Saturday, November 23, 2024
Saturday, November 23, 2024

ಯುವತಿಗೆ ಇರಿದು ಆತ್ಮಹತ್ಯೆಗೆ ಯತ್ನಿಸಿದ ಯುವಕ

ಯುವತಿಗೆ ಇರಿದು ಆತ್ಮಹತ್ಯೆಗೆ ಯತ್ನಿಸಿದ ಯುವಕ

Date:

ಉಡುಪಿ: ಯುವತಿಯನ್ನು ಮನಬಂದಂತೆ ಇರಿದು ಯುವಕನೋರ್ವ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮವಾರ ಸಂಜೆ ಉಡುಪಿ ಸಂತೆಕಟ್ಟೆಯ ಆಶೀರ್ವಾದ ಚಿತ್ರಮಂದಿರದ ಬಳಿ ರಾಷ್ಟ್ರ‍ೀಯ ಹೆದ್ದಾರಿ 66ರ ಸನಿಹ ನಡೆದಿದೆ.

ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಯುವಕ ಆಕೆಗೆ ಮನಬಂದಂತೆ ಇರಿದು ಆಕೆ ಕುಸಿದಾಗ ತಾನೂ ಇರಿದುಕೊಂಡ. ರಕ್ತದ ಮಡುವಿನಲ್ಲಿ ಬಿದ್ದ ಇಬ್ಬರನ್ನೂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ಲಭ್ಯವಾಗಬೇಕಿದೆ. ಇಬ್ಬರ ಸ್ಥಿತಿ ಗಂಭೀರವಾಗಿದೆ.

ಮೂಲಗಳ ಪ್ರಕಾರ ಯುವತಿ ಅಂಬಾಗಿಲು ನಿವಾಸಿಯಾಗಿದ್ದು, ಕೆಲವು ದಿನಗಳ ಹಿಂದೆಯಷ್ಟೇ ನಿಶ್ಚಿತಾರ್ಥವಾಗಿತ್ತು. ಘಟನೆಗೆ ಯಾವ ಕಾರಣವಿರಬಹುದು ಎಂಬುದು ಹೆಚ್ಚಿನ ಮಾಹಿತಿ ಲಭ್ಯವಾದ ನಂತರವೇ ಸ್ಪಷ್ಟವಾಗಲಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ. 

ಇರಿತಕ್ಕೊಳಗಾದ ಯುವತಿ ಸಾವು:

ಇರಿತಕ್ಕೊಳಗಾದ ಅಂಬಾಗಿಲು ನಿವಾಸಿ ಸೌಮ್ಯಶ್ರೀ (28) ಮೃತಪಟ್ಟಿದ್ದು ಆಕೆಯನ್ನು ಕೊಲೆ ಮಾಡಿದವ ಅಲೆವೂರು ರಾಮ್ಪುರ ನಿವಾಸಿ ಸಂದೇಶ್ ಕುಲಾಲ್(28) ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ, ಸಂತೆಕಟ್ಟೆಯ ರಾಷ್ಟ್ರ‍ೀಕೃತ ಬ್ಯಾಂಕ್ ಒಂದರಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸಕ್ಕೆ ಇದ್ದ ಸೌಮ್ಯಶ್ರೀ ಹಾಗೂ ಬೇರೊಂದು ಉದ್ಯೋಗದಲ್ಲಿದ್ದ ಸಂದೇಶ್ ಕುಲಾಲ್ ಕೆಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಸೌಮ್ಯಶ್ರೀಯವರಿಗೆ ಕೆಲವು ದಿನಗಳ ಹಿಂದೆಯಷ್ಟೇ ಬೇರೊಬ್ಬರ ಜೊತೆಗೆ ನಿಶ್ಚಿತಾರ್ಥವಾಗಿತ್ತು. ಇದರಿಂದ ಕುಪಿತಗೊಂಡಿದ್ದ ಸಂದೇಶ ಸೋಮವಾರ ಸಂಜೆ ಸೌಮ್ಯಶ್ರೀ ಕೆಲಸ ಮುಗಿಸಿ ಮನೆಗೆ ಹೋಗುವುದನ್ನು ಹೊಂಚು ಹಾಕಿ ಕುಳಿತಿದ್ದು ಆಕೆಯನ್ನು ಹಿಂಬಾಲಿಸಿಕೊಂಡು ಆಶೀರ್ವಾದ ಪೆಟ್ರೋಲ್ ಪಂಪ್ ಬಳಿ ಆಕೆಯ ವಾಹನವನ್ನು ಅಡ್ಡಗಟ್ಟಿ ಮನಬಂದಂತೆ ಸೌಮ್ಯಶ್ರೀಗೆ ಇರಿದು ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ.

ಇಬ್ಬರೂ ರಕ್ತದ ಮಡುವಿನಲ್ಲಿ ಬಿದ್ದಿದ್ದು ಸ್ಥಳೀಯರು ತಕ್ಷಣ ಇಬ್ಬರನ್ನೂ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಸೌಮ್ಯಶ್ರೀ ವಿಪರೀತ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾರೆ. ಸೌಮ್ಯಶ್ರೀಯನ್ನು ಕೊಲೆಮಾಡಿದ ಸಂದೇಶ್ ಕುಲಾಲ್ ಸ್ಥಿತಿ ಗಂಭೀರವಾಗಿದೆ. ಉಡುಪಿ ನಗರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತಿಹಾಸದ ಅವಲೋಕನ ಬದುಕಿನ ಪುನರ್ ವಿಮರ್ಶೆಗೆ ಸಹಾಯಕ: ಶಬಾನ್ ಅಂಜುಮ್

ಕೋಟ, ನ.22: ಇತಿಹಾಸದ ಪಿತಾಮಹ ಹೆರೋಡಟಸ್ ಸಂಸ್ಕೃತಿಗಳ ತಿಳಿಯಲು ಒಂದು ಉತ್ತಮ...

ಆನಂದತೀರ್ಥ: ವಾರ್ಷಿಕ ಕ್ರೀಡಾಕೂಟ

ಕಟಪಾಡಿ, ನ.22: ಪೇಜಾವರ ಮಠದ ಆಡಳಿತಕ್ಕೊಳಪಟ್ಟ ಪಾಜಕ ಆನಂದತೀರ್ಥ ಪ.ಪೂ ಕಾಲೇಜು...

ಸಾಂಸ್ಕೃತಿಕ ಸ್ಪರ್ಧೆ: ಮಣಿಪಾಲ ಜ್ಞಾನಸುಧಾದ ವಿದ್ಯಾರ್ಥಿಗಳ ಅಮೋಘ ಸಾಧನೆ

ಉಡುಪಿ, ನ.22: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಮತ್ತು ಶಾಲಾ ಶಿಕ್ಷಣ...

ಅರುಣ್ಯಾ 2024: ಭಂಡಾರಕಾರ್ಸ್ ಪಿಯು ಕಾಲೇಜು ತಂಡ ಚಾಂಪಿಯನ್

ಬಸ್ರೂರು, ನ.22: ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿ ಉಡುಪಿ ಜಿಲ್ಲಾಮಟ್ಟದ...
error: Content is protected !!