Sunday, October 18, 2026
Sunday, October 18, 2026

ನಿಟ್ಟೆ: ಕ್ರಿಸ್ಮಸ್ ಆಚರಣೆ

ನಿಟ್ಟೆ: ಕ್ರಿಸ್ಮಸ್ ಆಚರಣೆ

Date:

ನಿಟ್ಟೆ, ಡಿ.24: ಕಾರ್ಕಳದ ನಿಟ್ಟೆ ಕ್ಯಾಂಪಸ್ ನಲ್ಲಿ ಕ್ರಿಸ್ ಮಸ್ ಹಬ್ಬವನ್ನು ಡಿ.23ರಂದು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕ್ರೈಸ್ಟ್ ಕಿಂಗ್ ಚರ್ಚ್ ಕಾರ್ಕಳದ ಸಹಾಯಕ ಧರ್ಮಗುರು ರೆವರೆಂಡ್ ಫಾದರ್ ಅವಿನಾಶ್ ಲೆಸ್ಲೆ ಪಾಯ್ಸ್ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡುತ್ತಾ, ಪ್ರೀತಿಯನ್ನು ನೀಡುವ ಮತ್ತು ಹರಡುವ ಮನೋಭಾವದ ಬಗ್ಗೆ ಸ್ಪೂರ್ತಿದಾಯಕ ಚಿಂತನೆ ನಡೆಸುವುದು ಅನುಸರಣೀಯ ಎಂದರು. ಗೌರವಾನ್ವಿತ ಅತಿಥಿಗಳಾದ ನಿಟ್ಟೆ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ಡಾ. ನಿರಂಜನ್ ಎನ್ ಚಿಪ್ಳೂಣ್ಕರ್ ಅವರು ಇಂತಹ ಆಚರಣೆಗಳು ಕ್ಯಾಂಪಸ್ ನಲ್ಲಿ ಒಂದು ರೀತಿಯ ಲವಲವಿಕೆಯನ್ನು ಅರಳಿಸುತ್ತದೆ ಎಂದರು. ನಿಟ್ಟೆ (ಡೀಮ್ಡ್ ಟು ಬಿ ಯೂನಿವರ್ಸಿಟಿ) ಆಫ್ ಕ್ಯಾಂಪಸ್ ಸೆಂಟರ್ ನ ಕ್ಯಾಂಪಸ್ ನಿರ್ವಹಣೆ ಮತ್ತು ಅಭಿವೃದ್ಧಿ ವಿಭಾಗದ ನಿರ್ದೇಶಕ ಪ್ರೊ. ಎ. ಯೋಗೀಶ್ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ತಮ್ಮ ಭಾಷಣದಲ್ಲಿ, ಅವರು ಏಕತೆ, ಸಹಾನುಭೂತಿ ಮತ್ತು ಕ್ರಿಸ್ ಮಸ್ ನ ನಿಜವಾದ ಸಾರವನ್ನು ವಿವರಿಸಿದರು. ವೇದಿಕೆಯಲ್ಲಿ ನಿಟ್ಟೆ ಸಮೂಹ ವಿದ್ಯಾಸಂಸ್ಥೆಯ ವಿವಿಧ ಅಂಗಸಂಸ್ಥೆಗಳ ಪ್ರಾಂಶುಪಾಲರು, ವಿದ್ಯಾರ್ಥಿ ವಸತಿಗೃಹದ ಮುಖ್ಯಸ್ಥರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!