Saturday, July 25, 2026
Saturday, July 25, 2026

ಎಂ.ಜಿ.ಎಂ. ಸಂಧ್ಯಾ ಕಾಲೇಜು: ಸಂಸ್ಥಾಪನಾ ದಿನಾಚರಣೆ

ಎಂ.ಜಿ.ಎಂ. ಸಂಧ್ಯಾ ಕಾಲೇಜು: ಸಂಸ್ಥಾಪನಾ ದಿನಾಚರಣೆ

Date:

ಉಡುಪಿ, ಸೆ.6: ಎಂ.ಜಿ.ಎಂ ಸಂಧ್ಯಾ ಕಾಲೇಜಿನ 3ನೇ ಸಂಸ್ಥಾಪನಾ ದಿನಾಚರಣೆ ಶನಿವಾರ ನೂತನ ರವೀಂದ್ರ ಮಂಟಪದಲ್ಲಿ ನಡೆಯಿತು. ಗಣ್ಯರಿಂದ ಕಾಲೇಜಿನ ವಾರ್ಷಿಕ ಪತ್ರಿಕೆ “ಹೊರಿಜಾನ್” ಬಿಡುಗಡೆಗೊಂಡಿತು. ಶಿಕ್ಷಕರ ದಿನಾಚರಣೆಯ ಅಂಗವಾಗಿ ಕಾರ್ಯಕ್ರಮದಲ್ಲಿ ಹಿರಿಯ ಪ್ರಾಧ್ಯಾಪಕ ಡಾ. ಪ್ರಭಾಕರ್ ಶಾಸ್ತ್ರಿ ಅವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ. ಪ್ರಭಾಕರ್ ಶಾಸ್ತ್ರಿಯವರು, “ಗುರು-ಶಿಷ್ಯ ಸಂಬಂಧವೇ ಶಿಕ್ಷಣದ ನಿಜವಾದ ಬಲ” ಎಂದರು. ಒಟ್ಟು ರೂ. 9,10,000 ಮೌಲ್ಯದ ವಿದ್ಯಾರ್ಥಿವೇತನವನ್ನು ಎಂ.ಜಿ.ಎಂ ಕಾಲೇಜಿನ ಟ್ರಸ್ಟ್ ಅಧ್ಯಕ್ಷ ಟಿ. ಸತೀಶ್ ಯು. ಪೈ ವಿತರಿಸಿದರು. ಅತಿಥಿಗಳಾಗಿ ಎಂ.ಜಿ.ಎಂ. ಪಿಯು ಕಾಲೇಜು ಪ್ರಾಂಶುಪಾಲೆ ಮಾಲತಿದೇವಿ ಇವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಎಂ.ಜಿ.ಎಂ. ಕಾಲೇಜಿನ ಪ್ರಾಚಾರ್ಯೆ ಪ್ರೊ. ವನಿತಾ ಮಯ್ಯ ಸಮಾರೋಪ ಭಾಷಣವನ್ನು ಮಾಡಿದರು.

ಮಕುಬ ಕ್ರಿಯೇಷನ್ ರವರ ಸಹಯೋಗದ, ಎಂ.ಜಿ.ಎಂ ಸಂಧ್ಯಾ ಕಾಲೇಜಿನ ವಿದ್ಯಾರ್ಥಿಗಳು ಅಭಿನಯಿಸಿರುವ “ಟ್ರಾಕ್ “ಎಂಬ ಸಾಮಾಜಿಕ ಕೆಡುಕುಗಳನ್ನು ಪ್ರತಿಬಿಂಬಿಸುವ ಕಿರುಚಿತ್ರ ಬಿಡುಗಡೆಗೊಳಿಸಲಾಯಿತು. ವಿದ್ಯಾರ್ಥಿವೇತನ ಪಟ್ಟಿಯನ್ನು ಉಪನ್ಯಾಸಕಿ ಅಕ್ಷತಾ ನಾಯಕ್ ಮತ್ತು ಉಪನ್ಯಾಸಕ ಸನತ್ ಕೋಟ್ಯಾನ್ ವಾಚಿಸಿದರು. ಭೂಮಿಕಾ ಹಾಗೂ ತಂಡ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಎಂ.ಜಿ.ಎಂ ಸಂಧ್ಯಾ ಕಾಲೇಜಿನ ಪ್ರಾಚಾರ್ಯ ಡಾ. ದೇವಿದಾಸ್ ಎಸ್. ನಾಯಕ್ ಸ್ವಾಗತಿಸಿದರು. ಸನ್ಮಾನಿತರ ಪರಿಚಯವನ್ನು ಎಂ.ಜಿ.ಎಂ ಸಂಧ್ಯಾ ಕಾಲೇಜಿನ ಉಪಪ್ರಾಚಾರ್ಯ ಹಾಗೂ ಬಿಸಿಎ ಸಂಯೋಜಕರಾದ ಡಾ. ಎಂ. ವಿಶ್ವನಾಥ ಪೈ ವಾಚಿಸಿದರು. ಬಿಕಾಂ ಮತ್ತು ಬಿಬಿಎ ಸಂಯೋಜಕಿ ಡಾ.ಮಲ್ಲಿಕಾ ಎ. ಶೆಟ್ಟಿ ವಂದಿಸಿದರು. ಕಂಪ್ಯೂಟರ್ ಸೈನ್ಸ್ ವಿಭಾಗದ ಪ್ರಾಧ್ಯಾಪಕಿ ವರ್ಷಿಣಿ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!