ಮಾಸ್ಕೋ, ಜು.9: ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಷ್ಯಾದ ಅತ್ಯಂತ ಪ್ರತಿಷ್ಠಿತ ನಾಗರಿಕ ಗೌರವವಾದ ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದಿ ಅಪೊಸ್ತಲ್ ನೀಡಿ ಗೌರವಿಸಲಾಯಿತು. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಮಂಗಳವಾರ ಮೋದಿ ಅವರನ್ನು ಗೌರವಿಸಿದರು. ರಷ್ಯಾ ಮತ್ತು ಭಾರತದ ನಡುವೆ ವ್ಯೂಹಾತ್ಮಕ ಪಾಲುದಾರಿಕೆಯನ್ನು ಅಭಿವೃದ್ಧಿಪಡಿಸಲು ಮತ್ತು ಉಭಯ ದೇಶಗಳ ನಡುವೆ ಸೌಹಾರ್ದ ಸಂಬಂಧವನ್ನು ಬೆಳೆಸಲು ಪ್ರಧಾನಿ ಮೋದಿಯವರ ವಿಶಿಷ್ಟ ಕೊಡುಗೆಯನ್ನು ಗುರುತಿಸಿ ಈ ಗೌರವವನ್ನು ನೀಡಲಾಯಿತು. ಈ ಪ್ರಶಸ್ತಿಯನ್ನು 1698 ರಲ್ಲಿ ತ್ಸಾರ್ ಪೀಟರ್ ದಿ ಗ್ರೇಟ್ ಅವರು ರಷ್ಯಾದ ಮೊದಲ ಧರ್ಮಪ್ರಚಾರಕ ಮತ್ತು ಸಂತರಾದ ಸೇಂಟ್ ಆಂಡ್ರ್ಯೂ ಅವರ ಗೌರವಾರ್ಥವಾಗಿ ಸ್ಥಾಪಿಸಿದರು.
ಪ್ರಧಾನಿ ಮೋದಿಗೆ ರಷ್ಯಾದ ಅತ್ಯುನ್ನತ ನಾಗರಿಕ ಗೌರವ ‘ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದಿ ಅಪೊಸ್ತಲ್’ ಪ್ರದಾನ
ಪ್ರಧಾನಿ ಮೋದಿಗೆ ರಷ್ಯಾದ ಅತ್ಯುನ್ನತ ನಾಗರಿಕ ಗೌರವ ‘ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದಿ ಅಪೊಸ್ತಲ್’ ಪ್ರದಾನ
Date: