ಲಂಡನ್: ಯುನೈಟೆಡ್ ಕಿಂಗ್ಡಮ್ ನಲ್ಲಿ ಒಮಿಕ್ರಾನ್ ಪತ್ತೆಯಾದ ನಂತರ ಕೊರೊನಾ ಪ್ರಕರಣಗಳಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಳವಾಗಿದೆ.
ಬುಧವಾರ 1,06,122 ಪ್ರಕರಣಗಳು ಪತ್ತೆಯಾಗಿವೆ. ಕೊರೊನಾ ಸಂದರ್ಭದಲ್ಲಿ ದಾಖಲಾದ ಗರಿಷ್ಠ ಪ್ರಕರಣ ಇದಾಗಿದೆ. ಕಳೆದ 7 ದಿನಗಳಲ್ಲಿ 6,43,219 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.
ಒಮಿಕ್ರಾನ್ ಪತ್ತೆಯಾದ ನಂತರ ಜಾಗತಿಕ ಮಟ್ಟದಲ್ಲಿ ಅತ್ಯಧಿಕ ಸೋಂಕು ಇಂಗ್ಲೆಂಡ್ ನಲ್ಲಿ ಕಂಡುಬರುತ್ತಿರುವುದು ಸರಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ.
ಕಳೆದ 24 ಗಂಟೆಗಳಲ್ಲಿ 140 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಪರಿಸ್ಥಿತಿಯ ಬಗ್ಗೆ ನಿಗಾ ವಹಿಸುತ್ತಿದ್ದೇವೆ ಎಂದು ಪ್ರಧಾನಿ ಬೊರಿಸ್ ಜಾನ್ಸನ್ ಹೇಳಿದ್ದಾರೆ.