ರಾಜ್ಯದ ಕರಾವಳಿ ಭಾಗದಲ್ಲಿ ಜುಲೈ 9ರಿಂದ ಜುಲೈ 12ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ 9ರಂದು ಕರಾವಳಿ ಭಾಗದ ಹಲವೆಡೆ 64.5ಮಿಮಿ ಮಳೆಯಾಗುವ ಸಾಧ್ಯತೆಯಿದ್ದು, ಜುಲೈ 10ರಿಂದ ಜುಲೈ 12ರವರೆಗೆ 64.5ಮಿಮಿ-115.6 ಮಿಮಿ ಅಥವಾ ಅದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
