ರಾಜ್ಯದ ಕರಾವಳಿ ಜಿಲ್ಲೆಗಳ ಹಲವೆಡೆ ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಇದು ಇದೇ ರೀತಿ ಜುಲೈ 18 ರವರೆಗೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜುಲೈ 14 ರಿಂದ 17 ರವರೆಗೆ ಮಳೆಯ ಪ್ರಮಾಣ 115.6 ಮಿಮಿ-204.4 ಮಿಮಿ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
