ಕೋಟೇಶ್ವರ, ಅ.29: ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ, ಕೋಟೇಶ್ವರ ಇಲ್ಲಿ ನಿರ್ವಹಣಾಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಿಗೆ ವ್ಯವಹಾರ ಯೋಜನೆ ಪ್ರಸ್ತುತಿಯನ್ನು ನಿರ್ವಹಣಾಶಾಸ್ತ್ರ ವಿಭಾಗದಿಂದ ನಡೆಯಿತು. ವಿದ್ಯಾರ್ಥಿಗಳು ವ್ಯವಹಾರದ ಯೋಜನೆಯನ್ನು ವಿವರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಡಾ. ದಿವ್ಯಾ ಎಂ.ಎಸ್. ಸಹಾಯಕ ಪ್ರಾಧ್ಯಾಪಕರು ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಅಜ್ಜರಕಾಡು, ಉಡುಪಿ ಹಾಗೂ ರಾಮಚಂದ್ರ ಭಟ್, ಸಹಾಯಕ ಪ್ರಾಧ್ಯಾಪಕರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೋಟ-ಪಡುಕೆರೆ ಆಗಮಿಸಿದ್ದರು. ನಿರ್ವಹಣಾಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಚೇತನಾ ಎಂ. ಸಂಯೋಜಿಸಿದರು. ಕಾಲೇಜಿನ ಉಪನ್ಯಾಸಕರಾದ ಗಣೇಶ್ ಪೈ. ಎಂ., ಡಾ. ಶೇಖರ ಬಿ., ಡಾ. ಉದಯ ಶೆಟ್ಟಿ ಕೆ., ಡಾ. ಭಾಗೀರಥಿ ನಾಯ್ಕ, ಕುಮಾರ ದೊಡ್ಡಮನಿ ಹಾಗೂ ಅಮಿತಾ ಉಪಸ್ಥಿತರಿದ್ದರು.




By
ForthFocus™