Monday, September 7, 2026
Monday, September 7, 2026

ವಿ.ವಿ. ಮಟ್ಟದ ಪುರುಷರ ಫುಟ್ಬಾಲ್ ಪಂದ್ಯಾವಳಿ ಸಂಪನ್ನ

ವಿ.ವಿ. ಮಟ್ಟದ ಪುರುಷರ ಫುಟ್ಬಾಲ್ ಪಂದ್ಯಾವಳಿ ಸಂಪನ್ನ

Date:

ಕುಂದಾಪುರ, ನ.22: ಸಂಸ್ಥೆ ಆರಂಭಗೊಂಡ ವರ್ಷದಿಂದಲೇ ಕ್ರೀಡೆಗೆ ವಿಶೇಷ ಮಹತ್ವವನ್ನು ನೀಡುತ್ತಾ ಬಂದಿದ್ದೇವೆ. ಪ್ರತಿ ವರ್ಷ ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ನಮ್ಮ ಸಂಸ್ಥೆಯ ಆಶ್ರಯದಲ್ಲಿ ಯಾವುದಾದರೂ ಒಂದು ಪಂದ್ಯಾಟವನ್ನು ಆಯೋಜಿಸುತ್ತಾ ಬರುತ್ತಿದ್ದೇವೆ. ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆಗಳೊಂದಿಗೆ ಕ್ರೀಡೆಯಲ್ಲಿ ಭಾಗವಹಿಸಿದಾಗ ಭವಿಷ್ಯದಲ್ಲಿ ಉತ್ತಮ ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದು ಸಂಸ್ಥೆಯ ಅಧ್ಯಕ್ಷರಾದ ಬಿ.ಎಮ್. ಸುಕುಮಾರ ಶೆಟ್ಟಿ ಹೇಳಿದರು. ಕುಂದಾಪುರದ ಗಾಂಧಿ ಮೈದಾನದಲ್ಲಿ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಮಂಗಳೂರು ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ಹಮ್ಮಿಕೊಂಡ ವಿ.ವಿ. ಮಟ್ಟದ ಉಡುಪಿ ವಲಯದ ಪುರುಷರ ಫುಟ್ಬಾಲ್ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ಮೂಡುಬಿದರೆಯ ಆಳ್ವಾಸ್ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ಪ್ರಾಂಶುಪಾಲ ಡಾ. ಮಧು ಆರ್. ಅನಿಸಿಕೆಗಳನ್ನು ಹಂಚಿಕೊಂಡರು. ಸಂಸ್ಥೆಯ ಪ್ರಾಂಶುಪಾಲ ಡಾ. ಕೆ .ಉಮೇಶ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ರಂಜಿತ ವಂದಿಸಿ, ವಾಣಿಜ್ಯ ಉಪನ್ಯಾಸಕ ಸತೀಶ್ ಶೆಟ್ಟಿ ಹೆಸ್ಕತ್ತೂರು ಕಾರ್ಯಕ್ರಮ ನಿರೂಪಿಸಿದರು. ಸ್ಪರ್ಧೆಯಲ್ಲಿ ಆಳ್ವಾಸ್ ಕಾಲೇಜು ಮೂಡುಬಿದರೆ ಪ್ರಥಮ, ಉಡುಪಿ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ತಂಡ ದ್ವಿತೀಯ ಹಾಗೂ ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜು ತಂಡ ತೃತೀಯ ಸ್ಥಾನ ಪಡೆಯಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಜ್ಞಾನದ ಕ್ತತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರೇ ಶಿಕ್ಷಕರು: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.6: ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವ ವ್ಯಕ್ತಿಯೇ ಶಿಕ್ಷಕ....

ಸೆ. 9: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.6: ನಗರದ ಕಲ್ಸಂಕ ಅಂಬಾಗಿಲು ರಸ್ತೆಯಲ್ಲಿರುವ ಸಾನ್ವಿ ಟ್ರೇರ‍್ಸ್ನಲ್ಲಿ ಸೆಪ್ಟೆಂಬರ್...

ಮಣಿಪಾಲ ಜ್ಞಾನಸುಧಾ: ಶಿಕ್ಷಕರ ದಿನಾಚರಣೆ; ನಿವೃತ್ತ ಶಿಕ್ಷಕರಿಗೆ ಸನ್ಮಾನ

ಮಣಿಪಾಲ, ಸೆ.6: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ...

ಡಾ. ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ

ಕುಂದಾಪುರ, ಸೆ.3: ಸಣ್ಣ ಕಥೆಗಳು ಮನುಷ್ಯನ ಜೀವನದಲ್ಲಿ ಅವನನ್ನು ಗಾಢವಾಗಿ ತಟ್ಟುವ...
error: Content is protected !!