Saturday, September 12, 2026
Saturday, September 12, 2026

ಭ್ರಷ್ಟಾಚಾರ ನಿರ್ಮೂಲನೆ ಯುವಜನರ ಹೊಣೆ: ಗಾನ ಕುಮಾರ್

ಭ್ರಷ್ಟಾಚಾರ ನಿರ್ಮೂಲನೆ ಯುವಜನರ ಹೊಣೆ: ಗಾನ ಕುಮಾರ್

Date:

ಮಂಗಳೂರು, ನ.7: ಡಾ. ಪಿ. ದಯಾನಂದ ಪೈ-ಪಿ. ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಡಾ. ಪಿ. ದಯಾನಂದ ಪೈ-ಪಿ. ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ದಕ್ಷಿಣ ಕನ್ನಡ,ಮಂಗಳೂರು ಹಾಗೂ ಕರ್ನಾಟಕ ಲೋಕಾಯುಕ್ತ ಪೊಲೀಸ್ ಠಾಣೆ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ‘ಜಾಗೃತಿ ಅರಿವು ಸಪ್ತಾಹ-೨೦೨೫’ಅಂಗವಾಗಿ ‘ಭ್ರಷ್ಟಾಚಾರ ಜಾಗೃತಿ’ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ದ.ಕ. ಜಿಲ್ಲಾ ಲೋಕಾಯುಕ್ತ ಉಪಾಧೀಕ್ಷಕರಾದ ಡಾ. ಗಾನ ಪಿ. ಕುಮಾರ್ ಅವರು ಭ್ರಷ್ಟಾಚಾರದ ವಿವಿಧ ಆಯಾಮಗಳ ಬಗ್ಗೆ ಹಾಗೂ ಭವಿಷ್ಯದ ಜವಾಬ್ದಾರಿಯುತ ನಾಗರಿಕರಾಗಿ ಅದನ್ನು ತಡೆಯಲು ಲಭ್ಯವಿರುವ ಅವಕಾಶಗಳು ಮತ್ತು ವಿಧಾನಗಳ ಬಗ್ಗೆ ಮಾಹಿತಿ ನೀಡಿದರು.

ಮುಖ್ಯ ಅತಿಥಿಯಾಗಿದ್ದ ಕಾನೂನು ಸೇವೆಗಳ ಪ್ರಾಧಿಕಾರದ ವಿಶೇಷ ಸರ್ಕಾರಿ ಅಭಿಯೋಜಕರಾದ ರವಿಂದ್ರ ಮುನ್ನಿಪಾಡಿ, ಭ್ರಷ್ಟಾಚಾರದ ಪ್ರತಿಬಂಧಕ ಕಾಯ್ದೆ- 1998ಯ ಕುರಿತು ಮತ್ತು ಕಾನೂನು ಸೇವೆಗಳ ಪ್ರಾಧಿಕಾರದಿಂದ ಲಭ್ಯವಿರುವ ಉಚಿತ ಸೇವೆ ಮತ್ತು ಸಲಹೆಗಳ ಬಗ್ಗೆ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಜಯಕರ ಭಂಡಾರಿ ಎಂ. ಅವರು ವಹಿಸಿದ್ದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಹಾಗೂ ಬೋಧಕರು ಭ್ರಷ್ಟಾಚಾರದ ವಿರುದ್ಧ ಪ್ರತಿಜ್ಞೆ ಸ್ವೀಕರಿಸಿದರು.

ದ.ಕ. ಜಿಲ್ಲಾ ಲೋಕಾಯುಕ್ತ ಡಿವೈಎಸ್ ಪಿ ಸುರೇಶ್ ಕುಮಾರ್ ಪಿ., ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ದುಗ್ಗಪ್ಪ ಕಜೆಕಾರು, ಎಂ.ಕಾಂ ವಿಭಾಗದ ಸಂಯೋಜಕರಾದ ಡಾ. ಲೋಕೇಶ್ ನಾಥ್ ಬಿ., ಕಲಾ ವೇದಿಕೆಯ ಸಂಯೋಜಕರಾದ ಪ್ರೊ. ಕೃಷ್ಣಪ್ರಭ, ಬೋಧಕರು, ಲೋಕಾಯುಕ್ತ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು. ಲೋಕಾಯುಕ್ತ ಕಚೇರಿ ಸಿಬ್ಬಂದಿ ಮಹೇಶ್ ಹೆಚ್.ಸಿ. ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸೆ. 16: ಡಿ ಮಾರ್ಟ್ ನಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಉಡುಪಿ, ಸೆ.11: ನಗರದ ಕಲ್ಸಂಕ ಜಂಕ್ಷನ್ ಬಳಿಯ ಭಾರತ್ ಪ್ರೆಸ್ ಎದುರುಗಡೆಯ...

ಉಡುಪಿ ರೆಡ್ ಕ್ರಾಸಿಗೆ ರಾಷ್ಟ್ರೀಯ ಸಮಿತಿ ಸದಸ್ಯರ ಭೇಟಿ

ಉಡುಪಿ, ಸೆ.11: ಭಾರತೀಯ ರೆಡ್ ಕ್ರಾಸ್ ಸೊಸೈಟಿ ನವದೆಹಲಿ ಇಲ್ಲಿನ ಆಡಳಿತ...
error: Content is protected !!