್ರಾ ಪವಾರ್ ಆಯ್ಕೆ

ಮುಂಬಯಿ, ಫೆ.27: ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷ (ಎನ್.ಸಿ.ಪಿ.) ಮಹಾರಾಷ್ಟ್ರ ಉಪಮುಖ್ಯಮಂತ್ರಿ ಸುನೇತ್ರಾ...
error: Content is protected !!