ಕುಂದಾಪುರ, ಸೆ.16: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ವತಿಯಿಂದ ವಂಡಾರಿನ ಶ್ರೀ ಕೃಷ್ಣ ಪ್ರಸಾದ್ ಗ್ರೂಪ್ ಆಫ್ ಇಂಡಸ್ಟ್ರೀಸ್ ಗೇರುಬೀಜ ಕಾರ್ಖಾನೆಗೆ ಕೈಗಾರಿಕೆಗೆ ಭೇಟಿಯನ್ನು ಹಮ್ಮಿಕೊಳ್ಳಲಾಯಿತು. ಶ್ರೀ ಕೃಷ್ಣ ಪ್ರಸಾದ್ ಗ್ರೂಪ್ ಆಫ್ ಇಂಡಸ್ಟ್ರೀಸ್‌ನ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ಸಂಪತ್ ಕುಮಾರ್ ಶೆಟ್ಟಿ ಗೇರು ಉದ್ಯಮದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಕಾಲೇಜಿನ ವ್ಯವಹಾರ ಆಡಳಿತ ವಿಭಾಗ ಹಾಗೂ ಶ್ರೀ ಕೃಷ್ಣ ಪ್ರಸಾದ್ ಗ್ರೂಪ್ ಆಫ್ ಇಂಡಸ್ಟ್ರೀಸ್ ಜೊತೆ ಪರಸ್ಪರ ಶೈಕ್ಷಣಿಕ ಒಡಂಬಡಿಕೆಯನ್ನು ಮಾಡಿಕೊಳ್ಳಲಾಯಿತು.
ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥರಾದ ನಂದಾ ರೈ, ಆಡಳಿತ ನಿಕಾಯಕರಾದ ರಕ್ಷಿತ್ ರಾವ್ ಗುಜ್ಜಾಡಿ, ಪ್ರಾಧ್ಯಾಪಕರುಗಳಾದ ರೇಷ್ಮಾ ಶೆಟ್ಟಿ ಹಾಗೂ ವಿಶಾಲಾಕ್ಷಿ ಉಪಸ್ಥಿತರಿದ್ದರು.




By
ForthFocus™