Saturday, July 25, 2026
Saturday, July 25, 2026

ಎಂ.ಜಿ.ಎಂ ಸಂಧ್ಯಾ ಕಾಲೇಜು: ವಿಶ್ವ ಪ್ರಥಮ ಚಿಕಿತ್ಸಾ ದಿನಾಚರಣೆ

ಎಂ.ಜಿ.ಎಂ ಸಂಧ್ಯಾ ಕಾಲೇಜು: ವಿಶ್ವ ಪ್ರಥಮ ಚಿಕಿತ್ಸಾ ದಿನಾಚರಣೆ

Date:

ಉಡುಪಿ, ಸೆ.13: ಭಾರತೀಯ ರೆಡ್‌ಕ್ರಾಸ್‌ ಸಂಸ್ಥೆ, ಉಡುಪಿ ಜಿಲ್ಲೆ, ಮಹಾತ್ಮಾ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜು, ಉಡುಪಿ ಇವರ ಆಶ್ರಯದಲ್ಲಿ, ಯುವ ರೆಡ್‌ಕ್ರಾಸ್ ಘಟಕ ಇವರಿಂದ ರಾಷ್ಟ್ರೀಯ ಸೇವಾ ಯೋಜನೆ, ರೋವರ್ಸ್ ರೇಂಜರ್ಸ್ ಘಟಕಗಳ ಸಹಯೋಗದಲ್ಲಿ ವಿಶ್ವ ಪ್ರಥಮ ಚಿಕಿತ್ಸಾ ದಿನಾಚರಣೆ ಹಾಗೂ ಪ್ರಥಮ ಚಿಕಿತ್ಸೆ ತರಬೇತಿ ಕಾರ್ಯಕ್ರಮ ಶನಿವಾರ ಎಂ.ಜಿ.ಎಂ ಕಾಲೇಜು ಆಡಿಟೋರಿಯಂ, ಟಿ. ಮೋಹನದಾಸ್ ಪೈ ಪ್ಲಾಟಿನಂ ಜುಬ್ಲಿ ಬ್ಲಾಕ್, ಅಮೃತಸೌಧದಲ್ಲಿ ನಡೆಯಿತು. ಭಾರತೀಯ ರೆಡ್‌ಕ್ರಾಸ್‌ ಸಂಸ್ಥೆ, ಉಡುಪಿಯ ಉಪಸಭಾಪತಿ ಡಾ. ಅಶೋಕ್ ಕುಮಾರ್ ವೈ.ಜಿ ಉದ್ಘಾಟಿಸಿದರು. ಡಾ. ಕಾವ್ಯ ಟಿ. ವೈದ್ಯಾಧಿಕಾರಿಗಳು, ಡಾ. ಎ.ವಿ. ಬಾಳಿಗಾ ಮೆಮೋರಿಯಲ್ ಆಸ್ಪತ್ರೆ, ಉಡುಪಿ ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಪ್ರಥಮಚಿಕಿತ್ಸೆ ಮತ್ತು ಸಿಪಿಆರ್ ತರಬೇತಿ ನೀಡಿ ಪ್ರಥಮ ಚಿಕಿತ್ಸೆಯ ಅವಶ್ಯಕತೆ ಹಾಗೂ ತುರ್ತು ಪರಿಸ್ಥಿತಿಯಲ್ಲಿ ಪ್ರಾಣ ಉಳಿಸುವಲ್ಲಿ ಇದರ ಮಹತ್ವವನ್ನು ವೈದ್ಯರು ವಿವರಿಸಿದರು.

ಎಂ.ಜಿ.ಎಂ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಡಾ. ದೇವಿದಾಸ್ ಎಸ್. ನಾಯಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಶ್ರೀಮತಿ ರಮಾದೇವಿ – ಗೌ. ಖಜಾಂಚಿ, ರೆಡ್ ಕ್ರಾಸ್ಉಡುಪಿ ಜಿಲ್ಲೆ, ಎಂ ಜೆ ಎಂ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್ ಸಂಯೋಜನಾಧಿಕಾರಿ ಕು.ದೀಪಿಕಾ, ರಾಷ್ಟ್ರೀಯ ಸೇವಾ ಯೋಜನೆ ಸಂಯೋಜನಾಧಿಕಾರಿ ಸನತ್ ಕೋಟ್ಯಾನ್, ರೆಂಜರ್ಸ್ ಸಂcಯೋಜನಾಧಿಕಾರಿ ಅಕ್ಷತಾ ನಾಯಕ್ ಉಪಸ್ಥಿತರಿದ್ದರು. ದ್ವಿತೀಯ ಬಿ.ಸಿ.ಎ ವಿದ್ಯಾರ್ಥಿನಿ ಶ್ರೇಷ್ಠ ಇವರು ಪ್ರಾರ್ಥಿಸಿದರು. ರೆಡ್ ಕ್ರಾಸ್ ಉಡುಪಿ ಜಿಲ್ಲಾ ಕಾರ್ಯದರ್ಶಿ ಡಾ. ಗಣನಾಥ್ ಶೆಟ್ಟಿ ಎಕ್ಕಾರು ಸ್ವಾಗತಿಸಿ, ದ್ವಿತೀಯ ಬಿ.ಸಿ.ಎ ಭಾರ್ಗವ್ ವಂದಿಸಿದರು. ದ್ವಿತೀಯ ಬಿ.ಸಿ. ಎ ನಿರೀಕ್ಷಾ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!