Sunday, July 26, 2026
Sunday, July 26, 2026

ಮಹಾತ್ಮಾ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜು: ವಾರ್ಷಿಕ ವಿಶೇಷ ಶಿಬಿರ

ಮಹಾತ್ಮಾ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜು: ವಾರ್ಷಿಕ ವಿಶೇಷ ಶಿಬಿರ

Date:

ಉಡುಪಿ, ನ.22: ಮಹಾತ್ಮಾ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜು, ಉಡುಪಿಯ ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್ ಕ್ರಾಸ್ ,ರೋವರ್ಸ್ ಮತ್ತು ರೇಂಜರ್ಸ್ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿರುವ 2025–26 ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರ 20-11-2025ರಿಂದ 26-11-2025ರವರೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕುಕ್ಕುಜೆ ಇಲ್ಲಿ ನಡೆಯಲಿದ್ದು ಶಿಬಿರವನ್ನು ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್(ರಿ.) ಮುನಿಯಾಲು ಅಧ್ಯಕ್ಷರಾದ ಉದಯ ಶೆಟ್ಟಿ ಮುನಿಯಾಲು ಉದ್ಘಾಟಿಸಿ ಮಾತನಾಡುತ್ತಾ, ಸಮಾಜಮುಖಿ ಚಟುವಟಿಕೆಗಳಿಗೆ ಇಂದಿನ ಕಾಲದಲ್ಲಿ ಎಲ್ಲರ ಸಹಕಾರ ಮತ್ತು ಬದ್ಧತೆ ಅತ್ಯಗತ್ಯವಾಗಿದೆ ಎಂದರು.

ಶಿಕ್ಷಣ, ಆರೋಗ್ಯ ಮತ್ತು ಸಾಮಾಜಿಕ ಸೇವೆ ಈ ಮೂರು ಕ್ಷೇತ್ರಗಳ ಬಲದಿಂದಲೇ ಒಂದು ಸಮೃದ್ಧ ಸಮಾಜವನ್ನು ನಿರ್ಮಿಸಬಹುದು ಎಂದು ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಡಾ. ದೇವಿದಾಸ್ ಎಸ್. ನಾಯಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸುಕೇಶ್ ಹೆಗ್ಡೆ, ಅಧ್ಯಕ್ಷರು, ಗ್ರಾಮ ಪಂಚಾಯತ್, ಕಡ್ತಲ, ಮಹೇಶ್ ಟಿ. ಎಂ. ಠಾಣಾಧಿಕಾರಿ, ಅಜೆಕಾರು ಪೋಲಿಸ್ ಠಾಣೆ, ಯೋಗೀಶ್ ಮಲ್ಯ ಅಧ್ಯಕ್ಷರು, ವ್ಯವಸ್ಥಾಪನಾ ಸಮಿತಿ, ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ, ಎಳ್ಳಾರೆ, ಹರೀಶ್ ಪಂಚಮಿ, ಪ್ರಧಾನ ಕಾರ್ಯದರ್ಶಿ ಪಂಚಮಿ ಚಾರಿಟೇಬಲ್ ಟ್ರಸ್ಟ್ (ರಿ.) ದೊಂಡೇರಂಗಡಿ, ಅಖಿಲೇಶ್ ಶೆಟ್ಟಿ, ಅಧ್ಯಕ್ಷರು ಸಾರ್ವಜನಿಕ ಗಣೇಶೋತ್ಸವ ಸಮಿತಿ, ದೊಂಡೇರಂಗಡಿ, ವಾಮನ ಭಟ್, ಅಧ್ಯಕ್ಷರು, ಹಳೆ ವಿದ್ಯಾರ್ಥಿ ಸಂಘ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ದೊಂಡೆರಂಗಡಿ, ದಯಾನಂದ ನಾಯಕ್‌ ಮುಖ್ಯೋಪಾಧ್ಯಾಯರು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದೊಂಡೇರಂಗಡಿ, ಪ್ರೊ.ವನಿತಾ ಮೈಯ್ಯ ಪ್ರಾಂಶುಪಾಲರು, ಮಹಾತ್ಮ ಗಾಂಧಿ ಸ್ಮಾರಕ ಕಾಲೇಜು, ಉಡುಪಿ, ಡಾ. ಎಂ. ವಿಶ್ವನಾಥ ಪೈ, ಉಪಪ್ರಾಂಶುಪಾಲರು, ಮಹಾತ್ಮಗಾಂಧಿ ಸ್ಮಾರಕ ಕಾಲೇಜು, ಉಡುಪಿ, ಡಾ.ಪ್ರಭಾಕರ್ ಶಾಸ್ತ್ರಿ, ISA ಫೌಂಡೇಶನ್, ಮಣಿಪಾಲ ಉಪಸ್ಥಿತರಿದ್ದರು.

ಶಿಬಿರದಲ್ಲಿ ಗ್ರಾಮ ಸ್ವಚ್ಛತೆ, ಆರೋಗ್ಯ ಜಾಗೃತಿ, ಪರಿಸರ ಸಂರಕ್ಷಣೆ, ಯುವಶಕ್ತಿ ವಿಕಾಸ ಮುಂತಾದ ಹಲವು ಸಮಾಜಮುಖಿ ಚಟುವಟಿಕೆಗಳನ್ನು ವಾರಪೂರ್ತಿ ಹಮ್ಮಿಕೊಳ್ಳಲಾಗಿದೆ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಾಧಿಕಾರಿಯಾದ ಸನತ್ ಕೋಟ್ಯಾನ್, ಯುವ ರೆಡ್ ಕ್ರಾಸ್ ಶಿಬಿರಾಧಿಕಾರಿ ದೀಪಿಕಾ ಹಾಗೂ ರೋವರ್ಸ್ ರೇಂಜರ್ಸ್ ಶಿಬಿರಾಧಿಕಾರಿಗಳಾದ ಅಕ್ಷತಾ ನಾಯಕ್ ಹಾಗೂ ಸ್ಟಾಲಿನ್ ಡಾನ್ಸನ್ ಡಿಸೋಜಾ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!