Monday, October 26, 2026
Monday, October 26, 2026

ಅಥ್ಲೆಟಿಕ್ಸ್: ಮಣಿಪಾಲ ಜ್ಞಾನಸುಧಾದ ಚಿರಾಗ್ ರಾಷ್ಟ್ರಮಟ್ಟಕ್ಕೆ ಆಯ್ಕೆ

ಅಥ್ಲೆಟಿಕ್ಸ್: ಮಣಿಪಾಲ ಜ್ಞಾನಸುಧಾದ ಚಿರಾಗ್ ರಾಷ್ಟ್ರಮಟ್ಟಕ್ಕೆ ಆಯ್ಕೆ

Date:

ಮಣಿಪಾಲ, ನ.18: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗದಿಂದ ಕಲಬುರ್ಗಿಯ ಚಂದ್ರಶೇಖರ ಪಾಟೀಲ ಸ್ಟೇಡಿಯಂನಲ್ಲಿ ಆಯೋಜಿಸಿದ ರಾಜ್ಯಮಟ್ಟದ ಅಥ್ಲೆಟಿಕ್ಸ್ನಲ್ಲಿ ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು, ವಿದ್ಯಾನಗರದ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಚಿರಾಗ್ ಸಿ ಪೂಜಾರಿ ಇವರು 200ಮೀ. ಓಟದ ಸ್ಪರ್ಧೆಯಲ್ಲಿ ಚಿನ್ನದ ಪದಕ ಹಾಗೂ 100 ಮೀ. ಓಟದ ಸ್ಪರ್ಧೆಯಲ್ಲಿ ಬೆಳ್ಳಿಯ ಪದಕ ಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಹೆಬ್ರಿ ಸಂತೆಕಟ್ಟೆಯ ಚಂದ್ರ ಪೂಜಾರಿ ಹಾಗೂ ಜಯಲಕ್ಷ್ಮಿ ದಂಪತಿಗಳ ಪುತ್ರ.

ಸಾಧಕ ವಿದ್ಯಾರ್ಥಿಯನ್ನು ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿ, ಸಂಸ್ಥೆಯ ಪ್ರಾಂಶುಪಾಲರು, ಹಾಗೂ ಬೋಧಕ ಬೋಧಕೇತರ ವರ್ಗ ಅಭಿನಂದಿಸಿರುತ್ತಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಾಗತಿಕ ತೈಲ ಬೆಲೆ: ಗರಿಷ್ಠ ಏರಿಕೆ ನಂತರ ಸುಮಾರು 2% ರಷ್ಟು ಕುಸಿತ

ನವದೆಹಲಿ, ಅ.26: ಸುಮಾರು ಆರು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ಏರಿದ ನಂತರ...

ಬ್ರೆಜಿಲ್‌ನಲ್ಲಿ ನಾಲ್ಕನೇ ಬಾರಿಗೆ ಅಧಿಕಾರಕ್ಕೆ ಬಂದ ಲುಲಾ; ಲ್ಯಾಟಿನ್ ಅಮೆರಿಕದಲ್ಲಿ ಟ್ರಂಪ್ ಪ್ರಭಾವಕ್ಕೆ ಹಿನ್ನಡೆ

ಯು.ಬಿ.ಎನ್.ಡಿ., ಅ.26: ಭಾನುವಾರ ನಡೆದ ಬ್ರೆಜಿಲ್‌ನ ನಿರ್ಣಾಯಕ ಮತದಾನದಲ್ಲಿ ಸೆನೆಟರ್ ಫ್ಲಾವಿಯೊ...

ಆತ್ಮವಿಶ್ವಾಸದಿಂದ ಇಂಗ್ಲೀಷ್ ಸಂವಹನ

ಬಸ್ರೂರು, ಅ.26: ಬಸ್ರೂರು ಶ್ರೀ ಶಾರದಾ ಕಾಲೇಜಿನ ಇಂಗ್ಲೀಷ್ ವಿಭಾಗದ ವತಿಯಿಂದ...

ಏಷ್ಯನ್ ಪ್ಯಾರಾ ಕ್ರೀಡಾಕೂಟ: 114 ಪದಕಗಳೊಂದಿಗೆ ಭಾರತದ ಭರ್ಜರಿ ಪ್ರದರ್ಶನ

ಜಪಾನ್‌ನ ನಗೋಯಾದಲ್ಲಿರುವ ಮಿಜುಹೋ ಪಾರ್ಕ್ ಅಥ್ಲೆಟಿಕ್ಸ್ ಕ್ರೀಡಾಂಗಣದಲ್ಲಿ ನಡೆದ 2026 ಏಷ್ಯನ್...
error: Content is protected !!