ಉಡುಪಿ: ರಾಜ್ಯದ ಕರಾವಳಿ ಜಿಲ್ಲೆಗಳ ಹಲವೆಡೆ ಸೆಪ್ಟೆಂಬರ್ 5ರಿಂದ ಸೆಪ್ಟೆಂಬರ್ 9ರವರೆಗೆ ಭಾರಿ ಮಳೆಯಾಗಲಿದೆ. ಮೊದಲ ಮೂರು ದಿನ 124.5 ಮಿಮಿ ಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಇನ್ನುಳಿದ ಎರಡು ದಿನಗಳಲ್ಲಿ 64.5ಮಿಮಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
