Tuesday, September 8, 2026
Tuesday, September 8, 2026

ಮಣಿಪಾಲ-ಉಡುಪಿ ಜ್ಞಾನಸುಧಾ ವಾರ್ಷಿಕ ಕ್ರೀಡಾಕೂಟ

ಮಣಿಪಾಲ-ಉಡುಪಿ ಜ್ಞಾನಸುಧಾ ವಾರ್ಷಿಕ ಕ್ರೀಡಾಕೂಟ

Date:

ಮಣಿಪಾಲ, ನ.17: ಶಿಕ್ಷಣಕ್ಕೆ ಕ್ರೀಡೆ ಯಾವತ್ತೂ ಅಡ್ಡಿ ಬರಲಾರದು, ನಿಮ್ಮಲ್ಲೂ ಕ್ರೀಡಾ ಸಾಧನೆ ಮಾಡುವ ಸಾಮರ್ಥ್ಯ ಇದೆ ಅದನ್ನು ಉಪಯೋಗಿಸಿಕೊಂಡು ಉತ್ತಮ ಕ್ರೀಡಾ ಸಾಧಕರಾಗಿ ಮೂಡಿಬನ್ನಿ ಎಂದು ಸೌತ್ ಏಷ್ಯನ್ ಮೆಡಲಿಸ್ಟ್ ಮತ್ತು ಭಾರತೀಯ ರೈಲ್ವೆ ಇಲಾಖೆಯ ಸಿಬ್ಬಂದಿಯೂ ಆಗಿರುವ ಕರಿಷ್ಮಾ ಸನಿಲ್ ಹೇಳಿದರು. ಇವರು ಉಡುಪಿ ಜ್ಞಾನಸುಧಾ ಪದವಿಪೂರ್ವ ಕಾಲೇಜು ನಾಗಬನ ಕ್ಯಾಂಪಸ್ ಮತ್ತು ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು ವಿದ್ಯಾನಗರ ಜಂಟಿಯಾಗಿ ವಿದ್ಯಾನಗರ ಗ್ರೀನ್ಸ್, ಮಣಿಪಾಲದಲ್ಲಿ ಆಯೋಜಿಸಿದ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಐಕ್ಯಮ್ ಸ್ಪೋಟ್ಸ್ ಸೈನ್ಸ್ನ ಮ್ಯಾನೆಜಿಂಗ್ ಡೈರೆಕ್ಟರ್ ಆಗಿರುವ ರೋಹನ್ ಕೆ ಇವರು ಮಾತನಾಡಿ, ಎಲ್ಲಾ ಕ್ರೀಡೆಗಳಿಗೂ ಸಮಾನ ಆದ್ಯತೆ ಸಿಗಬೇಕು. ನಮ್ಮಲ್ಲಿರುವ ಮಾನವ ಸಂಪನ್ಮೂಲವನ್ನು ಸದುಪಯೋಗಪಡಿಕೊಂಡರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತ ಮುಂಚೂಣಿಯಲ್ಲಿರಲು ಸಾಧ್ಯವಾಗುವುದು ಎಂದರು. ಇದೇ ಸಂದರ್ಭದಲ್ಲಿ ಆಗಮಿಸಿದ ಗಣ್ಯರು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಆಯೋಜಿಸಿದ ಅರ್ನ್ ಎಂಡ್ ಲರ್ನ್ ಬಿಸ್ನೆಸ್ ಫೇರ್ ಉದ್ಘಾಟನೆ ಮಾಡಿದರು.

ಉಡುಪಿ ಜ್ಞಾನಸುಧಾ ಪ.ಪೂ. ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಮಣಿಪಾಲ ಜ್ಞಾನಸುಧಾ ಪ.ಪೂ. ಕಾಲೇಜಿನ ಪ್ರಾಂಶುಪಾಲರಾದ ಗಣೇಶ್ ಶೆಟ್ಟಿ, ಉಪಪ್ರಾಂಶುಪಾಲರುಗಳಾದ ಪ್ರಕಾಶ್ ಜೋಗಿ, ಹೇಮಂತ್ ನಾಯಕ್, ಬೋಧಕ ಬೋಧಕೇತರರು ಉಪಸ್ಥಿತರಿದ್ದರು. ಮಣಿಪಾಲ ಜ್ಞಾನಸುಧಾ ಉಪ ಪ್ರಾಂಶುಪಾಲರಾದ ರವಿ ಜಿ ಸ್ವಾಗತಿಸಿ ಗಣಿತಶಾಸ್ತ್ರ ಉಪನ್ಯಾಸಕಿ ನಕ್ಷಾ ಕಲ್ಕೂರ ಕಾರ್ಯಕ್ರಮ ನಿರೂಪಿಸಿ ದೈಹಿಕ ಶಿಕ್ಷಣ ನಿರ್ದೇಶಕ ಅರುಣ್ ಕುಮಾರ್ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿಯಲ್ಲಿ ಕೇರಳದ ಸಾಂಸ್ಕೃತಿಕ ವೈಭವ: ಓಣಂ ಸಂಭ್ರಮಕ್ಕೆ ಮನಸೋತ ಕರಾವಳಿಗರು

ಉಡುಪಿ, ಸೆ.7: ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಮಹೋತ್ಸವದ ಸಂಭ್ರಮದ ನಡುವೆಯೇ...

ಕ್ರಿಯೇಟಿವ್ ಗುರುದೇವೋಭವ: ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಭಾಗಿ

ಕಾರ್ಕಳ, ಸೆ.7: ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಕ್ರಿಯೇಟಿವ್...

ಸರಸ್ವತಿ ವಿದ್ಯಾಲಯದಲ್ಲಿ ಇ ವೇಸ್ಟ್ ಮ್ಯಾನೇಜ್ಮೆಂಟ್ ಕಾರ್ಯಕ್ರಮ

ಗಂಗೊಳ್ಳಿ, ಸೆ.7: ಇ ತ್ಯಾಜ್ಯಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡುವುದು ಹೇಗೆ...

ತ್ರಿಶಾ ವಿದ್ಯಾ ಪಿಯು ಕಾಲೇಜು ಕಟಪಾಡಿ: ಕಾಪು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಕಟಪಾಡಿ, ಸೆ.7: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ತ್ರಿಶಾ...
error: Content is protected !!