Wednesday, July 29, 2026
Wednesday, July 29, 2026

ಟೇಕ್‌ಆಫ್ ವೇಳೆ ವಿಮಾನ ಪತನ, 18 ಸಾವು

ಟೇಕ್‌ಆಫ್ ವೇಳೆ ವಿಮಾನ ಪತನ, 18 ಸಾವು

Date:

ಕಠ್ಮಂಡು, ಜು.24: ನೇಪಾಳ ಕಠ್ಮಂಡುವಿನ ತ್ರಿಭುವನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕಾಫ್ ಆಗುವಾಗ ಸೌರ್ಯ ಏರ್‌ಲೈನ್ಸ್ ವಿಮಾನ ಪತನಗೊಂಡು ಹದಿನೆಂಟು ಜನರು ಸಾವನ್ನಪ್ಪಿದ್ದಾರೆ. ಈ ದುರಂತ ಬುಧವಾರ ಸಂಭವಿಸಿದೆ.

ಏನಾಗಿತ್ತು?: ಸೌರ್ಯ ಏರ್‌ಲೈನ್ಸ್‌ನ ಸಿಆರ್ ಜೆ7 ವಿಮಾನವು 19 ಜನರೊಂದಿಗೆ ರಿಪೇರಿ ಕೆಲಸಕ್ಕಾಗಿ ಉದ್ಯೋಗಿಗಳು ಮತ್ತು ತಂತ್ರಜ್ಞರೊಂದಿಗೆ ಪೋಖಾರಾಗೆ ಪ್ರಯಣ ಬೆಳೆಸಿತ್ತು. ಸ್ಥಳೀಯ ಕಾಲಮಾನ ಬೆಳಿಗ್ಗೆ 11.11 ಗಂಟೆಗೆ ತಾಂತ್ರಿಕ ಸಿಬ್ಬಂದಿಗಳನ್ನು ಹೊತ್ತು ಪ್ರಯಾಣ ಬೆಳೆಸಿದ ವಿಮಾನ ಬಲಕ್ಕೆ ತಿರುಗಿ ರನ್ ವೇಯ ಪೂರ್ವ ದಿಕ್ಕಿನಲ್ಲಿ ಪತನಗೊಂಡಿತು. ತಕ್ಷಣ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದ್ದರೂ, 18 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಘಟನೆಯಲ್ಲಿ ಪೈಲಟ್ ಮನೀಷ್ ಶಕ್ಯಾ (37) ಮಾತ್ರ ಬದುಕುಳಿದಿದ್ದು, ಗಾಯಗೊಂಡ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ದಂಬರ್ ಬಹದ್ದೂರ್ ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...

ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ

ಬ್ರಹ್ಮಾವರ, ಜು.28: ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ ಇದರ ಅಭಿವೃದ್ಧಿ ಮತ್ತು...
error: Content is protected !!