Sunday, January 19, 2025
Sunday, January 19, 2025

ಭಾರತ-ಅಮೆರಿಕ ಸಂಬಂಧ ಮತ್ತಷ್ಟು ಬೆಳೆಯಲಿದೆ: ಪ್ರಧಾನಿ ನರೇಂದ್ರ ಮೋದಿ

ಭಾರತ-ಅಮೆರಿಕ ಸಂಬಂಧ ಮತ್ತಷ್ಟು ಬೆಳೆಯಲಿದೆ: ಪ್ರಧಾನಿ ನರೇಂದ್ರ ಮೋದಿ

Date:

ವಾಷಿಂಗ್ಟನ್ ಡಿಸಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ವಾಷಿಂಗ್ಟನ್ ಡಿಸಿಯಲ್ಲಿ ಭೇಟಿಯಾದರು. ಇಬ್ಬರು ನಾಯಕರು ತಮ್ಮ ಮೊದಲ ಸಭೆಯಲ್ಲಿ ಹಲವಾರು ವಿಚಾರಗಳ ಬಗ್ಗೆ ಚರ್ಚಿಸಿದರು.

ಜೂನ್ 2021 ರಲ್ಲಿ ತಮ್ಮ ದೂರವಾಣಿ ಸಂಭಾಷಣೆಯನ್ನು ಉಭಯ ನಾಯಕರು ನೆನಪಿಸಿಕೊಂಡರು. ಕೋವಿಡ್ -19 ಪರಿಸ್ಥಿತಿ ಮತ್ತು ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸಲು ನಡೆಯುತ್ತಿರುವ ಪ್ರಯತ್ನಗಳ ಬಗ್ಗೆ ಚರ್ಚಿಸಿದರು. ಕೋವಿಡ್-19 ಸಂದರ್ಭದಲ್ಲಿ ಅಮೆರಿಕದ ಬೆಂಬಲವನ್ನು ಪ್ರಧಾನಿ ಮೋದಿ ಶ್ಲಾಘಿಸಿದರು.

ಭಾರತದ ಲಸಿಕಾ ಅಭಿಯಾನವನ್ನು ಮತ್ತು ಕೋವಿಡ್ ಸಾಂಕ್ರಾಮಿಕದ ವಿರುದ್ಧ ಭಾರತ ಅನುಸರಿಸಿದ ಕ್ರಮಗಳ ಬಗ್ಗೆ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಮೆಚ್ಚುಗೆ ವ್ಯಕ್ತಪಡಿಸಿದರು. ಅಫ್ಘಾನಿಸ್ತಾನದಲ್ಲಿನ ಬೆಳವಣಿಗೆಗಳು, ಮುಕ್ತ ಮತ್ತು ಅಂತರ್ಗತ ಇಂಡೋ-ಪೆಸಿಫಿಕ್ ಪ್ರದೇಶ ನಿರ್ಮಾಣ ಸೇರಿದಂತೆ ಪ್ರಾದೇಶಿಕ ಮತ್ತು ಜಾಗತಿಕ ಸಮಸ್ಯೆಗಳು ಮಾತುಕತೆಯಲ್ಲಿ ಪ್ರಮುಖವಾಗಿ ಕಂಡುಬಂದವು.

ಭಾರತ-ಅಮೆರಿಕ ಮತ್ತು ಕ್ವಾಡ್ ಹೊಸ ತಂತ್ರಜ್ಞಾನಗಳಲ್ಲಿ ಪಾಲುದಾರರನ್ನು ಬಲಪಡಿಸುವ ಅಗತ್ಯವಿದೆ ಎಂದು ಇಬ್ಬರೂ ನಾಯಕರು ಒಪ್ಪಿಕೊಂಡರು.

ಹವಾಮಾನ ಬದಲಾವಣೆಯ ಮೇಲೆ ಭಾರತ ಅಮೆರಿಕ ಜಂಟಿ ಕ್ರಮದ ಮಹತ್ವವನ್ನು ಎರಡೂ ಕಡೆಯವರು ಒಪ್ಪಿಕೊಂಡರು. ನವೀಕರಿಸಬಹುದಾದ ಇಂಧನ ಮತ್ತು ಭಾರತದ ನೇತೃತ್ವದಲ್ಲಿ ಇತ್ತೀಚೆಗೆ ಆರಂಭವಾದ ರಾಷ್ಟ್ರೀಯ ಹೈಡ್ರೋಜನ್ ಮಿಷನ್ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಉಲ್ಲೇಖಿಸಿದರು. ಪರಿಸರ ಸುಸ್ಥಿರತೆಯನ್ನು ಉತ್ತೇಜಿಸಲು ಜೀವನಶೈಲಿಯ ಬದಲಾವಣೆಗಳ ಮಹತ್ವವನ್ನು ಮೋದಿ ಒತ್ತಿ ಹೇಳಿದರು.

ಬಾಹ್ಯಾಕಾಶ ಸಹಕಾರ, ಮಾಹಿತಿ ತಂತ್ರಜ್ಞಾನ, ವಿಶೇಷವಾಗಿ ಉದಯೋನ್ಮುಖ ಮತ್ತು ನಿರ್ಣಾಯಕ ತಂತ್ರಜ್ಞಾನಗಳು, ಜೊತೆಗೆ ಆರೋಗ್ಯ ಕ್ಷೇತ್ರದಲ್ಲಿ ಸಹಕಾರ ಸೇರಿದಂತೆ ಭವಿಷ್ಯದ ಸಹಯೋಗದ ಕ್ಷೇತ್ರಗಳ ಬಗ್ಗೆಯೂ ಮೋದಿ-ಹ್ಯಾರಿಸ್ ಚರ್ಚಿಸಿದರು. ಉಭಯ ನಾಯಕರು ಎರಡೂ ದೇಶಗಳ ನಡುವೆ ಜ್ಞಾನ, ನಾವೀನ್ಯತೆ ಮತ್ತು ಪ್ರತಿಭೆಯ ಹರಿವಿನ ಬಗ್ಗೆ ಮಾತನಾಡಿದರು.

ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಮತ್ತು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ನೇತೃತ್ವದಲ್ಲಿ ಭಾರತ-ಅಮೆರಿಕ ಸಂಬಂಧಗಳು ಮತ್ತಷ್ಟು ಬೆಳೆಯಲಿದೆ ಎಂಬ ವಿಶ್ವಾಸವನ್ನು ಪ್ರಧಾನಿ ನರೇಂದ್ರ ಮೋದಿ ವ್ಯಕ್ತಪಡಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!