Saturday, March 21, 2026
Saturday, March 21, 2026

ಕ್ರಿಯೇಟಿವ್: ಸ್ವಾಸ್ಥ್ಯ ಸಂಕಲ್ಪ

ಕ್ರಿಯೇಟಿವ್: ಸ್ವಾಸ್ಥ್ಯ ಸಂಕಲ್ಪ

Date:

ಕಾರ್ಕಳ, ಸೆ.13: ಕ್ರಿಯೇಟಿವ್ ಪದವಿಪೂರ್ವ ಕಾಲೇಜು, ಕಾರ್ಕಳ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ (ರಿ), ಕಾರ್ಕಳ ತಾಲೂಕು ಇದರ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಆಯೋಜಿಸಲಾಯಿತು. ಉದ್ಘಾಟನೆ ನೆರವೇರಿಸಿ ಮಾತನಾಡಿದ ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯರಾದ ಸಂತೋಷ್ ಶೆಟ್ಟಿ ಸಮಾಜದ ಪ್ರಗತಿ ಆರೋಗ್ಯದ ಹಾದಿಯಲ್ಲೇ ಅಡಗಿದೆ. ಆರೋಗ್ಯದ ಅರಿವು ಬೆಳೆಯಲು ಜಾಗೃತಿ ಅತ್ಯವಶ್ಯಕ ಎಂದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಪ್ರಾದೇಶಿಕ ಕಛೇರಿ, ಉಡುಪಿಯ ಯೋಜನಾಧಿಕಾರಿಗಳಾದ ಗಣೇಶ್ ಆಚಾರ್ಯ, ಆರೋಗ್ಯದ ಅರಿವು ಬೆಳಗಿದಾಗ ಮಾತ್ರ ಸಮಾಜ ಶ್ರೇಯೋಭಿವೃದ್ಧಿಯ ಹಾದಿ ಹಿಡಿಯುತ್ತದೆ ಎಂಬ ಸತ್ಯವಾಕ್ಯವನ್ನು ತಮ್ಮ ನಿರರ್ಗಳ ನುಡಿಗಳೊಂದಿಗೆ ತಿಳಿಸಿಕೊಟ್ಟರು. ಅಲ್ಲದೇ ಪ್ರತಿಜ್ಞಾವಿಧಿ ಕಾರ್ಯಕ್ರಮವನ್ನು ನೆರವೇರಿಸಿಕೊಟ್ಟರು.

ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಡಾ. ಬಿ ಗಣನಾಥ ಶೆಟ್ಟಿ ಜಾಗೃತಿಯ ಬೆಳಕು ಮೂಡಿದಾಗಲೇ ಸಮಾಜ ಆರೋಗ್ಯ, ಅರಿವು ಮತ್ತು ಪ್ರಗತಿಯನ್ನು ಕಾಣುತ್ತದೆ ಎಂಬುದಾಗಿ ಹಲವು ಅಮೂಲ್ಯ ವಿಚಾರಗಳನ್ನು ಅಧ್ಯಕ್ಷೀಯ ನುಡಿಗಳೊಂದಿಗೆ ಹಂಚಿಕೊಂಡರು. ಕರುಣಾಕರ ಕಡಂಬ, ಸದಸ್ಯರು, ತಾಲೂಕು ಜನಜಾಗೃತಿ ವೇದಿಕೆ , ವಾಸು ಶೆಟ್ಟಿ, ಸದಸ್ಯರು, ತಾಲೂಕು ಜನಜಾಗೃತಿ ವೇದಿಕೆ, ಸುಭಾಷ್, ಅಧ್ಯಕ್ಷರು, ಹಿರ್ಗಾನ ಒಕ್ಕೂಟ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಬೋಧಕ-ಬೋಧಕೇತರ ವರ್ಗದವರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಕನ್ನಡ ಉಪನ್ಯಾಸಕಿ ಪ್ರಿಯಾಂಕ ತೀರ್ಥರಾಮ ಕಾರ್ಯಕ್ರಮ ನಿರೂಪಿಸಿ, ವಾಸು ಶೆಟ್ಟಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮ್ಯಾಜಿಕ್ ಜಾರ್

ನಾವೆಲ್ಲ ದಿನಾಲು ಅನೇಕ ಋಣಾತ್ಮಕ ಭಾವನೆಗಳಿಂದ ತೋಲಾಡುತ್ತಿರುತ್ತೇವೆ. ಭಾರವಾದ ಮನಸ್ಸು, ಕೆಲಸದಲ್ಲಿ...

ತೆಂಕನಿಡಿಯೂರು ಕಾಲೇಜು: ಬಿ.ಎಸ್.ಡಬ್ಲ್ಯೂ ವಿದ್ಯಾರ್ಥಿನಿಗೆ ಪ್ರಥಮ ರ‍್ಯಾಂಕ್‌

ಉಡುಪಿ, ಮಾ.21: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ...

ಕತಾರ್ ದೊರೆಗೆ ಈದ್ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

ನವದೆಹಲಿ, ಮಾ.20: ಪ್ರಧಾನಿ ನರೇಂದ್ರ ಮೋದಿ ಕತಾರ್ ದೊರೆ ಶೇಖ್ ತಮೀಮ್...

ಇಸ್ರೇಲ್‌ನ ತೈಲ ಸಂಸ್ಕರಣಾಗಾರದ ಮೇಲೆ ಇರಾನ್ ಕ್ಷಿಪಣಿ ದಾಳಿ

ಯು.ಬಿ.ಎನ್.ಡಿ., ಮಾ.20: ಹೈಫಾದ ಉತ್ತರ ನಗರದಲ್ಲಿರುವ ತೈಲ ಸಂಸ್ಕರಣಾಗಾರದ ಮೇಲೆ ಇರಾನಿನ...
error: Content is protected !!