Sunday, September 6, 2026
Sunday, September 6, 2026

ರಥಬೀದಿ ಕಾಲೇಜಿನಲ್ಲಿ ಅಂತರ್-ಕಾಲೇಜು ಚೆಸ್ ಪಂದ್ಯಾಟ

ರಥಬೀದಿ ಕಾಲೇಜಿನಲ್ಲಿ ಅಂತರ್-ಕಾಲೇಜು ಚೆಸ್ ಪಂದ್ಯಾಟ

Date:

ಮಂಗಳೂರು, ನ.5: ಡಾ. ಪಿ. ದಯಾನಂದ ಪೈ-ಪಿ. ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಥಬೀದಿ ಇಲ್ಲಿನ ದೈಹಿಕ ಶಿಕ್ಷಣ ವಿಭಾಗ ಮತ್ತು ಐಕ್ಯೂಎಸಿ ಇದರ ಜಂಟಿ ಆಶ್ರಯದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಸರಕಾರಿ ಕಾಲೇಜು ಚೆಸ್ ಪಂದ್ಯಾಟ ಚದುರಂಗ ೨೦೨೫-೨೬ ಸಂಘಟಿಸಲಾಯಿತು. ಕರ್ನಾಟಕ ರಾಜ್ಯ ಅಂಡರ್ ೧೫ ಮತ್ತು ಅಂಡರ್ ೧೯ ಚೆಸ್ ಚಾಂಪಿಯನ್ ಆರುಷಿ ಸೆವೆರನ್ ಹೆಲೆನ್ ಡಿ’ಸಿಲ್ವ ಪಂದ್ಯಾಟವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಪ್ರೊ. ಜಯಕರ ಭಂಡಾರಿ ಎಂ. ವಹಿಸಿದ್ದರು.

ಡೆರಿಕ್ ಚೆಸ್ ತರಬೇತಿ ಸಂಸ್ಥೆಯ ಸ್ಥಾಪಕ ಡೆರಿಕ್ ಪಿಂಟೊ, ಐಕ್ಯೂಎಸಿ ಸಂಯೋಜಕ ದೇವಿಪ್ರಸಾದ್, ಐಕ್ಯೂಎಸಿ ಸಹ-ಸಂಯೋಜಕಿ ಡಾ. ಜ್ಯೋತಿಪ್ರಿಯಾ, ದೈಹಿಕ ಶಿಕ್ಷಣ ನಿರ್ದೇಶಕಿ ಡಾ. ಅಪರ್ಣ ಆಳ್ವ ಎನ್., ಕ್ರೀಡಾ ಕಾರ್ಯದರ್ಶಿಗಳಾದ ಹೃನ್ಮ ಮತ್ತು ಕೌಶಿಕ್ ಆರ್. ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ನಿರ್ದೇಶಕಿ ಹಾಗೂ ಸಂಚಾಲಕಿ ಶುಭ ಕೆ.ಹೆಚ್ ಸ್ವಾಗತಿಸಿದರು, ವಿದ್ಯಾರ್ಥಿನಿಗಳಾದ ಲತಿಕಾ ನಿರೂಪಿಸಿ, ತೇಜಸ್ವಿನಿ ವಂದಿಸಿದರು.

ಪಂದ್ಯಾಟದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಸಂಯೋಜಿತ ೧೭ ಸರ್ಕಾರಿ ಕಾಲೇಜುಗಳ ಪುರುಷ ಮತ್ತು ಮಹಿಳಾ ಚೆಸ್ ತಂಡಗಳು ಭಾಗವಹಿಸಿದ್ದು, ಸಮಗ್ರ ಪ್ರಥಮ ಸ್ಥಾನವನ್ನು ಅತಿಥೇಯ ಡಾ. ಪಿ. ದಯಾನಂದ ಪೈ-ಪಿ. ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಥಬೀದಿ, ಮಂಗಳೂರು, ದ್ವಿತೀಯ ಸ್ಥಾನವನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ, ತೃತೀಯ ಸ್ಥಾನವನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬೆಳ್ಳಾರೆ ಹಾಗೂ ನಾಲ್ಕನೇ ಸ್ಥಾನವನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬೈಂದೂರು ಪಡೆದುಕೊಂಡಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ಕೃಷ್ಣ ಮಠ: ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಅರ್ಘ್ಯ ಪ್ರದಾನ

ಉಡುಪಿ, ಸೆ.5: ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶುಕ್ರವಾರ ಮಧ್ಯರಾತ್ರಿ ಚಂದ್ರೋದಯ...

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...
error: Content is protected !!