Saturday, October 3, 2026
Saturday, October 3, 2026

ವಿದ್ಯಾರ್ಥಿಗಳಲ್ಲಿ ಎನ್.ಎಸ್.ಎಸ್ ಸಚ್ಚಾರಿತ್ರ‍್ಯವನ್ನು ಬೆಳೆಸುತ್ತದೆ: ಸಂತೋಷ್ ನಾಯ್ಕ್

ವಿದ್ಯಾರ್ಥಿಗಳಲ್ಲಿ ಎನ್.ಎಸ್.ಎಸ್ ಸಚ್ಚಾರಿತ್ರ‍್ಯವನ್ನು ಬೆಳೆಸುತ್ತದೆ: ಸಂತೋಷ್ ನಾಯ್ಕ್

Date:

ಶಂಕರನಾರಾಯಣ, ಸೆ.30: ರಾಷ್ಟ್ರೀಯ ಸೇವಾ ಯೋಜನೆಯು ಕಾಲೇಜಿನಲ್ಲಿ ಉತ್ತಮ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ವಾತಾವರಣವನ್ನು ಸೃಷ್ಟಿಸುವಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತದೆ. ಸಮಾಜ ಸೇವೆ ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸಿ ಅವರನ್ನು ಉತ್ತಮ ವ್ಯಕ್ತಿಗಳನ್ನಾಗಿ ಮಾಡುವಲ್ಲಿ ಸಹಕಾರಿಯಾಗುತ್ತದೆ. ರಾಷ್ಟ್ರೀಯ ಸೇವಾ ಯೋಜನೆ ಅಡಿಯಲ್ಲಿ ನಡೆಸುವ ವಾರ್ಷಿಕ ವಿಶೇಷ ಶಿಬಿರ ವಿದ್ಯಾರ್ಥಿ ಜೀವನದಲ್ಲಿ ಮಹತ್ತರ ಸಕಾರಾತ್ಮಕ ಪರಿಣಾಮವನ್ನು ಬೀರುತ್ತದೆ. ಹಾಗಾಗಿ ಎಲ್ಲಾ ಎನ್ ಎಸ್ ಎಸ್ ಸ್ವಯಂಸೇವಕರು ಕನಿಷ್ಠ ಒಂದು ಬಾರಿಯಾದರೂ ಭಾಗವಹಿಸಬೇಕೆಂದು ಲಕ್ಷ್ಮಿ ಸೋಮ ಬಂಗೇರ ಸ.ಪ್ರ.ದ.ಕಾಲೇಜು ಕೋಟ-ಪಡುಕೆರೆ ಇಲ್ಲಿನ ವಾಣಿಜ್ಯ ಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಶ್ರೀ ಸಂತೋಷ್ ನಾಯ್ಕ್ ಎಚ್ ಕರೆ ನೀಡಿದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಶಂಕರನಾರಾಯಣದಲ್ಲಿ ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಗದಲ್ಲಿ ನಡೆದ ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆ ಮತ್ತು ಅಭಿವಿನ್ಯಾಸ ಕಾರ್ಯಕ್ರಮದಲ್ಲಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ದ್ವಿತೀಯ ಬಿಎ ವಿದ್ಯಾರ್ಥಿನಿ ಸಿಂಚನ ಮತ್ತು ದ್ವಿತೀಯ ಬಿ.ಕಾಂ ವಿದ್ಯಾರ್ಥಿನಿ ಸಿಂಚನ “ದೇಶ ಸೇವೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಪಾತ್ರ” ಎಂಬ ವಿಷಯದ ಕುರಿತು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡಾ. ವೆಂಕಟರಾಮ್ ಭಟ್ ಅವರು ಮಾತನಾಡಿ ವಿದ್ಯಾರ್ಥಿಗಳು ಎನ್.ಎಸ್.ಎಸ್ ನಲ್ಲಿ ತೊಡಗಿಸಿಕೊಳ್ಳುವ ಮೂಲಕ ವ್ಯಕ್ತಿತ್ವ ವಿಕಸನ ಮಾಡಿಕೊಳ್ಳಬೇಕು ಎಂದು ಹೇಳಿದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ವಸಂತ್ ಜಿ ಉಪಸ್ಥಿತರಿದ್ದರು. ರಾಷ್ಟ್ರೀಯ ಸೇವಾ ಯೋಜನೆ ಘಟಕ ೨ರ ಯೋಜನಾಧಿಕಾರಿ ಪ್ರಜ್ಞಾ ಸ್ವಾಗತಿಸಿ, ದ್ವಿತೀಯ ಬಿಎ ವಿದ್ಯಾರ್ಥಿನಿ ಚೈತನ್ಯಾ ನಿರೂಪಿಸಿದರು. ರತಿಕಾ ಸಂಪನ್ಮೂಲ ವ್ಯಕ್ತಿ ಪರಿಚಯ ಮಾಡಿದರು ಹಾಗೂ ಅಕ್ಷತಾ ಬಿರಾದಾರ್ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ- ದಶಮಾನೋತ್ಸವ ಕಾರ್ಯಕ್ರಮ ಹಾಗೂ ವಾರ್ಷಿಕ ಸಾಮಾನ್ಯ ಸಭೆ

ಉಡುಪಿ, ಅ.2: ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ, ಉಡುಪಿ...

ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ

ಬೆಂಗಳೂರು, ಅ.2: ಮಹಾತ್ಮ ಗಾಂಧಿ ಜಯಂತಿಯ ಅಂಗವಾಗಿ ಬೆಂಗಳೂರಿನ ಗಾಂಧಿ ಭವನದಲ್ಲಿ...

ಏಷ್ಯನ್ ಗೇಮ್ಸ್: ಭಾರತದ ಒಟ್ಟು ಪದಕಗಳ ಸಂಖ್ಯೆ 76ಕ್ಕೆ ಏರಿಕೆ; ಪದಕ ಪಟ್ಟಿಯಲ್ಲಿ ಐದನೇ ಸ್ಥಾನ

ಯು.ಬಿ.ಎನ್.ಡಿ., ಅ.2: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಪದಕ...
error: Content is protected !!