Saturday, July 25, 2026
Saturday, July 25, 2026

ನಮ್ಮ ಆಲೋಚನೆಯಿಂದ ಚಾರಿತ್ರ್ಯ ನಿರ್ಮಾಣ: ವೀರೇಶ್ ಗದಿಗೆಪ್ಪಗೌಡ ಪಾಟೀಲ್

ನಮ್ಮ ಆಲೋಚನೆಯಿಂದ ಚಾರಿತ್ರ್ಯ ನಿರ್ಮಾಣ: ವೀರೇಶ್ ಗದಿಗೆಪ್ಪಗೌಡ ಪಾಟೀಲ್

Date:

ಗಣಿತನಗರ, ಸೆ.15: ಒಬ್ಬ ವ್ಯಕ್ತಿಯ ಯಶಸ್ಸಿಗೆ, ಕನಸನ್ನು ನನಸು ಮಾಡಲು ಪರಿಸ್ಥಿತಿ ಮುಖ್ಯವಲ್ಲ ಮನಸ್ಥಿತಿ ಮುಖ್ಯ. ಸಕಾರಾತ್ಮ ಆಲೋಚನೆಗಳಿಗೆ ಸೋಲಿಲ್ಲ. ಯಾರಿಗೆ ಹೆತ್ತವರ ಆಲೋಚನೆಗಳು ಅರ್ಥವಾಗುತ್ತವೆಯೋ ಅಂತವರು ಎಂದೂ ಹಾದಿ ತಪ್ಪಲು ಸಾದ್ಯವಿಲ್ಲ ಎಂದು ಸ.ಪ.ಪೂ.ಕಾಲೇಜು ಸದಲಗ, ಚಿಕ್ಕೋಡಿ ಇಲ್ಲಿನ ಉಪನ್ಯಾಸಕ ವೀರೇಶ್ ಗದಿಗೆಪ್ಪಗೌಡ ಪಾಟೀಲ್ ಹೇಳಿದರು. ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಸಹಯೋಗದಲ್ಲಿ ನಡೆಯುತ್ತಿರುವ ಮೌಲ್ಯಸುಧಾ ಮಾಲಿಕೆ-40ರಲ್ಲಿ “ಸಕಾರಾತ್ಮಕ ಆಲೋಚನೆ ಸಾಧನೆಗೆ ಪ್ರೇರಣೆ” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸದಲ್ಲಿ ಮಾತನಾಡಿದರು. ಕನಸನ್ನು ನನಸು ಮಾಡಲು ಸಕಾರಾತ್ಮಕ ಆಲೋಚನೆ ಮುಖ್ಯ. ನಮ್ಮನ್ನು ತುಂಬಾ ಸುಲಭವಾಗಿ ಸೋಲಿಸುವ ಆಯುಧ ಭಯ. ನಮಗೆ ನಾವೇ ಪ್ರೇರಣೆಯನ್ನು ತುಂಬ ಬೇಕು ಎನ್ನುತ್ತಾ ಅನೇಕ ಮಹಾತ್ಮರ ಜೀವನ ಸಂದೇಶಗಳನ್ನು ಪ್ರಸ್ತುತಪಡಿಸಿದರು.

ಕಾರ್ಯಕ್ರಮದಲ್ಲಿ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಟ್ರಸ್ಟಿ ಶ್ರೀ ಅನಿಲ್ ಕುಮಾರ್ ಜೈನ್, ಸಿ.ಇ.ಒ ಹಾಗೂ ಪ್ರಾಂಶುಪಾಲ ದಿನೇಶ್ ಎಂ ಕೊಡವೂರ್, ಪಿ.ಆರ್.ಒ ಜ್ಯೋತಿ ಪದ್ಮನಾಭ ಭಂಡಿ, ಉಪಪ್ರಾಂಶುಪಾಲರಾದ ಸಾಹಿತ್ಯ, ಹಿತೈಷಿ ದೇವೇಂದ್ರ ನಾಯಕ್ ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕ ವಿನಯಚಂದ್ರ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!