ಮಲ್ಪೆ, ನ.13: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇದರ ರೋವರ್ಸ್ ಮತ್ತು ರೇಂಜರ್ಸ್ ಘಟಕದ ವತಿಯಿಂದ ಸ್ಕೌಟ್ ಮತ್ತು ಗೈಡ್ಸ್ ನ ಸಂಸ್ಥಾಪನಾ ದಿನಾಚರಣೆ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ ನಿತ್ಯಾನಂದ ವಿ ಗಾಂವ್ಕರ್ ರವರು ಧ್ವಜ ಚೀಟಿಯನ್ನು ಬಿಡುಗಡೆ ಮಾಡುವುದರ ಮೂಲಕ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ರೋವರ್ಸ್ ಮತ್ತು ರೇಂಜರ್ಸ್ ನ ಪಾತ್ರವೇನು ಎಂದು ತಿಳಿಸಿದರು. ಐ.ಕ್ಯೂ.ಎ.ಸಿ ಸಂಚಾಲಕರಾದ ಡಾ. ವಿಷ್ಣುಮೂರ್ತಿ ಪ್ರಭು, ದಳ ನಾಯಕರಾದ ಮರ್ವಿನ್ ಡಿಸೋಜ ಮತ್ತು ವಿದ್ಯಾರ್ಥಿ ನಾಯಕರಾದ ಶ್ರವಣ್, ಸಾದಿಯ ಮತ್ತು ಅಕ್ಷಯ್ ರಾವ್ ಉಪಸ್ಥಿತರಿದ್ದರು.
ತೆಂಕನಿಡಿಯೂರು ಕಾಲೇಜು: ಸ್ಕೌಟ್ ಮತ್ತು ಗೈಡ್ಸ್ ಸಂಸ್ಥಾಪನಾ ದಿನಾಚರಣೆ
ತೆಂಕನಿಡಿಯೂರು ಕಾಲೇಜು: ಸ್ಕೌಟ್ ಮತ್ತು ಗೈಡ್ಸ್ ಸಂಸ್ಥಾಪನಾ ದಿನಾಚರಣೆ
Date:




By
ForthFocus™