Tuesday, July 28, 2026
Tuesday, July 28, 2026

ಹೆಲಿಕಾಪ್ಟರ್ ಪತನ: ಇರಾನ್ ಅಧ್ಯಕ್ಷ ರೈಸಿ, ವಿದೇಶಾಂಗ ಸಚಿವ ಸಾವು

ಹೆಲಿಕಾಪ್ಟರ್ ಪತನ: ಇರಾನ್ ಅಧ್ಯಕ್ಷ ರೈಸಿ, ವಿದೇಶಾಂಗ ಸಚಿವ ಸಾವು

Date:

ಟೆಹ್ರಾನ್, ಮೇ 20: ಹೆಲಿಕಾಪ್ಟರ್ ಅವಘಡದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ವಿದೇಶಾಂಗ ಸಚಿವ ಹುಸೇನ್ ಅಮೀರ್ ಅಬ್ದುಲ್ಲಾಹಿಯಾನ್ ಸಾವನ್ನಪ್ಪಿದ್ದಾರೆ. ಅಧ್ಯಕ್ಷ ರೈಸಿ ಅವರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಪತನಗೊಂಡ ಸ್ಥಳವು ಸೋಮವಾರ ಮುಂಜಾನೆ ದಟ್ಟವಾದ ಕಾಡಿನ ಪರ್ವತಗಳಲ್ಲಿ ಪತ್ತೆಯಾಗಿದೆ.

ಏನಾಗಿತ್ತು?: ಅಧ್ಯಕ್ಷ ರೈಸಿ ಅಜರ್‌ಬೈಜಾನ್‌ಗೆ ಭೇಟಿ ನೀಡಿದ ನಂತರ ಇರಾನ್‌ಗೆ ಹಿಂದಿರುಗುತ್ತಿದ್ದಾಗ ಭಾನುವಾರ ಮಧ್ಯಾಹ್ನ ಅವರ ಹೆಲಿಕಾಪ್ಟರ್ ಪ್ರತಿಕೂಲ ಹವಾಮಾನದಿಂದ ಪತನಗೊಂಡಿದೆ. ಪತನಗೊಂಡ ಹೆಲಿಕಾಪ್ಟರ್‌ನಲ್ಲಿ ಅಧ್ಯಕ್ಷ ರೈಸಿ ಸಹಿತ ಒಂಬತ್ತು ಮಂದಿ ಇದ್ದರು.

ಪ್ರಧಾನಿ ಸಂತಾಪ: ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್‌ನ ಅಧ್ಯಕ್ಷ ಡಾ. ಸೈಯದ್ ಇಬ್ರಾಹಿಂ ರೈಸಿ ಅವರ ನಿಧನದಿಂದ ತೀವ್ರ ದುಃಖ ಮತ್ತು ಆಘಾತವಾಗಿದೆ. ಭಾರತ-ಇರಾನ್ ದ್ವಿಪಕ್ಷೀಯ ಸಂಬಂಧವನ್ನು ಬಲಪಡಿಸುವಲ್ಲಿ ಅವರ ಕೊಡುಗೆ ಯಾವಾಗಲೂ ಸ್ಮರಣೀಯವಾಗಿದೆ. ಈ ದುಃಖದ ಸಮಯದಲ್ಲಿ ಭಾರತ ಇರಾನ್ ಜೊತೆ ನಿಂತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನರೇಂದ್ರ ಎಸ್ ಗಂಗೊಳ್ಳಿಗೆ ಕಾವ್ಯಶ್ರೀ ಪ್ರಶಸ್ತಿ

ಗಂಗೊಳ್ಳಿ, ಜು.27: ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನಹಡಗಲಿ ವತಿಯಿಂದ ಕೊಡಲ್ಪಡುವ...

ಕಾಮನ್‌ವೆಲ್ತ್ ಕ್ರೀಡಾಕೂಟ: ಮುಂದುವರಿದ ಭಾರತದ ಪದಕ ಬೇಟೆ

ಯು.ಬಿ.ಎನ್.ಡಿ., ಜು.27: ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟರ್ ಜ್ಞಾನೇಶ್ವರಿ...

ಸಂಸ್ಕೃತ ಪ್ರತಿಭಾ ಪುರಸ್ಕಾರ

ಉಡುಪಿ, ಜು.27: ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಶೀರೂರು...
error: Content is protected !!