Home ಸುದ್ಧಿಗಳು ಕ್ರೈಂ ಬಂಟ್ವಾಳ- ಸಾಮೂಹಿಕ ಅತ್ಯಾಚಾರ; ಆರೋಪಿಗಳ ಬಂಧನ

ಬಂಟ್ವಾಳ- ಸಾಮೂಹಿಕ ಅತ್ಯಾಚಾರ; ಆರೋಪಿಗಳ ಬಂಧನ

701
0

ಬಂಟ್ವಾಳ: ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಘಟನೆ ಬಂಟ್ವಾಳದ ಅಮ್ಟಾಡಿಯಲ್ಲಿ ನಡೆದಿದೆ.

ಬಾಲಕಿ ತನ್ನ ಮನೆಯಿಂದ ಶಾಲೆಗೆ ಹೋಗುವ ಸಂದರ್ಭದಲ್ಲಿ ಬಿಳಿ ಬಣ್ಣದ ಕಾರಿನಲ್ಲಿ ಬಂದ ದುರುಳರು ಅಕೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದಾರೆ. ಈ ಕುರಿತು ಬಾಲಕಿ ದೂರು ನೀಡುವ ಸಂದರ್ಭದಲ್ಲಿ ಹೇಳಿಕೆ ನೀಡಿದ್ದಾಳೆ. ಬಾಲಕಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಅಪ್ರಾಪ್ತ ಬಾಲಕಿಯನ್ನು ಚಾಕಲೇಟ್ ನೀಡಿ ದುರುಳರು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ ಎಂದು ಹೇಳಲಾಗುತ್ತಿದೆ. ಬಳಿಕ ಆಕೆಯನ್ನು ಬಂಟ್ವಾಳದ ಟೋಲ್ ಗೇಟ್ ಒಂದರ ಬಳಿ ಆರೋಪಿಗಳು ಬಿಟ್ಟು ಹೋಗಿದ್ದಾರೆ ಎಂದು ಹೇಳಲಾಗುತ್ತಿದ್ದು, ಈ ದೃಶ್ಯಾವಳಿಗಳು ಟೋಲ್ ಗೇಟ್ ಬಳಿಯ ಸಿಸಿಟಿವಿಯಲ್ಲಿ ದಾಖಲಾಗಿದೆ.

ಘಟನೆ ಬೇಸರ ತಂದಿದೆ: ಕೇಂದ್ರ ಸಚಿವ
ಘಟನೆ ಬೇಸರ ತಂದಿದೆ. ಇದು ನಡೆಯಬಾರದಿತ್ತು. ಅತ್ಯಾಚಾರಿಗಳ ಬಂಧನವಾಗಿದೆ. ಕರ್ನಾಟಕ ಪೊಲೀಸರು ತಕ್ಷಣ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಸಂಭವಿಸಬಾರದು, ಕಟ್ಟುನಿಟ್ಟಿನ ಕ್ರಮಗಳನ್ನು ಸರಕಾರ ಕೈಗೊಳ್ಳಬೇಕು ಎಂಬ ಸಲಹೆಯನ್ನು ಕರ್ನಾಟಕ ಸರಕಾರಕ್ಕೆ ನೀಡಿದ್ದೇನೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಘಟನೆಯ ಕುರಿತು ಪ್ರತಿಕ್ರಯಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.