Tuesday, September 29, 2026
Tuesday, September 29, 2026

ಉಡುಪಿ ಜ್ಞಾನಸುಧಾ: ಜ್ಞಾನ ಸಂಭ್ರಮ 2025

ಉಡುಪಿ ಜ್ಞಾನಸುಧಾ: ಜ್ಞಾನ ಸಂಭ್ರಮ 2025

Date:

ಉಡುಪಿ, ನ.22: ಶಿಕ್ಷಣವು ದೇಶದ ಬದಲಾವಣೆಯ ಬಹುಮುಖ್ಯ ಅಸ್ತ್ರ. ದೇಶದ ಭವಿಷ್ಯವೇ ವಿದ್ಯಾರ್ಥಿಗಳು. ಅಂತಹ ಶ್ರೇಷ್ಠ ವಿದ್ಯಾರ್ಥಿಗಳನ್ನು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳು ಈ ಸಮಾಜಕ್ಕೆ ಕೊಡುಗೆಯಾಗಿ ನೀಡುತ್ತಿದೆ. ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿಯವರ ಬದ್ಧತೆ, ಕಾಯಕನಿಷ್ಠೆ ವಿದ್ಯಾರ್ಥಿಗಳಿಗೆ ಮಾದರಿಯಾಗಲಿ. ಇಂತಹ ಸಂಸ್ಥೆ ನನ್ನ ಕ್ಷೇತ್ರದಲ್ಲಿರುವುದು ನನ್ನ ಹೆಮ್ಮೆ. ಈ ಸಂಸ್ಥೆಯಿಂದ ಇನ್ನಷ್ಟು ಸಾಧಕರು ಮೂಡಿಬರಲಿ ಎಂದು ಉಡುಪಿಯ ಶಾಸಕರಾದ ಯಶ್‌ಪಾಲ್ ಸುವರ್ಣ ಅಭಿಪ್ರಾಯಪಟ್ಟರು.

ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ “ಉಡುಪಿ ಜ್ಞಾನ ಸಂಭ್ರಮ” ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡು ಮಾತನಾಡಿದರು. ಮುಖ್ಯ ಅಭ್ಯಾಗತರಾಗಿ ಉಜ್ವಲ್ ಕನ್‌ಸ್ಟ್ರಕ್ಷನ್ ಮತ್ತು ಡೆವಲಪರ‍್ಸ್ ಆಡಳಿತ ನಿರ್ದೇಶಕಅ ಪುರುಶೋತ್ತಮ್ ಪಿ ಶೆಟ್ಟಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿ ಮಾತನಾಡಿ ಕಲಿಸುವ ಮಕ್ಕಳ ಮೊಗದ ನಗುವೆ ತಮ್ಮ ಆಸ್ತಿ ಎಂಬ ಭಾವನೆ ಶಿಕ್ಷಕರಲ್ಲಿರಲಿ. ನಮ್ಮ ಸುಖ ಬೇರೆಯವರ ದುಃಖಕ್ಕೆ ಕಾರಣವಾಗದಿರಲಿ. ಜನ್ಮದಾತರ ಸಂತೋಷಕ್ಕೆ ಕಾರಣರಾಗಿ ಮತ್ತು ಸಮಯದ ಜೊತೆಗೆ ಸಾಗಿರಿ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

೨೦೨೪-೨೫ನೇ ಸಾಲಿನ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಯ ಸಾಧಕರು, ಕೆ.ಸಿ.ಟಿ. ಪರೀಕ್ಷೆಯಲ್ಲಿ ಸಾವಿರದೊಳಗಿನ ರ‍್ಯಾಂಕ್ ಗಳಿಸಿದ ವಿದ್ಯಾರ್ಥಿಗಳು, ನೀಟ್ ಪರೀಕ್ಷೆಯಲ್ಲಿ ೫೦೦ ಅಂಕಗಳಿಗಿಂತ ಅಧಿಕ ಪಡೆದ ಸಾಧಕರು, ಕ್ರೀಡಾಕ್ಷೇತ್ರದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು ಮತ್ತು ಸಾಂಸ್ಕೃತಿಕ ಸಾಧಕರನ್ನು ಅಭಿನಂದಿಸಲಾಯಿತು.

ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ್ ಶೆಟ್ಟಿ, ಉಡುಪಿ ಜ್ಞಾನಸುಧಾ ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್, ಉಪಪ್ರಾಂಶುಪಾಲರಾದ ಪ್ರಕಾಶ್ ಜೋಗಿ, ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಡೀನ್ ಅಕಾಡೆಮಿಕ್ಸ್ ಡಾ. ಮಿಥುನ್ ಯು., ವಿದ್ಯಾರ್ಥಿ ನಾಯಕ, ನಾಯಕಿಯರಾದ ಆರ್ಯ ಎಂ ಮತ್ತು ಆರ್ನವಿ ಮತ್ತಿತರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಉಡುಪಿ ಜ್ಞಾನಸುಧಾ ಪ.ಪೂ. ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು, ಉಪಪ್ರಾಂಶುಪಾಲರಾದ ಪ್ರಕಾಶ್ ಜೋಗಿ ವಂದಿಸಿ, ಜೋತ್ಸ್ನಾ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಷ್ಟ್ರೀಯ ಲೋಕ್ ಅದಾಲತ್: ಒಂದೇ ದಿನದಲ್ಲಿ ಒಟ್ಟು 61,367 ಪ್ರಕರಣ ಇತ್ಯರ್ಥ

ಉಡುಪಿ, ಸೆ.28: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ...

ಕೃಷಿ ಪ್ರವಾಸೋದ್ಯಮಕ್ಕೆ ಒತ್ತು ನೀಡಲು ಚಿಂತನೆ: ಸಿ.ಇ.ಓ ಪ್ರತೀಕ್ ಬಾಯಲ್

ಉಡುಪಿ, ಸೆ.28: ಜಿಲ್ಲೆಯ ನೈಸರ್ಗಿಕ ಸೌಂದರ್ಯ, ಧಾರ್ಮಿಕ ಕ್ಷೇತ್ರಗಳು ಹಾಗೂ ಕಡಲತೀರಗಳ...

ವಿದ್ಯಾಪೋಷಕ್ ವಿನಮ್ರ ಸಹಾಯ ವಿತರಣಾ ಸಮಾರಂಭ ಸಮಾರೋಪ

ಉಡುಪಿ, ಸೆ.28: ಯಕ್ಷಗಾನ ಕಲಾರಂಗ (ರಿ.), ಉಡುಪಿ ಇದರ ಅಂಗ ಸಂಸ್ಥೆಯಾದ...

ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ: ಜಯಂಟ್ಸ್ ಗ್ರೇಟ್ ಡೇ ಕಾರ್ಯಕ್ರಮ

ಬ್ರಹ್ಮಾವರ, ಸೆ.28: ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಜಯಂಟ್ಸ್ ಕೇರ್ ಫೌಂಡೇಶನ್...
error: Content is protected !!