Monday, September 7, 2026
Monday, September 7, 2026

ರಥಬೀದಿ ಕಾಲೇಜು: ರಕ್ತದಾನ ಶಿಬಿರ

ರಥಬೀದಿ ಕಾಲೇಜು: ರಕ್ತದಾನ ಶಿಬಿರ

Date:

ಮಂಗಳೂರು, ಸೆ.18: ಡಾ. ಪಿ.ದಯಾನಂದ ಪೈ-ಪಿ.ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಥಬೀದಿ, ಮಂಗಳೂರು ಇಲ್ಲಿ ಯುವ ರೆಡ್‌ಕ್ರಾಸ್, ರೋವರ್-ರೇಂಜರ‍್ಸ್ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಘಟಕಗಳು, ಹಾಗೂ ಕೆ.ಎಂ.ಸಿ ಆಸ್ಪತ್ರೆ ಮಂಗಳೂರು ಇವರ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ಅರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರವನ್ನು ಕಾಲೇಜಿನ ಸಭಾಂಗಣದಲ್ಲಿ ಏರ್ಪಡಿಸಲಾಗಿತ್ತು. ಕೆ.ಎಂ.ಸಿ ಆಸ್ಪತ್ರೆ ಮಂಗಳೂರಿನ ವೈದ್ಯಾಧಿಕಾರಿ ಡಾ. ಸಿಂಚನ ಇವರು ಕಾರ್ಯಕ್ರಮ ಉದ್ಘಾಟಿಸಿ, ರಕ್ತದಾನದ ಮಹತ್ವ ಮತ್ತು ಪ್ರಯೋಜನಗಳ ಬಗ್ಗೆ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಜಯಕರ ಭಂಡಾರಿ ಎಂ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ರಕ್ತದಾನದಲ್ಲಿ ವಿದ್ಯಾರ್ಥಿಗಳು ಭಾಗವಹಿಸವುದರಿಂದ ಅವರಿಗೆ ಸಾಮಾಜಿಕ ಜನಬ್ದಾರಿಯ ಅರಿವಾಗುತ್ತದೆ ಎಂದು ಹೇಳಿದರು.

ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಯ ಆಸ್ಪತ್ರೆಯ ಸಿಬ್ಬಂದಿಗಳು ಹಾಗೂ ಸಹಾಯಕರು, ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕ, ರೋವರ್- ರೇಂಜರ‍್ಸ್, ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜಕರು ಮತ್ತು ಯೋಜನಾಧಿಕಾರಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಹಾಗೂ ಬೋಧಕರು ಸೇರಿ ಒಟ್ಟು 126 ಮಂದಿ ರಕ್ತದಾನಗೈದರು. ಸುಮಾರು 655 ವಿದ್ಯಾರ್ಥಿಗಳು ಆರೋಗ್ಯ ತಪಾಸಣಾ ಕಾರ್ಯಕ್ರಮದ ಪ್ರಯೋಜನವನ್ನು ಪಡೆದರು. ಮೈತ್ರಿ ಬಿ. ಸ್ವಾಗತಿಸಿ, ಸಿಂಚನಾ ವಂದಿಸಿದರು. ಸಾರ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಜ್ಞಾನದ ಕ್ತತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರೇ ಶಿಕ್ಷಕರು: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.6: ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವ ವ್ಯಕ್ತಿಯೇ ಶಿಕ್ಷಕ....

ಸೆ. 9: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.6: ನಗರದ ಕಲ್ಸಂಕ ಅಂಬಾಗಿಲು ರಸ್ತೆಯಲ್ಲಿರುವ ಸಾನ್ವಿ ಟ್ರೇರ‍್ಸ್ನಲ್ಲಿ ಸೆಪ್ಟೆಂಬರ್...

ಮಣಿಪಾಲ ಜ್ಞಾನಸುಧಾ: ಶಿಕ್ಷಕರ ದಿನಾಚರಣೆ; ನಿವೃತ್ತ ಶಿಕ್ಷಕರಿಗೆ ಸನ್ಮಾನ

ಮಣಿಪಾಲ, ಸೆ.6: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ...

ಡಾ. ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ

ಕುಂದಾಪುರ, ಸೆ.3: ಸಣ್ಣ ಕಥೆಗಳು ಮನುಷ್ಯನ ಜೀವನದಲ್ಲಿ ಅವನನ್ನು ಗಾಢವಾಗಿ ತಟ್ಟುವ...
error: Content is protected !!