Thursday, July 30, 2026
Thursday, July 30, 2026

ಶಂಕರನಾರಾಯಣ: ರಾಷ್ಟ್ರೀಯ ಏಕತಾ ದಿನಾಚರಣೆ

ಶಂಕರನಾರಾಯಣ: ರಾಷ್ಟ್ರೀಯ ಏಕತಾ ದಿನಾಚರಣೆ

Date:

ಶಂಕರನಾರಾಯಣ, ನ.10: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಶಂಕರನಾರಾಯಣದಲ್ಲಿ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾಕೋಶ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಶಂಕರನಾರಾಯಣ ಆರಕ್ಷಕ ಠಾಣೆಯ ಸಹಯೋಗದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಪ್ರಯುಕ್ತ ರಾಷ್ಟ್ರೀಯ ಏಕತಾ ದಿನಾಚರಣೆ ಮತ್ತು ರಸಪ್ರಶ್ನೆ ಸ್ಪರ್ಧೆ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಡಾ.ವೆಂಕಟರಾಮ್ ಭಟ್ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಶಂಕರನಾರಾಯಣ ಆರಕ್ಷಕ ಠಾಣೆಯ ಠಾಣಾಧಿಕಾರಿ ಶಂಭುಲಿಂಗಯ್ಯ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ದ್ವಿತೀಯ ಬಿಎ ವಿದ್ಯಾರ್ಥಿನಿ ಆಶಾ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜೀವನ ಮತ್ತು ಸಾಧನೆ ಕುರಿತು ಮಾತನಾಡಿದರು. ಪ್ರಾಂಶುಪಾಲ ಡಾ. ವೆಂಕಟರಾಮ್ ಭಟ್ ರಾಷ್ಟ್ರೀಯ ಏಕತಾ ದಿನಾಚರಣೆಯ ಮಹತ್ವವನ್ನು ವಿವರಿಸಿದರು.

ರಾಷ್ಟ್ರೀಯ ಸೇವಾ ಯೋಜನೆ ಘಟಕ 1ರ ಯೋಜನಾಧಿಕಾರಿ ರಾಮಚಂದ್ರ ಜಿ ಎಸ್ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಡಾ. ವಸಂತ್ ಜಿ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಘಟಕ ೨ರ ಯೋಜನಾಧಿಕಾರಿ ಪ್ರಜ್ಞಾ ಉಪಸ್ಥಿತರಿದ್ದರು.

ವಿಶೇಷ ಉಪನ್ಯಾಸ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಗೆ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜೀವನದ ಕುರಿತು ರಸಪ್ರಶ್ನೆ ಸ್ಪರ್ಧೆಯನ್ನು ನಡೆಸಲಾಯಿತು. ಸ್ಪರ್ಧೆಯಲ್ಲಿ ತೃತೀಯ ಬಿಸಿಎ ವಿದ್ಯಾರ್ಥಿನಿ ಕು.ಚೈತ್ರಾ ಪ್ರಥಮ ಸ್ಥಾನವನ್ನು ಪಡೆದರು. ವಿಜೇತರಿಗೆ ಶಂಕರನಾರಾಯಣ ಆರಕ್ಷಕ ಠಾಣೆಯ ವತಿಯಿಂದ ಠಾಣಾಧಿಕಾರಿ ಶಂಭುಲಿಂಗಯ್ಯ ಬಹುಮಾನಗಳನ್ನು ವಿತರಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

ನವದೆಹಲಿ, ಜು.29: ಲೋಕಸಭೆ ಬುಧವಾರ ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ)...

ಶಾಸಕ ಯಶ್ಪಾಲ್ ಸುವರ್ಣ ಅವರಿಗೆ ನೋಟೀಸ್

ಉಡುಪಿ, ಜು.29: ರಾಹುಲ್ ಗಾಂಧಿ ವಿರುದ್ಧ ಶಾಸಕ ಯಶ್ಪಾಲ್ ಸುವರ್ಣ ಅವರು...

ಹಡಪದ ಅಪ್ಪಣ್ಣ ರವರ ಚಿಂತನೆಗಳು ಮನುಕುಲದ ಉದ್ಧಾರಕ್ಕೆ ದಾರಿದೀಪ: ಮಂಜುನಾಥ ಪೂಜಾರಿ

ಉಡುಪಿ, ಜು.29: ಹನ್ನೆರಡನೇ ಶತಮಾನದಲ್ಲಿ ಬಸವಣ್ಣನವರ ಅನುಯಾಯಿಯಾಗಿದ್ದ ಶಿವಶರಣ ಹಡಪದ ಅಪ್ಪಣ್ಣ...

ಚಾತುರ್ಮಾಸ ಸಾಧನೆಗೆ ಶ್ರೇಷ್ಠ ಕಾಲ: ಭಂಡಾರಕೇರಿ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರು

ಬಾರಕೂರು, ಜು.೨೯: ಶ್ರಾವಣದಿಂದ ಕಾರ್ತಿಕ ಮಾಸದವರೆಗಿನ ನಾಲ್ಕು ತಿಂಗಳ ಕಾಲ ಭಗವಂತ...
error: Content is protected !!