Wednesday, September 30, 2026
Wednesday, September 30, 2026

ಗತವನ್ನು ನೆನೆಯದೆ ಭವಿಷ್ಯ ನಿರ್ಮಿಸಲಾಗದು: ತಾರಾನಾಥ ಗಟ್ಟಿ

ಗತವನ್ನು ನೆನೆಯದೆ ಭವಿಷ್ಯ ನಿರ್ಮಿಸಲಾಗದು: ತಾರಾನಾಥ ಗಟ್ಟಿ

Date:

ಬ್ರಹ್ಮಾವರ, ಸೆ.22: ಬಾರ್ಕೂರಿನಂತಹ ಐತಿಹಾಸಿಕ ಪ್ರದೇಶ ಚಾರಿತ್ರಿಕ ಕಾಲಘಟ್ಟದಲ್ಲಿ ತುಳುನಾಡಿನ ರಾಜಧಾನಿಯಾಗಿದ್ದು, ತನ್ನದೇ ವೈಶಿಷ್ಟ್ಯತೆಯನ್ನು ಹೊಂದಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರಾನಾಥ ಗಟ್ಟಿ ಕಾಪಿಕಾಡ್ ಹೇಳಿದರು. ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಶನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬಾರ್ಕೂರು, ಇಲ್ಲಿ ಕರ್ನಾಟಕ ತುಳು ಸಾಹಿತ್ಯ ಆಕಾಡೆಮಿಯ ಸಹಯೋಗದೊಂದಿಗೆ ನಡೆದ ಬಾರ್ಕೂರು – ಮರೆಯಲಾಗದ ತುಳುನಾಡಿನ ರಾಜಧಾನಿ ಎಂಬ ರಾಷ್ಟ್ರಮಟ್ಟದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು. ಗೋವಾ ವಿಶ್ವವಿದ್ಯಾನಿಲಯದ ಕಲಾ ನಿಕಾಯದ ಡೀನ್ ಮತ್ತು ಇತಿಹಾಸಕಾರರಾದ ಪ್ರೊ. ನಾಗೇಂದ್ರರಾವ್ ದಿಕ್ಸೂಚಿ ಭಾಷಣಗೈದರು. ಬಾರ್ಕೂರಿನ ಸಾಂಸ್ಕೃತಿಕ, ಆರ್ಥಿಕ ಮತ್ತು ಭೌಗೋಳಿಕ ಅನನ್ಯತೆ ತುಳುನಾಡು ಮತ್ತು ವಿಜಯನಗರ ಸಾಮ್ರಾಜ್ಯದ ನಡುವೆ ಬಾರ್ಕೂರು ಮುಖ್ಯ ಪ್ರದೇಶವಾಗಿದ್ದುದರ ಕುರಿತು ವಿವರಿಸಿದರು.

ವಿಚಾರ ಸಂಕಿರಣದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಪ್ರೊ. ಭಾಸ್ಕರ್ ಶೆಟ್ಟಿ ಸಲ್ವಾಡಿ ವಹಿಸಿದ್ದರು. ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಮಹೇಶ್ ಉಡುಪ, ತುಳು ಆಕಾಡೆಮಿ ರಿಜಿಸ್ಟಾರ್ ಪೂರ್ಣಿಮಾ, ಆಕಾಡೆಮಿ ಸದಸ್ಯರಾದ ಉದ್ಯಾವರ ನಾಗೇಶ್ ಕುಮಾರ್ ಉಪಸ್ಥಿತರಿದ್ದರು. ವಿಚಾರ ಸಂಕಿರಣವು 3 ಪ್ರಮುಖ ಗೋಷ್ಟಿಗಳನ್ನು ಹೊಂದಿದ್ದು, ಪ್ರಾಕ್ತನಶಾಸ್ತ್ರ ವಿದ್ವಾಂಸ ಪ್ರೊ. ಮುರಗೇಶಿ, ಇತಿಹಾಸತಜ್ಞ ಪ್ರೊ. ಜಗದೀಶ ಶೆಟ್ಟಿ, ಮಾಹೆ ಮಣಿಪಾಲ ಪ್ರಾಧ್ಯಾಪಕಿ ಪ್ರೊ. ದೀಪಿಕಾ ಶೆಟ್ಟಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ಕಾಲೇಜಿನ ಐಕ್ಯೂಎಸಿ ಸಂಚಾಲಕಿ ಶೋಭಾ ಆರ್ ಸ್ವಾಗತಿಸಿ, ವಿಚಾರ ಸಂಕಿರಣದ ಸಂಚಾಲಕರಾದ ಅಮೃತಾ ವಂದಿಸಿದರು. ಸಮಾಜಕಾರ್ಯ ವಿಭಾಗದ ಡಾ. ಶ್ರೀದೇವಿ ಕೆ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನ ಭದ್ರ ಬುನಾದಿ: ಡಾ.ಶ್ರೀಪಾದ್ ಭಟ್

ಉಡುಪಿ, ಸೆ.29: ಅಂಬೇಡ್ಕರ್ ರವರು ಶಿಕ್ಷಣಕ್ಕೆ ಅತ್ಯಂತ ಮಹತ್ವವನ್ನು ನೀಡಿದವರು. ಶಿಕ್ಷಣ...

ಮಣಿಪಾಲ ಜ್ಞಾನಸುಧಾ: ಎನ್.ಎಸ್. ಎಸ್ ದಿನಾಚರಣೆ

ಮಣಿಪಾಲ, ಸೆ.29: ಮಣಿಪಾಲ ಜ್ಞಾನಸುಧಾ ಪ. ಪೂ. ಕಾಲೇಜಿನಲ್ಲಿ ಎನ್.ಎಸ್. ಎಸ್...

ಸಂಗೊಳ್ಳಿ ರಾಯಣ್ಣ ಪುರಸ್ಕಾರಕ್ಕೆ ಸಂಘಟಕ, ರಂಗಕರ್ಮಿ ರವಿರಾಜ್ ಎಚ್. ಪಿ. ಆಯ್ಕೆ

ಉಡುಪಿ, ಸೆ.29: ಹತ್ತು ಹಲವು ಸಂಘ ಸಂಸ್ಥೆಯಲ್ಲಿ ತೊಡಗಿಸಿಕೊಂಡಿರುವ ಸಂಘಟಕ, ರಂಗಕರ್ಮಿ,...

ದೇಶದ ಕೃಷಿಯಲ್ಲಿ ರೈತ ಮಹಿಳೆಯರ ಪಾತ್ರ ಪ್ರಮುಖವಾದುದು: ವಿಧಾನಸಭೆ ಸಭಾಧ್ಯಕ್ಷ ಜಿ.ಎಸ್.ಪಾಟೀಲ

ಧಾರವಾಡ, ಸೆ.29: ರೈತರು ಬೆಳೆದ ಬೆಳೆಗಳಿಗೆ ಯೋಗ್ಯ ಬೆಲೆ ದೊರೆಯಬೇಕು. ವಿಶ್ವಸಂಸ್ಥೆಯು...
error: Content is protected !!