Sunday, September 27, 2026
Sunday, September 27, 2026

ವಿಶ್ವ ಸಾಕ್ಷರತಾ ದಿನಾಚರಣೆ

ವಿಶ್ವ ಸಾಕ್ಷರತಾ ದಿನಾಚರಣೆ

Date:

ಮಲ್ಪೆ, ಸೆ.9: ಇಂದಿನ ಡಿಜಿಟಲ್‌ ಯುಗದಲ್ಲಿ ಕಲಿಕೆಗೆ ಹಲವಾರು ಅವಕಾಶಗಳಿವೆ. ಆದರೆ ತಂತ್ರಜ್ಞಾನದ ದುರ್ಬಳಕೆ ಕೂಡ ಹೆಚ್ಚಾಗುತ್ತಿರುವ ನಿಟ್ಟಿನಲ್ಲಿ ಎಚ್ಚರಿಕೆಯಿಂದ ಹೆಜ್ಜೆ ಇಡುವುದು ಸೂಕ್ತ ಎಂದು ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ನಿತ್ಯಾನಂದ ಗಾಂವಕರ್‌ ಅಭಿಪ್ರಾಯಪಟ್ಟರು.

ಅವರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಐಕ್ಯೂಎಸಿ ಹಾಗೂ ಎಲ್ಲಾ ಪಿ.ಜಿ ವಿಭಾಗಗಳ ಜಂಟಿ ಆಶ್ರಯದಲ್ಲಿ ಮಂಗಳವಾರ ಆಯೋಜಿಸಲಾದ ʼವಿಶ್ವ ಸಾಕ್ಷರತಾ ದಿನಾಚರಣೆʼ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕ್ರಮ ಸಂಯೋಜಕರಾದ ಆಂಗ್ಲಭಾಷಾ ವಿಭಾಗ ಮುಖ್ಯಸ್ಥ ಹಾಗೂ ಶೈಕ್ಷಣಿಕ ಸಲಹೆಗಾರ ಡಾ. ಶ್ರೀಧರ ಭಟ್‌ ಅವರು ಕಲಿಕೆಯಲ್ಲಿ ಔನತ್ಯ ಸಾಧಿಸಲು ತಂತ್ರಜ್ಞಾನದ ಸದ್ಭಳಕೆ ಅನಿವಾರ್ಯ ಎಂದರು. ಐಕ್ಯೂಎಸಿ ಸಂಚಾಲಕ ಡಾ. ವಿಷ್ಣುಮೂರ್ತಿ ಪ್ರಭು, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ಸಂದೇಶ್‌ ಕುಮಾರ್, ರಾಜಕುಮಾರ್ ಹಾಗೂ ವಿವಿಧ ಸ್ನಾತಕೋತ್ತರ ವಿಭಾಗಗಳ ಮುಖ್ಯಸ್ಥರು ಕಾರ್ಯಕ್ರಮದಲ್ಲಿ ಹಾಜರಿದ್ದರು. ವಿವಿಧ ಸ್ನಾತಕೋತ್ತರ ವಿಭಾಗಗದ 60 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟಾಟಾ ಏರಿಸ್ ಬಿಡುಗಡೆ: ಮಾರುತಿ ಡಿಜೈರ್‌ಗೆ ಹೊಸ ಪ್ರತಿಸ್ಪರ್ಧಿಯಾಗಲಿದೆಯೇ ಈ ಕಾರು?

ನವದೆಹಲಿ, ಸೆ.26: ಟಾಟಾ ಮೋಟಾರ್ಸ್ ಭಾರತದಲ್ಲಿ 'ಏರಿಸ್' ಅನ್ನು ರೂ. 5.29...

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನಕ್ಕಾಗಿ ಭಾರತದ ಪ್ರಯತ್ನಕ್ಕೆ ಪೋರ್ಚುಗಲ್ ಮತ್ತು ಮಾರಿಷಸ್ ಬೆಂಬಲ

ನವದೆಹಲಿ, ಸೆ.26: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನ ಪಡೆಯುವ ಭಾರತದ...

ಏಷ್ಯನ್ ಗೇಮ್ಸ್‌ ಕಬಡ್ಡಿ: ಭಾರತಕ್ಕೆ ಅವಳಿ ಚಿನ್ನ

ಯು.ಬಿ.ಎನ್.ಡಿ., ಸೆ.26: ಜಪಾನ್‌ನಲ್ಲಿ ನಡೆಯುತ್ತಿರುವ ಐಚಿ-ನಗೋಯಾ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ...

ಎಸ್.ಐ.ಆರ್ ಆದೇಶ ಸರ್ವಾನುಮತದಿಂದ ಅನುಮೋದನೆ: ಚುನಾವಣಾ ಆಯೋಗ

ನವದೆಹಲಿ, ಸೆ.26: ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಸ್.ಐ.ಆರ್ ಆದೇಶ...
error: Content is protected !!