Saturday, October 3, 2026
Saturday, October 3, 2026

ಬಿ.ಬಿ. ಹೆಗ್ಡೆ ಕಾಲೇಜು: ಲಾಜಿಸ್ಟಿಕ್ ಹಾಗೂ ಸಪ್ಲೈ ಚೈನ್ ಮ್ಯಾನೇಜ್ಮೆಂಟ್ ಕುರಿತು ವಿಶೇಷ ಉಪನ್ಯಾಸ

ಬಿ.ಬಿ. ಹೆಗ್ಡೆ ಕಾಲೇಜು: ಲಾಜಿಸ್ಟಿಕ್ ಹಾಗೂ ಸಪ್ಲೈ ಚೈನ್ ಮ್ಯಾನೇಜ್ಮೆಂಟ್ ಕುರಿತು ವಿಶೇಷ ಉಪನ್ಯಾಸ

Date:

ಕುಂದಾಪುರ, ಸೆ.29: ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ವತಿಯಿಂದ 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಪರಿಚಯಿಸಲಾದ ಲಾಜಿಸ್ಟಿಕ್ ಹಾಗೂ ಸಪ್ಲೈ ಚೈನ್ ಮ್ಯಾನೇಜ್ಮೆಂಟ್ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾಲೇಜಿನ ಮೂಕಾಂಬಿಕ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಮ್ಯಾಕ್ಸಿಸ್ ಡಿಸ್ಟ್ರಿಬ್ಯೂಷನ್ ದುಬೈ ಕಂಪನಿಯ ಸಪ್ಲೈ ಚೈನ್ ಎಕ್ಸಿಕ್ಯೂಟಿವ್ ಪೂರ್ಣಚಂದ್ರ ನಾಯಕ್‌ರವರು ಪ್ರಥಮ ವರ್ಷದ ಬಿಬಿಎ ವಿದ್ಯಾರ್ಥಿಗಳಿಗೆ ಸಪ್ಲೈ ಮ್ಯಾನೇಜ್ಮೆಂಟ್ ವಲಯದಲ್ಲಿನ ಉದ್ಯೋಗ ಅವಕಾಶಗಳ ಹೊಸ ಸಾಧ್ಯತೆಗಳು ಮತ್ತು ಸವಾಲುಗಳನ್ನು ತಿಳಿಸಿದರು.

ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥರಾದ ನಂದಾ ರೈ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಥಮ ಬಿಬಿಎ ವಿಭಾಗದ ವಿದ್ಯಾರ್ಥಿಯಾದ ರಾಹುಲ್ ಎಸ್. ಗೋಡೆ ಸ್ವಾಗತಿಸಿ, ಮನೋಜ್ ಸಂಪನ್ಮೂಲ ವ್ಯಕ್ತಿಯನ್ನು ಪರಿಚಯಿಸಿ, ರೋನಿತ್ ಕುಮಾರ್ ಶೆಟ್ಟಿ ವಂದಿಸಿ, ಮಾನ್ಯ ಆಚಾರ್ಯ ಪ್ರಾರ್ಥಿಸಿದರು. ಪ್ರತೀಕ್ಷಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ- ದಶಮಾನೋತ್ಸವ ಕಾರ್ಯಕ್ರಮ ಹಾಗೂ ವಾರ್ಷಿಕ ಸಾಮಾನ್ಯ ಸಭೆ

ಉಡುಪಿ, ಅ.2: ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ, ಉಡುಪಿ...

ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ

ಬೆಂಗಳೂರು, ಅ.2: ಮಹಾತ್ಮ ಗಾಂಧಿ ಜಯಂತಿಯ ಅಂಗವಾಗಿ ಬೆಂಗಳೂರಿನ ಗಾಂಧಿ ಭವನದಲ್ಲಿ...

ಏಷ್ಯನ್ ಗೇಮ್ಸ್: ಭಾರತದ ಒಟ್ಟು ಪದಕಗಳ ಸಂಖ್ಯೆ 76ಕ್ಕೆ ಏರಿಕೆ; ಪದಕ ಪಟ್ಟಿಯಲ್ಲಿ ಐದನೇ ಸ್ಥಾನ

ಯು.ಬಿ.ಎನ್.ಡಿ., ಅ.2: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಪದಕ...
error: Content is protected !!