Tuesday, September 8, 2026
Tuesday, September 8, 2026

ಬಿ.ಬಿ. ಹೆಗ್ಡೆ ಕಾಲೇಜು: ಯುವ ರೆಡ್‌ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

ಬಿ.ಬಿ. ಹೆಗ್ಡೆ ಕಾಲೇಜು: ಯುವ ರೆಡ್‌ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Date:

ಕುಂದಾಪುರ, ಸೆ.11: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಇಂಡಿಯನ್ ರೆಡ್‌ಕ್ರಾಸ್ ಘಟಕದ ಸಭಾಪತಿಗಳಾದ ಜಯಕರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಕಾಲೇಜಿನಲ್ಲಿ ಯುವ ರೆಡ್‌ಕ್ರಾಸ್ ಘಟಕದ ಕಾರ್ಯವೈಖರಿ ಕುರಿತು ವಿವರಿಸಿ, ಕಾಲೇಜಿನ ರೆಡ್‌ಕ್ರಾಸ್ ಘಟಕ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುವುದು ಹೆಮ್ಮೆಯ ಸಂಗತಿ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು. ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ಕೋಶಾಧಿಕಾರಿಯಾದ ಶಿವರಾಮ ಶೆಟ್ಟಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ ಸಮಾಜದ ಶ್ರೇಯೋಭಿವೃದ್ಧಿಯಲ್ಲಿ ಯುವ ರೆಡ್‌ಕ್ರಾಸ್ ವಿದ್ಯಾರ್ಥಿಗಳು ಬೇರೆ-ಬೇರೆ ಮಜಲುಗಳಲ್ಲಿ ಸೇವಾ ಭಾವನೆಯಿಂದ ಪಾಲ್ಗೊಳ್ಳಬೇಕು ಎಂದು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಯುವ ರೆಡ್‌ಕ್ರಾಸ್ ಘಟಕದ ಸಂಯೋಜಕರಾದ ಯೋಗೀಶ್ ಶ್ಯಾನುಭೋಗ್ ಸ್ವಾಗತಿಸಿದರು. ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ದೀಪಾ ಪೂಜಾರಿ ವಂದಿಸಿದರು. ವಿದ್ಯಾರ್ಥಿ ಪ್ರತಿನಿಧಿಗಳಾದ ಪ್ರಮೋಕ್ಷ ದ್ವಿತೀಯ ಬಿಸಿಎ ಹಾಗೂ ವಿದ್ಯಾಶ್ರೀ ದ್ವಿತೀಯ ಬಿ.ಕಾಂ. ಉಪಸ್ಥಿತರಿದ್ದರು. ವಿದ್ಯಾರ್ಥಿನಿ ರಚನಾ ಮತ್ತು ತಂಡ ಪ್ರಾರ್ಥಿಸಿದರು. ಕಳೆದ ಶೈಕ್ಷಣಿಕ ವರ್ಷದಲ್ಲಿ ರಾಜ್ಯ ಹಾಗೂ ವಿಶ್ವವಿದ್ಯಾಲಯ ಮಟ್ಟದ ಯುವ ರೆಡ್‌ಕ್ರಾಸ್ ಘಟಕದ ಶಿಬಿರದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸಲಾಯಿತು. ಸ್ವಯಂಸೇವಕಿ ಸನ್ಮಿತಾ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿಯಲ್ಲಿ ಕೇರಳದ ಸಾಂಸ್ಕೃತಿಕ ವೈಭವ: ಓಣಂ ಸಂಭ್ರಮಕ್ಕೆ ಮನಸೋತ ಕರಾವಳಿಗರು

ಉಡುಪಿ, ಸೆ.7: ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಮಹೋತ್ಸವದ ಸಂಭ್ರಮದ ನಡುವೆಯೇ...

ಕ್ರಿಯೇಟಿವ್ ಗುರುದೇವೋಭವ: ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಭಾಗಿ

ಕಾರ್ಕಳ, ಸೆ.7: ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಕ್ರಿಯೇಟಿವ್...

ಸರಸ್ವತಿ ವಿದ್ಯಾಲಯದಲ್ಲಿ ಇ ವೇಸ್ಟ್ ಮ್ಯಾನೇಜ್ಮೆಂಟ್ ಕಾರ್ಯಕ್ರಮ

ಗಂಗೊಳ್ಳಿ, ಸೆ.7: ಇ ತ್ಯಾಜ್ಯಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡುವುದು ಹೇಗೆ...

ತ್ರಿಶಾ ವಿದ್ಯಾ ಪಿಯು ಕಾಲೇಜು ಕಟಪಾಡಿ: ಕಾಪು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಕಟಪಾಡಿ, ಸೆ.7: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ತ್ರಿಶಾ...
error: Content is protected !!