ಸಿಡ್ನಿ, ಫೆ. 7: ಆಸ್ಟ್ರೇಲಿಯಾ ಕ್ರಿಕೆಟ್ ತಂಡವನ್ನು 76 ಟಿ20 ಪಂದ್ಯಗಳಲ್ಲಿ, 55 ಏಕದಿನ ಪಂದ್ಯಗಳಲ್ಲಿ ಮುನ್ನಡೆಸಿದ, ಟಿ20 ತಂಡದ ನಾಯಕ ಆರೋನ್ ಫಿಂಚ್ ಅವರು ಮಂಗಳವಾರ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದಾರೆ.
ಆರೋನ್ ಫಿಂಚ್ ಇಂಗ್ಲೆಂಡ್ ವಿರುದ್ಧ 2011ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. 254 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿರುವ ಆರೋನ್ ಫಿಂಚ್ 19 ಶತಕಗಳೊಂದಿಗೆ 8804 ರನ್‌ಗಳನ್ನು ಸಿಡಿಸಿದ್ದಾರೆ. ಇಲ್ಲಿಯವರೆಗೂ 103 ಟಿ20 ಪಂದ್ಯಗಳಾಡಿರುವ ಅವರು, 76 ಪಂದ್ಯಗಳನ್ನು ಆಸ್ಟ್ರೇಲಿಯಾ ತಂಡವನ್ನು ಮುನ್ನಡೆಸಿದ್ದಾರೆ.
2018 ರಲ್ಲಿ ಜಿಂಬಾಬ್ವೆ ವಿರುದ್ಧ 76 ಎಸೆತಗಳಲ್ಲಿ 172 ರನ್ (10X6, 16X4) ಗಳಿಸುವ ಮೂಲಕ ಆರೋನ್ ಫಿಂಚ್ ಟಿ 20 ಅಂತರರಾಷ್ಟ್ರೀಯ ಕ್ರಿಕೆಟ್ ನಲ್ಲಿ ಅತಿ ಹೆಚ್ಚು ಸ್ಕೋರ್ ಮಾಡಿದ ದಾಖಲೆಯನ್ನು ಹೊಂದಿದ್ದಾರೆ.