Thursday, July 30, 2026
Thursday, July 30, 2026

ಪೋಕ್ಸೋ ಮಾಹಿತಿ ಕಾರ್ಯಕ್ರಮ

ಪೋಕ್ಸೋ ಮಾಹಿತಿ ಕಾರ್ಯಕ್ರಮ

Date:

ಗಂಗೊಳ್ಳಿ, ನ.10: ಮಕ್ಕಳು ತಮ್ಮ ಮೇಲೆ ದೌರ್ಜನ್ಯಗಳು ನಡೆದಾಗ ಅದನ್ನು ಯಾವುದೇ ಹಿಂಜರಿಕೆ ಇಲ್ಲದೆ ಹೇಳಿಕೊಳ್ಳುವಂತಹ ಮನಸ್ಥಿತಿ ಬೆಳೆಸಿಕೊಳ್ಳಬೇಕು. ಪೋಕ್ಸೋ ಕಾಯಿದ ಬಗ್ಗೆ ಅರಿವನ್ನು ಹೊಂದುವುದರ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸಲು ಮತ್ತು ನೊಂದವರಿಗೆ ಸಹಾಯ ಮಾಡಲು ಸಾಧ್ಯ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಪೋಕ್ಸೋ ಸಪೋರ್ಟ್ ಪರ್ಸನ್ ಫಿಲೋಮಿನಾ ಫರ್ನಾಂಡಿಸ್ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ, ಎಸ್. ವಿ ಕಾಮರ್ಸ್ ಕ್ಲಬ್ ಗಂಗೊಳ್ಳಿ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಜಂಟಿ ಆಶ್ರಯದಲ್ಲಿ ಇಲ್ಲಿನ ರೋಟರಿ ಸಭಾಂಗಣದಲ್ಲಿ ನಡೆದ ಪೋಕ್ಸೋ ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಥಾಮಸ್ ಪಿ.ಎ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿಯ ಬಿಲ್ಲವರ ಸಮಾಜ ಸೇವಾ ಸಂಘದ ಅಧ್ಯಕ್ಷ ಗೋಪಾಲ ಬಿಲ್ಲವ ಶುಭ ಹಾರೈಸಿದರು. ವಿದ್ಯಾರ್ಥಿ ಪ್ರತಿನಿಧಿ ಬಿಂದುಶ್ರೀ ಉಪಸ್ಥಿತರಿದ್ದರು.

ಅಂಕಿತ ಮತ್ತು ಸೃಷ್ಟಿ ಪ್ರಾರ್ಥಿಸಿದರು. ಸುಜಾತ ಸ್ವಾಗತಿಸಿ, ಅಂಕಿತ ಅತಿಥಿಗಳನ್ನು ಪರಿಚಯಿಸಿದರು. ಎಸ್‌. ವಿ ಕಾಮರ್ಸ್ ಕ್ಲಬ್ ಸಂಯೋಜಕ ನರೇಂದ್ರ ಎಸ್ ಗಂಗೊಳ್ಳಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವೈಷ್ಣವಿ ಖಾರ್ವಿ ನಿರೂಪಿಸಿದರು. ಪ್ರಥ್ವಿ ಖಾರ್ವಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

ನವದೆಹಲಿ, ಜು.29: ಲೋಕಸಭೆ ಬುಧವಾರ ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ)...

ಶಾಸಕ ಯಶ್ಪಾಲ್ ಸುವರ್ಣ ಅವರಿಗೆ ನೋಟೀಸ್

ಉಡುಪಿ, ಜು.29: ರಾಹುಲ್ ಗಾಂಧಿ ವಿರುದ್ಧ ಶಾಸಕ ಯಶ್ಪಾಲ್ ಸುವರ್ಣ ಅವರು...

ಹಡಪದ ಅಪ್ಪಣ್ಣ ರವರ ಚಿಂತನೆಗಳು ಮನುಕುಲದ ಉದ್ಧಾರಕ್ಕೆ ದಾರಿದೀಪ: ಮಂಜುನಾಥ ಪೂಜಾರಿ

ಉಡುಪಿ, ಜು.29: ಹನ್ನೆರಡನೇ ಶತಮಾನದಲ್ಲಿ ಬಸವಣ್ಣನವರ ಅನುಯಾಯಿಯಾಗಿದ್ದ ಶಿವಶರಣ ಹಡಪದ ಅಪ್ಪಣ್ಣ...

ಚಾತುರ್ಮಾಸ ಸಾಧನೆಗೆ ಶ್ರೇಷ್ಠ ಕಾಲ: ಭಂಡಾರಕೇರಿ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರು

ಬಾರಕೂರು, ಜು.೨೯: ಶ್ರಾವಣದಿಂದ ಕಾರ್ತಿಕ ಮಾಸದವರೆಗಿನ ನಾಲ್ಕು ತಿಂಗಳ ಕಾಲ ಭಗವಂತ...
error: Content is protected !!